ಉಳ್ಳಾಲ | ಅನಧಿಕೃತ ಮದ್ಯದಂಗಡಿ ಕಾರ್ಯಾಚರಣೆ: ಅಮೃತ ಬಾರ್ ತೆರ‌ವುಗೊಳಿಸಲು ಅಧಿಕಾರಿಗಳು ವಿಫಲ

Date:

ಮಕ್ಕಳ ಭದ್ರತೆ ಮತ್ತು ಸಾರ್ವಜನಿಕ ನೈತಿಕತೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಕರ್ನಾಟಕ ರಾಜ್ಯ ಆಬಕಾರಿ ಕಾಯಿದೆ ಮತ್ತು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳು(ಶಾಲೆಗಳಿಂದ 500 ಮೀಟರ್ ದೂರದಲ್ಲಿ ಬಾರ್ ಇರಬಾರದು ಎಂಬ ನಿಯಮ ಸೇರಿದಂತೆ) ಇಂತಹ ಪ್ರಕರಣಗಳಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕಿದೆ. 

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಸಂಕೋಳಿಗೆಯಲ್ಲಿ ಅನಧಿಕೃತವಾಗಿ ಕಾರ್ಯ ನಿರ್ವಹಿಸುತ್ತಿರುವ ಅಮೃತ ಬಾರ್ ಸ್ಥಳೀಯರ ಆತಂಕಕ್ಕೆ ಕಾರಣವಾಗಿದ್ದು, ವಿಶೇಷವಾಗಿ ಶಾಲಾ ಮಕ್ಕಳಿಗೆ ತೊಂದರೆಯಾಗಿದೆ.

ಸಂಕೋಳಿಗೆ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ʼಅಮೃತ ಬಾರ್ʼ ಎಂಬ ಮದ್ಯದಂಗಡಿಯ ವಿರುದ್ಧ ಸ್ಥಳೀಯರು ಗಂಭೀರ ಆಕ್ಷೇಪ ವ್ಯಕ್ತಪಡಿಸಿದ್ದು, ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದಾರೆ. ಆದರೂ ಕೂಡ ಯಾವುದೇ ಅಧಿಕಾರಿಗಳಾಗಲಿ, ಸಂಬಂಧಪಟ್ಟವರಾಗಲಿ ಈವರೆಗೆ ಯಾರೂ ಕ್ರಮ ಕೈಗೊಂಡಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ.

ಈ ಕುರಿತು ಅಫ್ಜಲ್‌ ಎಂಬುವವರು ಈ ದಿನ.ಕಾಮ್‌ ಜತೆಗೆ ಮಾತನಾಡಿ, “ಸಂಕೋಳಿಗೆ ಪ್ರದೇಶದಲ್ಲಿ ʼಅಮೃತ ಬಾರ್‌ʼ ಎಂಬ ಮದ್ಯದಂಗಡಿ ಅನಧಿಕೃತವಾಗಿ ಕಾರ್ಯ ನಿರ್ವಹಿಸುತ್ತಿದೆ. ವಿಶೇಷವಾಗಿ ಈ ಭಾಗದಲ್ಲಿ ಬೋವಿ ಶಾಲೆ ನಡೆಯುತ್ತಿದೆ. ಶಾಲೆಯಿಂದ 100 ಮೀಟರ್‌ ಒಳಗೆ ಮದ್ಯ ಮತ್ತು ಧೂಮಪಾನ ಅಂಗಡಿಗಳನ್ನು ನಿಷೇಧಿಸಲಾಗಿದ್ದರೂ ಕೂಡ ಈ ಅಂಗಡಿ ಶಾಲೆಗೆ ಸ್ವಲ್ಪ ಪಕ್ಕದಲ್ಲಿಯೇ ಇದೆ”‌ ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಳಗಾದರೆ ಮಕ್ಕಳು ಶಾಲೆಗೆ ಬರುತ್ತಿರುತ್ತಿರುತ್ತಾರೆ. ಇದರ ನಡುವೆ ಬೆಳಿಗ್ಗೆಯೇ ಬಾರ್ ಹೊರಗೆ ರಸ್ತೆಯಲ್ಲಿಯೇ ಮದ್ಯ ಮಾರಾಟ ನಡೆಯುತ್ತಿದೆ. ಮದ್ಯಪಾನಿಗಳು ಅಸಭ್ಯವಾಗಿ ವರ್ತಿಸುತ್ತಿರುತ್ತಾರೆ. ಅವರ ಬೈಗುಳ, ಜಗಳ-ಗಲಾಟೆಗಳಿಂದ ಮಕ್ಕಳಿಗಲ್ಲದೆ ಸಾರ್ವಜನಿಕರಿಗೂ ತೊಂದರೆ ಉಂಟಾಗುತ್ತಿದೆ” ಎಂದು ದೂರಿದರು.‌

ಅಮೃತ ಬಾರ್ 1

ಈ ರಸ್ತೆಯ ಮೂಲಕ ಪ್ರತಿದಿನ ಹಲವಾರು ಮಹಿಳೆಯರು ಸಂಚರಿಸುತ್ತಾರೆ. ಮಕ್ಕಳು ಓಡಾಡುತ್ತಾರೆ. ಇಂತಹ ನಡವಳಿಕೆಗಳಿಂದ ಮಕ್ಕಳ ಮಾನಸಿಕ ಆರೋಗ್ಯ ಮತ್ತು ಭವಿಷ್ಯಕ್ಕೆ ಅಪಾಯವಾಗಿದೆ” ಎಂಬ ಆತಂಕ ವ್ಯಕ್ತಪಡಿಸಿದರು.

“ಈ ಹಿಂದೆ ಹಲವು ಬಾರಿ ಎಲ್ಲ ಇಲಾಖೆಗಳಿಗೂ ದೂರು ನೀಡಿದ್ದೇವೆ. ಆದರೂ ಕೂಡ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಸುಮಾರು ಎರಡ್ಮೂರು ವರ್ಷಗಳಿಂದ ಮದ್ಯದಂಗಡಿ ತೆಗೆಯಿಸಲು ಶ್ರಮ ಪಡುತ್ತಿದ್ದೇವೆ. ಆದರೆ ಯಾವುದೇ ಪ್ರಯೋಜನವಾಗುತ್ತಿಲ್ಲ. ಈಗಲಾದರೂ ಸಂಬಂಧಪಟ್ಟ ಇಲಾಖೆಗಳು ಅಧಿಕಾರಿಗಳು ಕೂಡಲೇ ಬಾರ್‌ನ ಪರವಾನಗಿ ರದ್ದುಗೊಳಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಕುರಿತು ಈ ದಿನ.ಕಾಮ್‌ ಸೋಮೇಶ್ವರ ಪುರಸಭೆಯ ಆರೋಗ್ಯಾಧಿಕಾರಿ ಲಿಲ್ಲಿ ನಾಯರ್‌ ಅವರನ್ನು ಸಂಪರ್ಕಿಸಿದಾಗ ಮಾತನಾಡಿ, “ನಾವು ಈಗಾಗಲೇ ಅವರಿಗೆ ನೋಟಿಸ್‌ ನೀಡಿದ್ದೇವೆ. ಆದರೆ ಪರವಾನಗಿ ರದ್ದು ಮಾಡುವ ಅಧಿಕಾರ ನಮಗಿಲ್ಲ. ಅಬಕಾರಿ ಇಲಾಖೆಯೇ ಪರವಾನಗಿ ರದ್ದು ಮಾಡಬೇಕು. ಈಗ ಅಲ್ಲಿ ಹೋಟೆಲ್‌ ಶುರುವಾಗಿದೆ. ಹಾಗಾಗಿ ಪರ್ಮಿಷನ್‌ ಸಿಕ್ಕಿದೆ. ಹೊಟೆಲ್‌ನ ಹೊರಗೆ ಮದ್ಯ ಮಾರುತ್ತಿದ್ದಾರೆಂಬ ದೂರಗಳು ಬಂದಿವೆ. ಆದರೆ ನಾವು ನೋಟಿಸ್‌ ಕೊಡಬಹುದೇ ವಿನಃ ಬೇರೆ ಇನ್ನೇನನ್ನೂ ಮಾಡಲು ಆಗುವುದಿಲ್ಲ” ಎಂದು ಪ್ರತಿಕ್ರಿಯಿಸಿದರು.

ಅಮೃತ ಬಾರ್‌ 1

ಹಿಂದೆಯೂ ಉಡುಪಿ ಜಿಲ್ಲೆಯಲ್ಲಿ ಮಣಿಪಾಲದ ಎರಡು ಪಬ್‌ಗಳ ಪರವಾನಗೆ ರದ್ದುಗೊಳಿಸಿದಂತೆ(2024ರಲ್ಲಿ), ಇಲ್ಲೂ ಆಬಕಾರಿ ಇಲಾಖೆ, ಪೊಲೀಸರು ಮತ್ತು ಪುರಸಭೆ ಸಂಯುಕ್ತವಾಗಿ ತನಿಖೆ ನಡೆಸಿ ತ್ವರಿತ ಕ್ರಮ ಕೈಗೊಳ್ಳಬೇಕು. ಸ್ಥಳೀಯರ ಆಗ್ರಹಕ್ಕೆ ಸ್ಪಂದಿಸದಿದ್ದರೆ ಇದು ಸಮಾಜದಲ್ಲಿ ದೊಡ್ಡ ಅಸಮಾಧಾನಕ್ಕೆ ಕಾರಣವಾಗಬಹುದು. ಮಕ್ಕಳ ಭವಿಷ್ಯ ಮತ್ತು ಸಾರ್ವಜನಿಕರ ಶಾಂತಿಯನ್ನು ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಕೂಡಲೇ ಗಮನ ಹರಿಸಬೇಕೆಂದು ಒತ್ತಾಯಿಸಲಾಗಿದೆ.

ಇದನ್ನೂ ಓದಿದ್ದೀರಾ? ಮೆದುಳು ಜ್ವರದ ಭೀತಿ ಬೇಡ, ಜಾಗೃತಿ ಇರಲಿ: ಸೋಂಕು ತಡೆಗಟ್ಟುವುದು ಹೇಗೆ? ಇಲ್ಲಿದೆ ಮಾಹಿತಿ

ಈ ರೀತಿಯ ದೂರುಗಳು ರಾಜ್ಯದಲ್ಲಿ, ವಿಶೇಷವಾಗಿ ಶೈಕ್ಷಣಿಕ ಸಂಸ್ಥೆಗಳು ಅಥವಾ ವಸತಿ ಪ್ರದೇಶಗಳ ಸಮೀಪದಲ್ಲಿ ಮದ್ಯದಂಗಡಿಗಳು ಕಾರ್ಯನಿರ್ವಹಿಸುವಾಗ ಸಾಮಾನ್ಯವಾಗಿ ಕೇಳಿಬರುತ್ತವೆ. ಮಕ್ಕಳ ಭದ್ರತೆ ಮತ್ತು ಸಾರ್ವಜನಿಕ ನೈತಿಕತೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಕರ್ನಾಟಕ ರಾಜ್ಯ ಆಬಕಾರಿ ಕಾಯಿದೆ ಮತ್ತು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳು(ಶಾಲೆಗಳಿಂದ 500 ಮೀಟರ್ ದೂರದಲ್ಲಿ ಬಾರ್ ಇರಬಾರದು ಎಂಬ ನಿಯಮ ಸೇರಿದಂತೆ) ಇಂತಹ ಪ್ರಕರಣಗಳಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕಿದೆ.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...