SSLC Result | ಸರ್ಕಾರಿ ಉರ್ದು ಶಾಲೆ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ ಸ್ಥಾನ

Date:

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಒಟ್ಟು ರಾಜ್ಯದಲ್ಲಿ 22 ವಿದ್ಯಾರ್ಥಿಗಳು 625 ಅಂಕಕ್ಕೆ 625 ಅಂಕವನ್ನು ಪಡೆದಿದ್ದಾರೆ. ಈ ಪೈಕಿ ಶಗುಫ್ತಾ ಅಂಜುಮ್ ಕೂಡಾ ಒಬ್ಬರು.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಸರ್ಕಾರಿ ಉರ್ದು ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ಶಗುಫ್ತಾ ಅಂಜುಮ್ ಅವರು ಎಸ್‌ಎಸ್‌ಎಲ್‌ಸಿಯಲ್ಲಿ ಪೂರ್ಣಾಂಕ ಪಡೆದಿದ್ದಾರೆ.

ಇದನ್ನು ಓದಿದ್ದೀರಾ? ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಈ ವೆಬ್‌ಸೈಟ್‌ನಲ್ಲಿ ಪರಿಶೀಲಿಸಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಗುಫ್ತಾ ಬಿಹಾರ ಮೂಲದವರಾಗಿದ್ದು, ಕಳೆದ ಐದು ವರ್ಷಗಳಿಂದ ಶಿರಸಿಯ ಸರ್ಕಾರಿ ಉರ್ದು ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಟಿಪ್ಪು ನಗರದಲ್ಲಿ ತಮ್ಮ ಕುಟುಂಬದೊಂದಿಗೆ ಶಗುಫ್ತಾ ವಾಸವಿದ್ದಾರೆ. ಅವರ ತಂದೆ ಮೌಲಾನಾ ಅವರು ಬಿಹಾರದಲ್ಲಿ ಮೌಲ್ವಿಯಾಗಿ ನಿರ್ವಹಿಸಿದ್ದರು ಎಂದು ವರದಿಯಾಗಿದೆ.

ಇನ್ನು ತಮ್ಮ ವಿದ್ಯಾರ್ಥಿನಿ ಸಾಧನೆ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಶಾಲೆಯ ಮುಖ್ಯಶಿಕ್ಷಕ ಆನಂದ ಕೊರವರ, “ಶಗುಫ್ತಾ ಶೈಕ್ಷಣಿಕವಾಗಿ ಉತ್ತಮವಾಗಿರುವ ಕಾರಣ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿಯೂ ಉತ್ತಮ ಅಂಕ ಪಡೆಯುವ ವಿಶ್ವಾಸ ನಮಗಿತ್ತು. ಇದೀಗ ಆಕೆಯ ಪರಿಶ್ರಮದ ಫಲ ಲಭಿಸಿದೆ. ಶಗುಫ್ತಾಗೆ ಪೂರ್ಣಾಂಕ ಸಿಕ್ಕಿದೆ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನು ಈ ಬಗ್ಗೆ ಮಾತನಾಡಿದ ಶಗುಫ್ತಾ, “ಶಾಲೆಯ ಶಿಕ್ಷಕರು ನನಗೆ ಅಧಿಕ ಬೆಂಬಲ ನೀಡಿದ್ದಾರೆ. ರಂಜಾನ್ ಸಮಯದಲ್ಲೂ ವಿಶೇಷ ತರಗತಿ ನಡೆಸಿದ್ದಾರೆ. ನಾನು ವೈದ್ಯೆಯಾಗುವ ಆಸೆಯನ್ನು ಹೊಂದಿದ್ದೇನೆ” ಎಂದು ತಿಳಿಸಿದ್ದಾರೆ.

ಕಳೆದ ಬಾರಿಗಿಂತ ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೇಕಡ 8ರಷ್ಟು ಹೆಚ್ಚಳವಾಗಿದೆ. 22 ವಿದ್ಯಾರ್ಥಿಗಳು 625ಕ್ಕೆ 625 ಅಂಕವನ್ನು ಪಡೆದಿದ್ದಾರೆ. ದಕ್ಷಿಣ ಕನ್ನಡ ಪ್ರಥಮ ಸ್ಥಾನ, ಎರಡನೇ ಸ್ಥಾನವನ್ನು ಉಡುಪಿ ಪಡೆದಿದೆ. ಉತ್ತರ ಕನ್ನಡ ಮೂರನೇ ಸ್ಥಾನ ಮತ್ತು ಶಿವಮೊಗ್ಗ ಜಿಲ್ಲೆ ನಾಲ್ಕನೇ ಸ್ಥಾನ ಪಡೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...