ಗ್ಯಾರಂಟಿ ಯೋಜನೆ ಜಾರಿಗೆ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನ ಬಳಕೆ; ಬಸನಗೌಡ ಯತ್ನಾಳ್‌ ಕಿಡಿ

Date:

  • ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನದಲ್ಲಿ ಗ್ಯಾರಂಟಿಗಳಿಗೆ 11 ಸಾವಿರ ಕೋಟಿ ಬಳಕೆ
  • ಎಲ್ಲ ಉಚಿತ ಖಚಿತ ನಿಶ್ಚಿತ ಅನ್ನುವುದೇ ಒಂದು ದೊಡ್ಡ ಸುಳ್ಳು: ಯತ್ನಾಳ್‌ ಟೀಕೆ

ಪರಿಶಿಷ್ಟ ಜಾತಿ ಮತ್ತು ಪಂಗಡದವರ ಅಭಿವೃದ್ಧಿಗಾಗಿ ಇರುವ ವಿಶೇಷ ಅನುದಾನವನ್ನು ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಬಳಕೆ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮದ ಬಗ್ಗೆ ಶಾಸಕ ಬಸನಗೌಡ ಪಾಟೀಲ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣ ಬಳಸಿಕೊಳ್ಳಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಬಗ್ಗೆ ಕಾಳಜಿ ಇಲ್ಲದೆ ಘೋಷಣೆಗಳಿಗಾಗಿ ಹಣ ಬಳಕೆ ಮಾಡುತ್ತಿರುವುದು ಖಂಡನೀಯ” ಎಂದು ಟೀಕಿಸಿದ್ದಾರೆ.

“ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡುವಾಗ ಹಣ ಎಲ್ಲಿಂದ ಕ್ರೋಡೀಕರಿಸುವುದು ಎಂದು ಯೋಚಿಸಬೇಕಲ್ಲವೇ? ಎಲ್ಲ ಉಚಿತ ಖಚಿತ ನಿಶ್ಚಿತ ಅನ್ನುವುದೇ ಒಂದು ದೊಡ್ಡ ಸುಳ್ಳು”ಎಂದು ಯತ್ನಾಳ್‌ ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಂಚಕರು, ನಂಬಿಕೆದ್ರೋಹಿಗಳು ಕೇವಲ ಒಂದು ಸಮುದಾಯಕ್ಕೆ ಸೇರಿದವರೇ?

“ಪರಿಶಿಷ್ಟ ಜಾತಿ ಮತ್ತು ಪಂಗಡದವರ ಅಭಿವೃದ್ಧಿಗಾಗಿ ಇರುವ ವಿಶೇಷ ಘಟಕ ಯೋಜನೆ ಅನುದಾನದಲ್ಲಿ 11 ಸಾವಿರ
ಕೋಟಿಯನ್ನು ಐದು ಗ್ಯಾರಂಟಿಗಳ ಜಾರಿಗೆ ಬಳಕೆ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್‌ ಸಿ ಮಹದೇವಪ್ಪ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಇದರಲ್ಲಿ 7,570 ಕೋಟಿ ಪರಿಶಿಷ್ಟ ಜಾತಿಗೆ ಮತ್ತು 3,430 ಕೋಟಿ ಪರಿಶಿಷ್ಟ ಪಂಗಡಗಳ ಜನರಿಗಾಗಿ ಬಳಸಿದ್ದೇವೆ. ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನದಲ್ಲಿ 11 ಸಾವಿರ ಕೋಟಿ ಗ್ಯಾರಂಟಿಗಳಿಗೆ ನೀಡಲಾಗಿದೆ” ಎಂದು ಸಚಿವರು ಅನುದಾನ ಬಳಕೆ ಮಾಡಿಕೊಂಡಿರುವುದನ್ನು ಒಪ್ಪಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...