ಉಳ್ಳಾಲ | ನಿರುದ್ಯೋಗ ನಿವಾರಣೆಯಿಂದ ಸೌಹಾರ್ದ ಭಾರತ ನಿರ್ಮಾಣ ಸಾಧ್ಯ: ಡಾ.ಗಣನಾಥ ಶೆಟ್ಟಿ

Date:

ಸಾಮಾನ್ಯ ಜನರು ಉದ್ಯೋಗವನ್ನು ಪಡೆಯಲು‌ ಹರಸಾಹಸ ಪಡುತ್ತಿದ್ದಾರೆ. ಸಾಮಾಜಿಕ ಪಿಡುಗಾಗಿರುವ ನಿರುದ್ಯೋಗವನ್ನು ನಿವಾರಿಸುವುದರಿಂದ ಸೌಹಾರ್ದ ಭಾರತವನ್ನು ನಿರ್ಮಾಣ ಮಾಡಲು ಸಾಧ್ಯ ಎಂದು ಜನಪದ ವಿದ್ವಾಂಸ, ಸಾಹಿಗಳಾದ ಡಾ.ಗಣನಾಥ ಶೆಟ್ಟಿ ಎಕ್ಕಾರು ಅಭಿಪ್ರಾಯಪಟ್ಟರು.

ಸ್ವಾತಂತ್ರ್ಯ ಚಳುವಳಿಯ ಧ್ರುವತಾರೆ ಭಗತ್ ಸಿಂಗ್ ಅವರ 94ನೇ ಹುತಾತ್ಮ ದಿನಾಚರಣೆಯ ಅಂಗವಾಗಿ ಸಮಾನ ಮನಸ್ಕ ಸಂಘಟನೆಗಳ ಆಶ್ರಯದಲ್ಲಿ ಮುನ್ನೂರು ಯುವಕ ಮಂಡಲದಲ್ಲಿ ಜರುಗಿದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಇತ್ತೀಚಿನ ವರ್ಷಗಳಲ್ಲಿ ನಿರುದ್ಯೋಗ ಸಮಸ್ಯೆ ಪೆಡಂಭೂತವಾಗಿ ಯುವಜನತೆಯನ್ನು ಕಾಡುತ್ತಿದೆ. ನಿರುದ್ಯೋಗವನ್ನು ಕಾರ್ಪೊರೇಟ್ ವಲಯ ಪ್ರೋತ್ಸಾಹಿಸುತ್ತಾ ಬರುತ್ತಿದೆ. ಜೊತೆಗೆ ಕೋಮುವಾದಿ ಶಕ್ತಿಗಳು ಇದರ ದುರ್ಲಾಭವನ್ನು ಪಡೆಯುತ್ತಿವೆ. ನಿರುದ್ಯೋಗದಿಂದ ಹತಾಶರಾದ ಯುವಜನರಲ್ಲಿ ಜಾತಿ ಧರ್ಮದ ಅಮಲನ್ನೇರಿಸಿ ಕೋಮುದ್ವೇಷವನ್ನು ಹಬ್ಬಿಸಲು ಪ್ರಚೋದನೆ ನೀಡಲಾಗುತ್ತಿದೆ. ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ಮೂಲಕ ದುಡಿಯುವ ಕೈಗಳಿಗೆ ಉದ್ಯೋಗ ಲಭಿಸುವಂತಾದರೆ ಮಾತ್ರವೇ ಸೌಹಾರ್ದ ಭಾರತವನ್ನು ನಿರ್ಮಿಸಲು ಸಾಧ್ಯವಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 03 25 at 2.35.10 PM 1

ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ, “ನಿಜವಾದ ದೇಶಪ್ರೇಮ ಅಂದರೆ ದೇಶಕ್ಕಾಗಿ ಶ್ರಮ ಪಡುವುದು, ದುಡಿಯುವುದು. ಸಾರ್ವಜನಿಕ ವಲಯ ಆರೋಗ್ಯ, ಶಿಕ್ಷಣ, ಉದ್ಯೋಗದ ಕಡೆ ಗಮನ ಹರಿಸಬೇಕಾಗಿದೆ. ಆದರೆ, ಸರ್ಕಾರ ಇದೆಲ್ಲವನ್ನು ಖಾಸಗಿ ವಲಯಕ್ಕೆ ಕೊಡುತ್ತಿದೆ. ಸಾರ್ವಜನಿಕ ವಲಯ ಎಲ್ಲವನ್ನು ಕಳಚಿಕೊಳ್ಳುತ್ತಾ ಇದೆ. ಬಂಡವಾಳಶಾಹಿ ವ್ಯವಸ್ಥೆ ಎಲ್ಲವನ್ನು ನಿಯಂತ್ರಣ ಮಾಡ್ತಾ ಇದೆ. ಈ ವ್ಯವಸ್ಥೆ ಬದಲಾಗಬೇಕು. ಯುವಜನತೆ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು” ಎಂದು ಹೇಳಿದರು.

ಡಿವೈಎಫ್‌ಐ ಉಳ್ಳಾಲ ತಾಲೂಕು ಅಧ್ಯಕ್ಷ ನಿತಿನ್ ಕುತ್ತಾರ್ ಮಾತನಾಡುತ್ತಾ, “ಆರ್ಥಿಕ ಸ್ವಾತಂತ್ರ್ಯ ಇಲ್ಲದೆ ನಿಜವಾದ ಸ್ವಾತಂತ್ರ್ಯವನ್ನು ಪಡೆಯಲು ಸಾಧ್ಯವಿಲ್ಲ. ಜನಸಾಮಾನ್ಯರ ಬದುಕನ್ನು ಉತ್ತಮಗೊಳಿಸಬೇಕಾದ ಕೇಂದ್ರ ರಾಜ್ಯ ಸರಕಾರಗಳು ಸದಾ ಕಾರ್ಪೊರೇಟ್ ಪರ ಮಂತ್ರಗಳನ್ನು ಜಪಿಸುವ ಮೂಲಕ ದೇಶದ ಹಿತಾಸಕ್ತಿಗಳನ್ನು ಬಲಿಕೊಟ್ಟಿವೆ” ಎಂದು ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ: ಉಳ್ಳಾಲ | ಮೀನು ಸಂಸ್ಕರಣಾ ಘಟಕಗಳಲ್ಲಿ ಕಲ್ಲಿದ್ದಲು ಬಳಸದಂತೆ ಜಿಲ್ಲಾಧಿಕಾರಿಗೆ ಡಿವೈಎಫ್‌ಐ ಮನವಿ

ಕಾರ್ಯಕ್ರಮದಲ್ಲಿ ಯುವಜನ ನಾಯಕ ರಿಜ್ವಾನ್ ಹರೇಕಳ, ರೈತ ಚಳುವಳಿಯ ಹಿರಿಯ ನಾಯಕ ಕ್ರಷ್ಣಪ್ಪ ಸಾಲ್ಯಾನ್, ಪ್ರಗತಿಪರ ಚಿಂತಕ ರಮೇಶ್ ಉಳ್ಳಾಲ, ಕಾರ್ಮಿಕ ನಾಯಕ ಜನಾರ್ಧನ ಕುತ್ತಾರ್, ಮುನ್ನೂರು ಪಂಚಾಯತ್ ಸದಸ್ಯ ಗಣೇಶ್ ಅಡ್ಯಾಂತಾಯ, ಮುನ್ನೂರು ಪಂಚಾಯತ್ ಉಪಾಧ್ಯಕ್ಷ ಮಹಾಬಲ‌ ದೆಪ್ಪಲಿಮಾರ್, ರೈತ ನಾಯಕ ಶೇಖರ್ ಕುಂದರ್, ಯುವ ನಾಯಕರಾದ ಸುನಿಲ್ ತೇವುಲ, ಮಿಥುನ್ ರಾಜ್, ದೀಕ್ಷಿತ್, ಪ್ರಥ್ವಿರಾಜ್, ರಜಾಕ್ ಮುಡಿಪು, ಕಾರ್ಮಿಕ ಮುಖಂಡರಾದ ಚಂದ್ರಹಾಸ ಪಿಲಾರ್, ರೋಹಿದಾಸ್ ತೊಕ್ಕೋಟ್ಟು, ಮಹಿಳಾ ಮುಖಂಡರಾದ ಪ್ರಮೋದಿನಿ, ವಿಲಾಸಿನಿ, ಬೇಬಿ,ನಳಿನಾಕ್ಷಿ ಶೆಟ್ಟಿ, ಪದ್ಮಾವತಿ ಶೆಟ್ಟಿ ಮುಂತಾದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...