ಬೀದರ್‌ | ಅನಧಿಕೃತ ಡಿಜಿಟಲ್‌ ಖಾತಾ ಹಂಚಿಕೆ: ಪಿಡಿಒ ಅಮಾನತು

Date:

ಅಕ್ರಮವಾಗಿ ಡಿಜಿಟಲ್‌ ಖಾತಾಗಳನ್ನು ಮಾಡಿಕೊಟ್ಟು ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ನಷ್ಟ ಉಂಟು ಮಾಡಿದ ಬೀದರ್‌ ತಾಲ್ಲೂಕಿನ ಯದಲಾಪೂರ ಗ್ರಾಮ ಪಂಚಾಯತ್‌ ಪಿಡಿಒ ಶ್ರೀಧರ್‌ ಎಂಬುವರನ್ನುಜಿಲ್ಲಾ ಪಂಚಾಯತ್‌ ಸಿಇಒ ಶಿಲ್ಪಾ ಎಂ. ಶನಿವಾರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಸದ್ಯ ಗಾದಗಿ ಗ್ರಾಮ ಪಂಚಾಯತ್ ನಲ್ಲಿ ಪಿಡಿಒ ಆಗಿರುವ ಶ್ರೀಧರ್‌, ಈ ಹಿಂದೆ ಮಲ್ಕಾಪುರ ಗ್ರಾಮ ಪಂಚಾಯತ್‌ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವಧಿಯಲ್ಲಿ ಡಿಜಿಟಲ್‌ ಖಾತಾ ನಮೂನೆ 11-A ಮತ್ತು ನಮೂನೆ 11-B ಅನಧಿಕೃತವಾಗಿ ತೆಗೆದುಕೊಟ್ಟು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿ ಲಕ್ಷಾಂತರ ರೂಪಾಯಿ ಕೊಳ್ಳೆ ಹೊಡೆದಿದ್ದಾರೆ ಎಂಬ ದೂರುಗಳು ಸಲ್ಲಿಕೆಯಾಗಿದ್ದವು. ಸದರಿ ದೂರಿನ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ತಾಲೂಕು ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚಿಸಿದ್ದರು. ಅವರ ವರದಿ ಆಧರಿಸಿ ಪಿಡಿಒ ಮೇಲೆ ಶಿಸ್ತು ಕ್ರಮ ಜರುಗಿಸಿದ್ದಾರೆ.

ತಾಲೂಕು ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿಗೆ ಮಲ್ಕಾಪುರ ಪಂಚಾಯತ್‌ ಗೆ ಭೇಟಿ ನೀಡಿ ಪರಿಶೀಲಿಸಿದಾಗ ಯಾವುದೇ ದಾಖಲಾತಿಗಳು ಇಲ್ಲದೆ ಡಿಜಿಟಲ್‌ ಖಾತಾ ವಿತರಣೆ ಮಾಡಿದ್ದು ಗಮನಕ್ಕೆ ಬಂದ ಕಾರಣ ಮಲ್ಕಾಪುರ ಪಂಚಾಯತ್‌ ದಿಂದ ಯದಲಾಪುರ ಪಂಚಾಯತ್‌ ಗೆ ವರ್ಗಾಹಿಸಿದ್ದರು. ಆದರೆ ಪ್ರಭಾರ ಹಸ್ತಾಂತರ ಮಾಡದೇ ಅನಧಿಕೃತವಾಗಿ ಖಾತಾ ವಿತರಣೆ ಮಾಡಿದ್ದು ತನಿಖೆಯಿಂದ ಗೊತ್ತಾಗಿದೆ ಎಂದು ಸಿಇಒ ಆದೇಶದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...