ಕಲಬುರಗಿ | ಗ್ಯಾರಂಟಿಗಳಿಗೆ ಪರಿಶಿಷ್ಟರ ಅನುದಾನ ಬಳಕೆ : ದಸಂಸ ಖಂಡನೆ

Date:

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನವನ್ನು ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗೆ ಖರ್ಚು ಮಾಡಲು ಮುಂದಾಗಿರುವುದು ಸರಿಯಲ್ಲ, ಕೂಡಲೇ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಜೇವರ್ಗಿ ತಾಲೂಕು ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.

ಈ ಸಂಬಂಧ ಜೇವರ್ಗಿ ಪಟ್ಟಣದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಯಿಂದ ಅಖಂಡೇಶ್ವರ ವೃತ್ತದ ಮಾರ್ಗವಾಗಿ
ಮಿನಿ ವಿಧಾನ ಸೌಧದವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯಪಾಲರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಶೀಲ್ದಾರ್‌ ಅವರಿಗೆ ಸಲ್ಲಿಸಿದರು.

ʼಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಅನುದಾನ ಸರ್ಕಾರ ಬೇರೆ ಉದ್ದೇಶಕ್ಕಾಗಿ ಬಳಸುವುದು ಖಂಡನೀಯ. ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಹಣ ಗ್ಯಾರಂಟಿ ಯೋಜನೆಗಳಿಗೆ ವಿನಿಯೋಗಿಸಿದರೆ ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳಿಗೆ ದ್ರೋಹ ಮಾಡಿದಂತಾಗುತ್ತದೆ. ಹಿಂದುಳಿದ ಸಮಾಜಗಳ ಅಭಿವೃದ್ಧಿ ಕುಂಠಿತಗೊಳ್ಳುತ್ತದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ತೆಕ್ಕೆಗೆ ಕಲಬುರಗಿ ಮಹಾನಗರ ಪಾಲಿಕೆ: ಮೇಯರ್, ಉಪ ಮೇಯರ್ ಅವಿರೋಧ ಆಯ್ಕೆ

ಈ ಸಂದರ್ಭದಲ್ಲಿ ದಸಂಸ ತಾಲೂಕು ಸಂಚಾಲಕ ಸಿದ್ರಾಮ ಕಟ್ಟಿ ಸೇರಿದಂತೆ ದಸಂಸ ಪ್ರಮುಖರಾದ ಶ್ರೀಹರ ಕರಕಿಹಳ್ಳಿ,
ಮಹೇಶ ಕೋಕಿಲೆ, ಲಕ್ಷ್ಮಣ ಡೊಳ್ಳೆ, ಪರಮಾನಂದ ಯಲಗೋಡ, ಸಿದ್ದು ಕೆರೂರ, ವಿಶ್ವರಾಧ್ಯ ಗೋಪಾಲಕರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...