ಬೀದರ್‌ | ಅನಧಿಕೃತ ಡಿಜಿಟಲ್‌ ಖಾತಾ ವಿತರಣೆ: ಚಿಟ್ಟಾ ಗ್ರಾಮ ಪಂಚಾಯಿತಿ ಪಿಡಿಒ ಅಮಾನತು

Date:

ಅನಧಿಕೃತ ಡಿಜಿಟಲ್‌ ಖಾತಾ ವಿತರಿಸಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ ಹಿನ್ನಲೆಯಲ್ಲಿ ಬೀದರ್‌ ತಾಲ್ಲೂಕಿನ ಚಿಟ್ಟಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂಗಾರೆಡ್ಡಿ ಎಂಬುವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ. ಆದೇಶ ಹೊರಡಿಸಿದ್ದಾರೆ.

“ಸರ್ಕಾರಿ ಜಮೀನಿನಲ್ಲಿ 11-ಬಿ ಖಾತೆಗಳನ್ನು ನೀಡಿ ಸರ್ಕಾರಕ್ಕೆ ಆರ್ಥಿಕ ನಷ್ಟವನ್ನು ಉಂಟು ಮಾಡಿದ ಸದರಿ ಪಿಡಿಒ ಬಗ್ಗೆ ತನಿಖೆ ನಡೆಸಿ ಅಮಾನತು ಮಾಡಬೇಕೆಂದು ಬೀದರ್ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಅಗಸ್ಟ್‌ 28‌ ರಂದು ಜರುಗಿದ ಜನಸ್ಪಂದನ ಕಾರ್ಯಕ್ರಮದಲ್ಲಿ ದೂರು ಸಲ್ಲಿಕೆಯಾಗಿತ್ತು. ಸದರಿ ದೂರಿನ ಬಗ್ಗೆ ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಜಂಟಿಯಾಗಿ ಅಧಿಕಾರಿಗಳನ್ನು ನೇಮಿಸಿ ಆದೇಶಿಸಲಾಗಿತ್ತು.ಸದರಿ ವಿಷಯದ ಕುರಿತು ಪರಿಶೀಲಿಸಿದ ವರದಿ ಆಧರಿಸಿ ಕ್ರಮ ಜರುಗಿಸಲಾಗಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ʼಗಾಂಧಿ ಗ್ರಾಮʼ ಪುರಸ್ಕೃತ ಪಂಚಾಯತಿಯಲ್ಲಿ ಅವ್ಯವಹಾರ; ತನಿಖೆಗೆ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೃಷಿ ಭೂಮಿಯನ್ನು ಸಕ್ಷಮ ಪ್ರಾಧಿಕಾರದಿಂದ ಭೂ ಪರಿವರ್ತನೆ ಮಾಡದೇ ಇರುವುದರಿಂದ ಮತ್ತು ಲೇಔಟ್ ಅನುಮೋದನೆ ಪಡೆಯದೆ ಡಿಜಿಟಲ್‌ ಖಾತಾಗಳು ವಿತರಣೆ ಮಾಡಿರುವುದರಿಂದ ಗ್ರಾಮ ಪಂಚಾಯಿತಿ ಹಾಗೂ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟಾಗಿರುವುದು ಪರಿಶೀಲನಾ ವರದಿಯಲ್ಲಿ ಮೇಲ್ನೋಟಕ್ಕೆ ಕಂಡು ಬಂದ ಹಿನ್ನಲೆಯಲ್ಲಿ ಅಮಾನುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...