ಉಡುಪಿ | ಖಾಸಗಿ ಬಸ್‌-ಬೊಲೆರೊ ಮುಖಾಮುಖಿ ಡಿಕ್ಕಿ; ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

Date:

ಖಾಸಗಿ ಬಸ್‌ ಮತ್ತು ಬೊಲೆರೊ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ.

ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಮಂಜರ್ಪಲ್ಕೆ ಎಂಬಲ್ಲಿ ನಂದಳಿಕೆ ಕಡೆಯಿಂದ ಬರುತ್ತಿದ್ದ ಬೊಲೆರೊ ಕಾರು ಹಾಗೂ ಕಾರ್ಕಳ ಕಡೆಯಿಂದ ಬರುತ್ತಿದ್ದ ಮುಂಬೈ ಬಸ್ಸಿಗೆ ಢಿಕ್ಕಿ ಹೊಡೆದ ಪರಿಣಾಮ ಘಟನೆ ಸಂಭವಿಸಿದೆ.

ಚಿಕ್ಕಮಗಳೂರು ಜಿಲ್ಲೆಯ ಜಯಪುರ ನಿವಾಸಿ ಶಿವಪ್ಪ(48) ಸ್ಥಳದಲ್ಲೇ ಮೃತಪಟ್ಟರೆ, ಮಂಜು(45), ಸುಜಯ್(28)ಅವರ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಕಳ ತಾಲೂಕಿನ ನಂದಳಿಕೆಯ ತಮ್ಮ ಕುಟುಂಬದ ಮನೆಗೆ ದೇವರ ಕಾರ್ಯಕ್ಕಾಗಿ ಚಿಕ್ಕಮಗಳೂರು ಜಿಲ್ಲೆಯ ಜಯಪುರದಿಂದ ನಂದಳಿಕೆಗೆ ಬೆಳಿಗ್ಗೆ ಬಂದಿದ್ದ ಕುಟುಂಬದ ಸದಸ್ಯರು ಮನೆಯಲ್ಲಿ ಪೂಜೆ ಮುಗಿಸಿ ಮಧ್ಯಾಹ್ನದ ಭೋಜನ ಮುಗಿಸಿ ಹಿಂದಿರುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಮೃತರಾಗಿರುವ ಕುಟುಂಬದ ಗುರಿಕಾರ ಶಿವಪ್ಪನವರೇ ಮುಂದೆನಿಂತು ದೈವದ ಕೆಲಸದ ವಿಧಿವಿಧಾನಗಳನ್ನು ನಡೆಸಿಕೊಟ್ಟಿದ್ದರು ಎಂದು‌ ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಕೆಎಸ್‌ಆರ್‌ಟಿಸಿ ಬಸ್‌ ಚಾಲಕನಿಗೆ ಹಲ್ಲೆ; ಖಾಸಗಿ ಬಸ್‌ ಮಾಲೀಕನ ವಿರುದ್ಧ ಎಫ್ಐಆರ್

ಬಸ್ಸಿನಲ್ಲಿದ್ದ 12 ಮಂದಿ ಪ್ರಯಾಣಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾರ್ಕಳ ರೋಟರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಘಟನಾ ಸ್ಥಳಕ್ಕೆ ಅಗಮಿಸಿದ 108 ಆಂಬುಲೆನ್ಸ್ ಸಿಬ್ಬಂದಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...