ಉತ್ತರ ಕನ್ನಡ | ಜಿಲ್ಲೆಯ 638 ರೈತರಿಗೆ ₹27.66 ಲಕ್ಷ ಬೆಳೆ ಹಾನಿ ಪರಿಹಾರ ವಿತರಣೆ

Date:

ಉತ್ತರ ಕನ್ನಡ: 2025–26ನೇ ಸಾಲಿನ ಮುಂಗಾರು ಮಳೆಯಿಂದ ಬೆಳೆ ನಷ್ಟ ಅನುಭವಿಸಿದ ಜಿಲ್ಲೆಯ ರೈತರಿಗೆ ಸರ್ಕಾರದ ಪರಿಹಾರ ಹಣ ಬಿಡುಗಡೆ ಆಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಕಾರವಾರ) ಸೂಚನೆಯಂತೆ, ಬೆಳೆ ಹಾನಿಯಾದ 638 ರೈತರ ಬ್ಯಾಂಕ್ ಖಾತೆಗೆ, ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ಪರಿಹಾರ ನಿಯಮಗಳ (NDRF/SDRF) ಪ್ರಕಾರ ರೂ. 27,66,818/- ಹಣವನ್ನು AEPS (ಆಧಾರ್ ಸಂಪರ್ಕಿತ ನೇರ ಹಣ ಪಾವತಿ ವ್ಯವಸ್ಥೆ) ಮೂಲಕ ನೇರವಾಗಿ ಜಮೆ ಮಾಡಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಮಳೆಯಿಂದ ಬೆಳೆ ನಷ್ಟವಾದ ರೈತರಿಗೆ ಹೆಚ್ಚುವರಿ ನೆರವು ನೀಡಲು ಇನ್‌ಪುಟ್ ಸಬ್ಸಿಡಿ (ಕೃಷಿ ಮರು ಆರಂಭಕ್ಕೆ ನೀಡುವ ಸಹಾಯ ಧನ) ಹಣವನ್ನು ಹೆಚ್ಚಿಸಿದೆ. ಈ ಯೋಜನೆಗೆ ನವೆಂಬರ್ 27, 2025ರಂದು, ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಡಿಯೋ ಸಂವಾದದ ಮೂಲಕ ಅಧಿಕೃತವಾಗಿ ಚಾಲನೆ ನೀಡಿದರು.

ಪರಿಷ್ಕೃತ (ಹೆಚ್ಚಿಸಿದ) ಸಬ್ಸಿಡಿ ದರಗಳು ಗರಿಷ್ಠ 2 ಹೆಕ್ಟೇರ್ ಜಮೀನಿಗೆ ಹೀಗಿವೆ: ಮಳೆಯನ್ನೇ ನಂಬಿ ಬೆಳೆಯುವ ಬೆಳೆಗಳಿಗೆ: ಹೆಕ್ಟೇರ್‌ಗೆ ರೂ. 8,500 – ರೂ. 17,000, ಬಾವಿ/ನದಿ/ಕಾಲುವೆ ನೀರಿನ ಮೂಲಕ ಬೆಳೆಯುವ ಬೆಳೆಗಳಿಗೆ: ರೂ. 17,000 – ರೂ. 25,500, ಹಲವು ವರ್ಷ ಬೆಳೆ ಕೊಡುವ ತೋಟದ ಬೆಳೆಗಳಿಗೆ (ಉದಾ: ಅಡಿಕೆ, ತೆಂಗು, ಮಾವು): ರೂ. 22,500 – ರೂ. 31,000ಈ ಹೆಚ್ಚುವರಿ ಪರಿಹಾರ ಹಣವಾಗಿ, ಜಿಲ್ಲೆಯ 638 ರೈತರ ಬ್ಯಾಂಕ್ ಖಾತೆಗೆ, ರೂ. 19,92,199/- ಅನ್ನು ಕೂಡ AEPS ಮೂಲಕ ನೇರವಾಗಿ ಪಾವತಿ ಮಾಡಲು ಜಿಲ್ಲಾಡಳಿತ ಕ್ರಮ ವಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಪಶ್ಚಿಮ ಪದವೀಧರರ ಮತಕ್ಷೇತ್ರ ಚುನಾವಣೆ–2026: 14,231 ಕರಡು ಮತದಾರರ ಪಟ್ಟಿ ಪ್ರಕಟ

ನೇರ ಹಣ ಪಾವತಿ ವ್ಯವಸ್ಥೆ ಬಳಸಿರುವುದರಿಂದ ಯಾವುದೇ ಮಧ್ಯವರ್ತಿಗಳಿಲ್ಲದೇ, ಹಣ ನೇರವಾಗಿ ರೈತರ ಖಾತೆಗಳಿಗೆ ತಲುಪಿದೆ. ಇದರಿಂದ ಪರಿಹಾರ ವಿತರಣೆಯಲ್ಲಿ ಗೊಂದಲ ಹಾಗೂ ವಿಳಂಬ ತಪ್ಪಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಮೂಲಗಳು ಹೇಳಿವೆ. ಈ ಪರಿಹಾರದಿಂದ ಮಳೆ ಹಾನಿಯಿಂದ ಸಂಕಷ್ಟದಲ್ಲಿದ್ದ ರೈತರಿಗೆ ಕೃಷಿ ಚಟುವಟಿಕೆಗಳನ್ನು ಮರು ಆರಂಭಿಸಲು, ಬಿತ್ತನೆ ಬೀಜ, ಗೊಬ್ಬರ, ಔಷಧ ಖರೀದಿಗೆ ನೆರವಾಗಲಿದೆ. ಮುಂದಿನ ಬೆಳೆ ಹಂಗಾಮಿಗೆ ಸಿದ್ಧತೆ ಮಾಡಿಕೊಂಡು, ಜೀವನ ಸಾಗಿಸಲು ಸರ್ಕಾರದ ಈ ಕ್ರಮ ಸಹಕಾರಿಯಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...