ಬೆಂಗಳೂರು ಪಾಲಿಕೆ ಚುನಾವಣೆಗೆ ಮತ ಪತ್ರ ಬಳಕೆ: ಪ್ರಜಾಪ್ರಭುತ್ವ ಬಲಪಡಿಸುವ ಮಹತ್ವದ ಹೆಜ್ಜೆ; ವೆಲ್ಫೇರ್ ಪಾರ್ಟಿ

Date:

ದೇಶದಲ್ಲಿ ಸ್ವತಂತ್ರ, ನ್ಯಾಯಸಮ್ಮತ ಹಾಗೂ ಪಾರದರ್ಶಕ ಚುನಾವಣೆಗಳು ನಡೆಯಬೇಕಾದರೆ ಮತದಾರರಲ್ಲಿ ವಿಶ್ವಾಸ ಮೂಡಿಸುವ ವ್ಯವಸ್ಥೆ ಅತ್ಯಂತ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತ ಪತ್ರ ಬಳಕೆಯನ್ನು ಪುನಃ ಜಾರಿಗೊಳಿಸುವ ಕ್ರಮವನ್ನು ನಾವು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷರಾದ ಅಡ್ವೊಕೇಟ್ ತಾಹಿರ್ ಹುಸೇನ್ ಹೇಳಿದರು.

ಇವಿಎಂ ವ್ಯವಸ್ಥೆಯ ಬಗ್ಗೆ ದೇಶದಾದ್ಯಂತ ಹಲವು ಸಂಶಯಗಳು, ಆತಂಕಗಳು ಹಾಗೂ ಚರ್ಚೆಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತ ಪತ್ರ ಬಳಕೆ ಮತದಾರರ ವಿಶ್ವಾಸವನ್ನು ಹೆಚ್ಚಿಸುವುದಲ್ಲದೆ, ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆಯನ್ನು ಬಲಪಡಿಸುತ್ತದೆ. ಮತದಾನದ ಪ್ರತಿ ಹಂತವೂ ಸಾರ್ವಜನಿಕವಾಗಿ ಪರಿಶೀಲಿಸಬಹುದಾದ ವ್ಯವಸ್ಥೆಯೇ ನಿಜವಾದ ಪ್ರಜಾಪ್ರಭುತ್ವದ ಆತ್ಮವಾಗಿದೆ ಎಂದರು.

ಇದನ್ನು ಓದಿದ್ದೀರಾ? ಮಹಾರಾಷ್ಟ್ರದಲ್ಲಿ ನಕಲಿ ಮತದಾನ? ‘ಮತದಾನಕ್ಕಾಗಿ ನನ್ನನ್ನು ಬೇರೆ ಜಿಲ್ಲೆಗೆ ಕರೆದೊಯ್ದರು’; ಮಹಿಳೆ ಹೇಳಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮತ ಪತ್ರ ಪದ್ಧತಿಯಲ್ಲಿ ಮತದಾನ, ಎಣಿಕೆ ಮತ್ತು ಫಲಿತಾಂಶ ಪ್ರಕ್ರಿಯೆ ಸ್ಪಷ್ಟವಾಗಿದ್ದು, ಯಾವುದೇ ತಂತ್ರಜ್ಞಾನ ದೋಷ ಅಥವಾ ದುರುಪಯೋಗದ ಅನುಮಾನಗಳಿಗೆ ಅವಕಾಶ ಕಡಿಮೆ. ಇದು ಗ್ರಾಮೀಣ ಪ್ರದೇಶಗಳು ಸೇರಿದಂತೆ ಎಲ್ಲ ವರ್ಗದ ಮತದಾರರಿಗೆ ಸುಲಭವಾಗಿ ಅರ್ಥವಾಗುವ ಹಾಗೂ ನಂಬಿಕೆ ಮೂಡಿಸುವ ವಿಧಾನವಾಗಿದೆ.
ಆದ್ದರಿಂದ ರಾಜ್ಯದ ಚುನಾವಣಾ ಆಯೋಗ ಹಾಗೂ ಸರ್ಕಾರವು ಮತ ಪತ್ರ ಬಳಕೆಯನ್ನು ವ್ಯಾಪಕವಾಗಿ ಜಾರಿಗೆ ತಂದು, ಪ್ರಜಾಪ್ರಭುತ್ವವನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕೆಂದು ನಾವು ಆಗ್ರಹಿಸುತ್ತೇವೆ. ಜನರ ಮತದ ಮೌಲ್ಯಕ್ಕೆ ಗೌರವ ನೀಡುವ ಯಾವುದೇ ಕ್ರಮವನ್ನು ವೆಲ್ಫೇರ್ ಪಾರ್ಟ ಆಫ್ ಇಂಡಿಯಾ ಬೆಂಬಲಿಸುತ್ತದೆ ಎಂದು ಅಡ್ವೊಕೇಟ್ ತಾಹಿರ್ ಹುಸೇನ್ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...