ಉಡುಪಿ | ನೇಜಾರು ಕೊಲೆ ಪ್ರಕರಣ; ಸಂತ್ರಸ್ತರ ಮನೆಗೆ ಕ್ರೈಸ್ತ ಧರ್ಮಪ್ರಾಂತ್ಯದ ನಿಯೋಗ ಭೇಟಿ 

Date:

ಉಡುಪಿ ಜಿಲ್ಲೆಯ ನೇಜಾರಿನಲ್ಲಿ ಇತ್ತೀಚೆಗೆ ತಾಯಿ ಮತ್ತು ಮೂರು ಮಕ್ಕಳ ಕೊಲೆ ನಡೆದ ಮನೆಗೆ ಉಡುಪಿ ಕ್ಯಾಥಲಿಕ್‌ ಕ್ರೈಸ್ತ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಜೆರಾಲ್ಡ್ ಐಸಾಕ್ ಲೋಬೊ ಅವರ ಪ್ರತಿನಿಧಿಗಳು ಮತ್ತು ಸಮನ್ವಯ ಸೌಹಾರ್ದ ಸಮಿತಿ ತೊಟ್ಟಾಂ ಇದರ ಪದಾಧಿಕಾರಿಗಳು ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಉಡುಪಿ ಧರ್ಮಪ್ರಾಂತ್ಯದ ಗುರು ಮೊನ್ಷಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ಘಟನೆಯ ಕುರಿತು ಅತೀವ ಆಘಾತ ಮತ್ತು ನೋವನ್ನು ವ್ಯಕ್ತಪಡಿಸಿದ್ದು, “ಇಂತಹ ಘಟನೆ ಬುದ್ದಿವಂತರ ಜಿಲ್ಲೆಯಾದ ಉಡುಪಿಯಲ್ಲಿ ನಡೆದಿರುವುದು ಆಘಾತಕಾರಿಯಾಗಿದ್ದು, ನೂರ್ ಮಹಮ್ಮದ್ ಮತ್ತು ಅವರ ಪುತ್ರ ಹಾಗೂ ಇಡೀ ಕುಟುಂಬದ ನೋವಿನಲ್ಲಿ ಕ್ರೈಸ್ತ ಸಮುದಾಯ ಭಾಗಿಯಾಗಿದೆ. ಘಟನೆಗೆ ಕಾರಣನಾದ ಆರೋಪಿಯನ್ನು ಕೂಡಲೇ ಬಂಧಿಸಿರುವ ಜಿಲ್ಲೆಯ ಪೊಲೀಸರ ಕಾರ್ಯ ಶ್ಲಾಘನೀಯವಾಗಿದೆ” ಎಂದು ನೂರ್ ಮಹಮ್ಮದ್ ಮತ್ತವರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಜಗಳ ಬಿಡಿಸಲು ಬಂದ ಪೊಲೀಸರ ವಾಹನವನ್ನೇ ಕದ್ದೊಯ್ದ ಭೂಪ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಡೆನಿಸ್ ಡೆಸಾ, ಸಮನ್ವಯ ಸೌಹಾರ್ದ ಸಮಿತಿ ತೊಟ್ಟಂ ಇದರ ಸಂಚಾಲಕ ಆಗ್ನೆಲ್ ಫೆರ್ನಾಂಡಿಸ್, ಸದಸ್ಯರುಗಳಾದ ಸುನಿಲ್ ಫೆರ್ನಾಂಡಿಸ್, ಲೆಸ್ಲಿ ಆರೋಝಾ, ಬ್ಲೆಸಿಲ್ಲಾ ಕ್ರಾಸ್ತಾ, ಪ್ರಸಾದ್, ಪ್ರಭಾಕರ್, ಕಾಂಗ್ರೆಸ್ ಮುಖಂಡ ಎಂ ಎ ಗಫೂರ್ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...