ಬೀದರ್‌ | ಸಂವಿಧಾನ ವಿರೋಧಿ ಹೇಳಿಕೆ; ಸಂಸದ ಅನಂತ ಹೆಗಡೆ ಪ್ರತಿಕೃತಿ ದಹನ

Date:

ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನದಲ್ಲಿ ಗೆದ್ದರೆ ದೇಶದ ಸಂವಿಧಾನ ಬದಲಾಯಿಸುತ್ತೇವೆ ಎಂದು ಪ್ರಜಾಪ್ರಭುತ್ವ ವಿರೋಧಿ ಹೇಳಿಕೆ ಖಂಡಿಸಿ ಬೀದರ್‌ನಲ್ಲಿ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಸಂವಿಧಾನ ಸಂರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಸಿ, ಪ್ರತಿಕೃತಿ ದಹನ ಮಾಡಿದರು.

ನಗರದ ಡಾ.ಬಿ.ಆರ್. ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿದ ಒಕ್ಕೂಟದ ಪದಾಧಿಕಾರಿಗಳು ಸಂಸದ ಅನಂತಕುಮಾರ್‌ ಹೆಗಡೆ ವಿರುದ್ಧ ಘೋಷಣೆ ಕೂಗಿದರು, ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರಿನ ಮುಖ್ಯರಸ್ತೆಯಲ್ಲಿ ಸಂಸದ ಹೆಗಡೆ ಪ್ರತಿಕೃತಿ ದಹಿಸಿ ಬೊಬ್ಬೆ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತು ರಾಷ್ಟ್ರಪತಿಗಳಿಗೆ ಬರೆದ ಹಕ್ಕೋತ್ತಾಯ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಒಕ್ಕೂಟದ ಪ್ರಮುಖರಾದ ಬಾಬು ಪಾಸ್ವಾನ್, ಅನಿಲಕುಮಾರ ಬೆಲ್ದಾರ ಮಾತನಾಡಿ, ಪದೆ ಪದೇ ಸಂವಿಧಾನ ವಿರೋಧಿ ಹೇಳಿಕೆ ನೀಡುತ್ತಿರುವ ಸಂಸದ ಅನಂತಕುಮಾರ್‌ ಹೆಗಡೆಯಿಂದ ದೇಶದಲ್ಲಿ ಅಶಾಂತಿ ಸೃಷ್ಟಿಯಾಗುತ್ತಿದೆ. ಸಂವಿಧಾನದಡಿಯಲ್ಲಿ ಗೆದ್ದು ಪ್ರಮಾಣ ವಚನ ಸ್ವೀಕರಿಸಿದ ಅವರು ಸಂವಿಧಾನವನ್ನೇ ವಿರೋಧಿಸುತ್ತಿರುವುದು ದೇಶದ್ರೋಹ ಹೇಳಿಕೆಯಾಗಿದೆ. ಆದರೂ ಬಿಜೆಪಿ ಪಕ್ಷ ಇಂತಹ ಹೇಳಿಕೆ ವಿರುದ್ಧ ಪ್ರತಿಕ್ರಿಯೆ ನೀಡುತ್ತಿಲ್ಲ. ಕೂಡಲೇ ಸಂಸದ ಹೆಗಡೆಯವರ ಸಂಸದ ಸದಸ್ಯತ್ವ ರದ್ದುಗೊಳಿಸಿ, ದೇಶದ್ರೋಹ ಪ್ರಕರಣ ದಾಖಲಿಸಿ ಬಂಧಿಸಬೇಕು” ಎಂದು ಆಗ್ರಹಿಸಿದರು.

“ಸಂಸದ ಹೆಗಡೆಯವರು ಈ ಹಿಂದೆಯೂ ಸಂವಿಧಾನ ವಿರೋಧಿ ಹೇಳಿಕೆ ಕೊಟ್ಟಿದ್ದಾರೆ. ಇದನ್ನು ನಿಲ್ಲಿಸದಿದ್ದರೆ ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ಉಗರ ಹೋರಾಟ ನಡೆಸಲಾಗುವುದು” ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ ಲೋಕಸಭಾ ಕ್ಷೇತ್ರ | ದಶಕದ ʼಕಮಲʼ ಕೋಟೆ ಭೇದಿಸಲು ʼಕೈʼ ರಣತಂತ್ರ

ಪ್ರತಿಭಟನೆಯಲ್ಲಿ ಪ್ರಮುಖರಾದ ಮಾರುತಿ ಕಂಟೆ, ಅಂಬಾದಾಸ ಗಾಯಕವಾಡ, ಅವಿನಾಶ ದೀನೆ, ಶಿವಕುಮಾಯ ನೀಲಿಕಟ್ಟಿ ಶ್ರೀಮತರಾವ ದೀನೆ, ಸಂದೀಪ ಕಾಂಟೆ, ಸಾಯಿ ಸಿಂಧೆ, ಪ್ರದೀಪ ನಾಟೇಕರ್‌ ಸೇರಿದಂತೆ ಇತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...