ಮಂಗಳೂರು | ದುಷ್ಕರ್ಮಿಗಳಿಗೆ ಜಾಮೀನು, ಅಮಾಯಕರ ಕೊಲೆ: ಉಳ್ಳಾಲ ಯುವ ಕಾಂಗ್ರೆಸ್ ಕಾರ್ಯದರ್ಶಿ ರಾಜೀನಾಮೆ

Date:

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ಎಂಬುವವರ ಹತ್ಯೆ ಮತ್ತು ಕಲಂದರ್ ಶಾಫಿ ಮೇಲಿನ ಕೊಲೆಯತ್ನ ನಡೆದಿದೆ. ಈ ಬೆನ್ನಲ್ಲೇ ವಿಶ್ವ ಹಿಂದೂ ಪರಿಷತ್(ವಿಎಚ್‌ಪಿ) ಮುಖಂಡ ಶರಣ್ ಪಂಪ್‌ವೆಲ್‌ ಬಂಧನವಾಗಿದೆ, ಜಾಮೀನು ಲಭಿಸಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಮೀರ್ ರಾಜೀನಾಮೆ ನೀಡಿದ್ದಾರೆ.

“ನಾನು ತೀವ್ರ ನಿರಾಸೆ ಮತ್ತು ಬೇಸರದಿಂದ ನನ್ನ ಸ್ಥಾನಕ್ಕೆ ರಾಜೀನಾಮೆ ಘೋಷಿಸುತ್ತಿದ್ದೇನೆ. ಬಂಟ್ವಾಳದ ಕೊಲ್ತಮಜಲುನಲ್ಲಿ ಅಮಾಯಕ ಮುಸ್ಲಿಂ ಯುವಕ ಅಬ್ದುಲ್ ರಹಿಮಾನ್ ಅವರ ಕೊಲೆಯಂತಹ ದುರಂತದ ಘಟನೆಯು ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನ ಮತ್ತು ನಿಷ್ಕ್ರಿಯತೆಯಿಂದಾಗಿ ಸಂಭವಿಸಿದೆ. ಈ ಘಟನೆಯಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಮುಜುಗರವಾಗಿದ್ದು, ಜನರಲ್ಲಿ ಪಕ್ಷದ ವಿಶ್ವಾಸಾರ್ಹತೆ ಕುಸಿದಿದೆ” ಎಂದು ತನ್ನ ರಾಜೀನಾಮೆಯಲ್ಲಿ ಶಮೀರ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಮಂಗಳೂರು | ಓಟು ರಾಜಕೀಯದಿಂದ ಅಮಾಯಕರ ಸಾವು ನಿಲ್ಲಲಿ, ಕೋಮುದ್ವೇಷ ಅಳಿಯಲಿ: ನಟ ನವೀನ್ ಪಡೀಲ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್ ಸರ್ಕಾರದ ವಿಫಲತೆವಾಗಿದ್ದು ಕರಾವಳಿಯಲ್ಲಿ ಕೋಮುವಾದಿ ಶಕ್ತಿಗಳನ್ನು ನಿಯಂತ್ರಿಸಲು ಯಾವುದೇ ತೀವ್ರ ಕ್ರಮ ಕೈಗೊಳ್ಳಲಾಗಿಲ್ಲ. ಎರಡು ವರ್ಷಗಳಿಂದ ಅಧಿಕಾರದಲ್ಲಿರುವ ಸರ್ಕಾರ ಕೋಮುವಾದಿಗಳ ಹೆಡೆಮುರಿ ಕಟ್ಟಿಹಾಕಲು ಯಾವುದೇ ಪರಿಣಾಮಕಾರಿ ಕೆಲಸ ಮಾಡಿಲ್ಲ. ಇದರಿಂದ ಜನರಲ್ಲಿ ತೀವ್ರ ಅಸಮಾಧಾನ ಮೂಡಿದೆ” ಎಂದಿದ್ದಾರೆ.

“ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ನಿಷ್ಕ್ರಿಯ ಆಡಳಿತವು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ವಿಫಲವಾಗಿದೆ. ಇದರಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದಂತಹ(ಆರ್‌ಎಸ್‌ಎಸ್‌) ಸಂಘಟನೆಗಳ ಗೂಂಡಾಗಳಿಗೆ ಮುಕ್ತವಾಗಿರುವ ಸ್ವಾತಂತ್ರ್ಯ ದೊರೆತಂತಾಗಿದೆ. ಇದು ಸರ್ಕಾರದ ದೌರ್ಬಲ್ಯವನ್ನು ಸ್ಪಷ್ಟವಾಗಿ ತೋರಿಸುತ್ತದೆ” ಎಂದು ಹೇಳಿದ್ದಾರೆ.

“ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನಿರ್ಲಕ್ಷ್ಯದ ಧೋರಣೆಯೂ ಜನರಲ್ಲಿ ಅಸಮಾಧಾನವನ್ನು ತಂದಿದೆ. ಕರಾವಳಿಯಲ್ಲಿ ಕೋಮು ಗಲಭೆಗಳನ್ನು ತಡೆಗಟ್ಟಲು ಯಾವುದೇ ಕ್ರಮ ಕೈಗೊಳ್ಳದಿರುವುದು ಕಾಂಗ್ರೆಸ್ ಪಕ್ಷದ ಶಕ್ತಿಹೀನತೆಯನ್ನು ಎತ್ತಿ ತೋರಿಸುತ್ತದೆ. ಪೊಲೀಸ್ ಇಲಾಖೆಯು ಸರ್ಕಾರದ ಹಿಡಿತದಲ್ಲಿಲ್ಲದಿರುವುದು ಗಂಭೀರ ಕಳವಳದ ವಿಷಯ. ಶರಣ್ ಪಂಪ್‌ವೆಲ್ ಮತ್ತು ಶ್ರೀಕಾಂತ್ ಶೆಟ್ಟಿಯಂತಹ ದುಷ್ಕರ್ಮಿಗಳು ಗಲಭೆಗೆ ಪ್ರಚೋದನೆ ನೀಡುತ್ತಿದ್ದರೂ, ಅವರು ಸ್ವಚ್ಛಂದವಾಗಿ ತಿರುಗಾಡುತ್ತಿದ್ದಾರೆ. ಇಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿರುವುದು ಸರ್ಕಾರದ ವಿಫಲತೆಯನ್ನು ಸೂಚಿಸುತ್ತದೆ” ಎಂದಿದ್ದಾರೆ.

ಇದನ್ನು ಓದಿದ್ದೀರಾ? ಮಂಗಳೂರು | ಸಂಘಪರಿವಾರದ ಮುಖಂಡ ಶರಣ್ ಪಂಪ್‌ವೆಲ್‌‌ಗೆ ಕೆಲವೇ ಗಂಟೆಗಳಲ್ಲಿ ಜಾಮೀನು; ಬಿಡುಗಡೆ!

“ಶರಣ್ ಪಂಪ್‌ವೆಲ್‌ನಂತಹ ದುಷ್ಕರ್ಮಿಗಳ ಮೇಲೆ ಪ್ರಕರಣ ದಾಖಲಾದರೂ, ಎರಡೇ ನಿಮಿಷಗಳಲ್ಲಿ ಮ್ಯಾಗಿ ತಯಾರು ಮಾಡುವಂತೆ ಜಾಮೀನು ದೊರೆಯುವಂತಹ ವ್ಯವಸ್ಥೆಯಿಂದ ಸಾಮಾನ್ಯ ಜನರಲ್ಲಿ ನ್ಯಾಯದ ಮೇಲಿನ ನಂಬಿಕೆ ಕಡಿಮೆಯಾಗಿದೆ. ಇದು ಕಾನೂನಿನ ದುರ್ಬಳಕೆಯನ್ನು ತೋರಿಸುತ್ತದೆ ಮತ್ತು ಸರ್ಕಾರದ ಕಾನೂನು ಜಾರಿ ವ್ಯವಸ್ಥೆಯ ದೌರ್ಬಲ್ಯವನ್ನು ಬಯಲಿಗೆಳೆಯುತ್ತದೆ. ಕರಾವಳಿಯಲ್ಲಿ ಕೋಮುವಾದಿ ಶಕ್ತಿಗಳ ಹಾವಳಿಯಿಂದ ದಿನಗೂಲಿ ಕಾರ್ಮಿಕರು ಮತ್ತು ಅಮಾಯಕ ನಾಗರಿಕರು ಭಯದಿಂದ ಬದುಕುವಂತಾಗಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಸಂಘಪರಿವಾರದ ರೌಡಿಗಳನ್ನು ಎದುರಿಸಲು ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ರಾಜಕೀಯ ಇಚ್ಛಾಶಕ್ತಿ ಇಲ್ಲವೆಂದು ತೋರುತ್ತಿದೆ. ಇದರಿಂದ ಜನರು ಸರ್ಕಾರದ ಮೇಲಿನ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ, ಮತ್ತು ಕಾಂಗ್ರೆಸ್ ಕಾರ್ಯಕರ್ತರಿಗೆ ಜನರ ಮುಂದೆ ತಲೆ ಎತ್ತಿಕೊಂಡು ನಿಲ್ಲಲು ಕಷ್ಟವಾಗಿದೆ. ಈ ಎಲ್ಲಾ ಕಾರಣಗಳಿಂದಾಗಿ, ಕಾಂಗ್ರೆಸ್ ಸರ್ಕಾರದ ಈಗಿನ ಆಡಳಿತದ ನೀತಿಗಳೊಂದಿಗೆ ಒಪ್ಪಿಕೊಳ್ಳಲು ನನಗೆ ಸಾಧ್ಯವಿಲ್ಲ. ಆದ್ದರಿಂದ, ಈ ಸ್ಥಾನದಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ನನ್ನೊಂದಿಗೆ ಹಲವು ಯುವ ಕಾಂಗ್ರೆಸ್ ಕಾರ್ಯಕರ್ತರು ಕೂಡಾ ರಾಜೀನಾಮೆ ನೀಡುತ್ತಿದ್ದಾರೆ” ಎಂದು ಶಬೀರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...