ಉಡುಪಿ | ನಾಳೆ ಡಿ.14, ಪ್ರಥಮ ಬಾರಿಗೆ ಕೊರಿಯನ್ ತಂಡದಿಂದ ಕ್ರಿಸ್ಮಸ್ ಕ್ರಿಸ್ತೋತ್ಸವ – 2024

Date:

ಕ್ರಿಸ್ಮಸ್ ಹಬ್ಬ ಬಂದಿದೆ. ಹರುಷ ಜಗಕೆ ತಂದಿದೆ. ಸುಗುಣ ಶಾಂತಿ ಬೀರಿದೆ. ಇದು ಸಂಭ್ರಮ ಮತ್ತು ಸಡಗರದ ಸಮಯ. ಉಡುಪಿಯ ಯುನೈಟೆಡ್ ಕ್ರಿಶ್ಚಿಯನ್ ಫೋರಂ, ಲೊಂಬಾರ್ಡ್ ಮಿಶನ್ ಆಸ್ಪತ್ರೆ, ಕರ್ನಾಟಕ ಯುವಕ ಸಂಘ ಮತ್ತು ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿಯ ಸಹಯೋಗದೊಂದಿಗೆ “ಕ್ರಿಸ್ಮಸ್ ಕ್ರಿಸ್ತೋತ್ಸವ -2024” ಎಂಬ ವಿಶಿಷ್ಠ ಕಾರ್ಯಕ್ರಮ ಆಯೋಜಿಸಲು ಮತ್ತು ಹಬ್ಬದ ಸಂತೋಷವನ್ನು ಇಮ್ಮಡಿಗೊಳಿಸಲು ಉಡುಪಿ ಜಿಲ್ಲೆ ಸಿದ್ದವಾಗಿದೆ ಎಂದು ಕಾರ್ಯಕ್ರಮ ಆಯೋಜನಾ ಸಮಿತಿಯ ಸಂಚಾಲಕ ಡಾ. ಸುಶೀಲ್ ಜತ್ತನ್ನ ಹೇಳಿದರು.

ಉಡುಪಿಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಉಡುಪಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಇಂತಹ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಡಿಸೆಂಬರ್ 14 ರಂದು ಶನಿವಾರ ಉಡುಪಿ ಕ್ರಿಶ್ಚಿಯನ್ ಪಿಯು ಕಾಲೇಜಿನ ಮೈದಾನದಲ್ಲಿ ನಡೆಯಲಿದೆ. ಕ್ರಿಸ್ತೋತ್ಸವ ಕಾರ್ಯಕ್ರಮವು ನೆರೆದ ಸಭಿಕರಿಗೆ ಸಾಂಸ್ಕೃತಿಕ ಮತ್ತುಆಧ್ಯಾತ್ಮಿಕ ಹಬ್ಬದ ಊಟವನ್ನು ಉಣ ಬಡಿಸಲಿದೆ ಎಂದರು.

ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ|ಡೆನಿಸ್ ಡೆಸಾ ಮಾತನಾಡಿ ಇಟಾಲಿಯನ್ ಮತ್ತು ಲ್ಯಾಟಿನ್ ಭಾಷೆಯಿಂದ ಉದಯಿಸಿದ “ಕಂಟಾಟ” ಎಂಬ ಪದವು ಕೋರಸ್ ಅಥವಾ ಸಂಗೀತದೊಂದಿಗೆ ಕವಿತೆ ಅಥವಾ ಕಥೆಗೆ ಸಂಗೀತ ಸಂಯೋಜನೆ ಮಾಡುವುದು ಎಂದರ್ಥ. ಕ್ರಿಸ್ಮಸ್ ಕಂಟಾಟವು ಯೇಸು ಕ್ರೀಸ್ತರ ಜನನದ ಕಥೆಯನ್ನು ಹೇಳುತ್ತೆದೆ. ಈ ಚಾರಿತ್ರಿಕ ಘಟನೆಯನ್ನು ನೃತ್ಯರೂಪಕದ ಮೂಲಕ ಸಾದರಪಡಿಸುವುದೇ “ಕ್ರಿಸ್ಮಸ್ ಕ್ರಿಸ್ತೋತ್ಸವ” ಅಥವಾ“ಕ್ರಿಸ್ಮಸ್ ಕಂಟಾಟ. 60 ಕಲಾವಿದರ ಈ ತಂಡವು, ಕೆಲವು ಕೊರಿಯನ್ ಕಲಾವಿದರನ್ನು ಒಳಗೊಂಡಿದೆ. ಕನ್ನಡ ಭಾಷೆಯ ದ್ವನಿ ಮುದ್ರಿತ ಹಾಡುಗಳು ಮತ್ತು ಸಂಗೀತದಿಂದ ಸಮೃದ್ಧವಾದ ಈ ಪ್ರದರ್ಶನವು 60 ನಿಮಿಷಗಳ ಸಂಗೀತ ನಾಟಕವನ್ನು ಒಳಗೊಂಡಿದೆ. ಈ ಕಾರ್ಯಕ್ರಮ ದ್ವನಿ ಮತ್ತು ಬೆಳಕಿನ ಪ್ರದರ್ಶನವನ್ನು ಹೋಲುತ್ತದೆ. ಇದು ಪಾಲ್ಗೊಳ್ಳುವ ಎಲ್ಲರಿಗೆ ಮರೆಯಲಾಗದ ಅನುಭವವನ್ನು ನೀಡಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತದಲ್ಲಿ 2014 ರಲ್ಲಿ ಆರಂಭವಾದ ಕಂಟಾಟವನ್ನು 30 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ. 1,700 ಸ್ಥಳಗಳಲ್ಲಿ ಪ್ರದರ್ಶನ ನೀಡಿದ, ಈ ತಂಡ, ಭಾರತದಾದ್ಯಂತ 6 ಲಕ್ಷ ಕಿಲೋ ಮೀಟರ್ ದೂರವನ್ನು ಕ್ರಮಿಸಿದೆ. ಕೊರಿಯಾ, ಯುಎಸ್ಎ ಮತ್ತು ಇತರ ದೇಶಗಳಲ್ಲಿ ಪ್ರದರ್ಶನಗಳ ಮೂಲಕ ಅಂತರಾಷ್ಟ್ರೀಯ ಮೆಚ್ಚುಗೆಯನ್ನು ಗಳಿಸಿದ್ದಾರೆ ಎಂದರು
ಕಾರ್ಯಕ್ರಮವು ಸಂಜೆ 6ಗಂಟೆಗೆ ಆರಂಭವಾಗಲಿದ್ದು, ಸ್ಥಳೀಯ ಶಾಲೆಗಳು ಮತ್ತು ಕಾಲೇಜುಗಳ ವಿದ್ಯಾರ್ಥಿಗಳು ಪರಿಸರ, ಶಾಂತಿ ಮತ್ತು ಸಾಮರಸ್ಯದ ಸಂದೇಶವನ್ನು ನೀಡುವ ನೃತ್ಯಗಳನ್ನು ಪ್ರದರ್ಶಿಸಲಿದ್ದರೆ ಹಾಗೂ ಕ್ರಿಸ್ಮಸ್ ಗೀತೆಗಳನ್ನು ಹಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಉಡುಪಿ ಬಿಷಪ್ ಅತೀ ವಂದನೀಯ ಜೆರಾಲ್ಡ್ ಐಸಾಕ್ ಲೋಬೊ, ಸಿ,ಎಸ್,ಐ., ಕರ್ನಾಟಕ ದಕ್ಷಿಣ ಧರ್ಮಪ್ರಾಂತ್ಯ ಬಿಷಪ್ ಅತೀ ವಂದನೀಯ ಹೇಮಚಂದ್ರ ಕುಮಾರ್, ಬೆಂಗಳೂರಿನ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಥಿಯಾಲಜಿಯ ಪ್ರಾಚಾರ್ಯರಾದ ವಂದನೀಯ ಸೈಮನ್ ಅಬ್ರಾಹಾಂ ಭಾಗವಹಿಸಲಿದ್ದಾರೆ.
ಕೊರಿಯನ್ ತಂಡದಿಂದ ಪ್ರದರ್ಶನಗೊಳ್ಳುವ ನೃತ್ಯರೂಪಕ, ಸಂಜೆ 7 ಗಂಟೆಗೆ ಪ್ರಾರಂಭವಾಗುತ್ತದೆ. ಈ ಕಾರ್ಯಕ್ರಮದಲ್ಲಿ ಸುಮಾರು ಐದು ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದ್ದು, ಇದು ಉಡುಪಿಯ ಎಲ್ಲಾ ಕ್ರಿಶ್ಚಿಯನ್ ಸಭೆಗಳು ಜೊತೆಗೂಡಿ ಆಯೋಜಿಸುರುವ ಒಂದು ವಿಶಿಷ್ಠ ಕಾರ್ಯಕ್ರಮವಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಯುನಾಯ್ಟೆಡ್ ಕ್ರಿಶ್ಚಿಯನ್ ಫೋರಂ ಉಡುಪಿ ಉಪಾಧ್ಯಕ್ಷರಾದ ಪ್ರಶಾಂತ್ ಜತ್ತನ್ನ, ಉಡುಪಿ ಶೋಕಮಾತಾ ಚರ್ಚಿನ ಪ್ರಧಾನ ಧರ್ಮಗುರು ವಂ|ಚಾರ್ಲ್ಸ್ ಮಿನೇಜಸ್, ಬ್ರಹ್ಮಾವರ ಸೈಂಟ್ ಮೇರಿಸ್ ಸೀರಿಯನ್ ಕ್ಯಾಥೆಡ್ರಲ್ ಇದರ ವಿಕಾರ್ ಜನರಲ್ ವಂ|ಮಥಾಯಿ, ಸಿಎಸ್ ಐ ಉಡುಪಿ ಪ್ರಾಂತ ಸಭಾ ಪಾಲಕ ವಂ|ಐವನ್ ಡಿ ಸೋನ್ಸ್, ವಂ|ಲಿಯೊ ಡಿಸೋಜಾ, ಪಾಸ್ಟರ್ ಕೆ ವಿ ಪೌಲ್, ಎಬನೇಜರ್ ಕ್ರಿಸ್ಟೋಫರ್ ಕರ್ಕಡ, ಮಂಜು ಗಿಡಿ ಹಾಗೂ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...