ಉತ್ತರ ಕನ್ನಡ | ರಾಜ್ಯದಲ್ಲಿ 11.80 ಲಕ್ಷ ಮಂದಿ ಅನಧಿಕೃತ ಪಿಂಚಣಿದಾರರು ಪತ್ತೆ: ಸಚಿವ ಕೃಷ್ಣ ಭೈರೇಗೌಡ

Date:

ರಾಜ್ಯದಲ್ಲಿ ಸುಳ್ಳು ದಾಖಲೆಗಳನ್ನು ಸಲ್ಲಿಸಿ ಸಾಮಾಜಿಕ ಭದ್ರತಾ ಪಿಂಚಣಿಗಳನ್ನು ಪಡೆಯುತ್ತಿರುವ 11.80 ಲಕ್ಷ ಅನಧಿಕೃತ ಪ್ರಕರಣಗಳು ಕಂಡು ಬಂದಿದ್ದು, ಇವುಗಳ ನೈಜತೆ ಬಗ್ಗೆ ಪರಿಶೀಲಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು, “ಅರ್ಹ ವ್ಯಕ್ತಿಗಳಿಗೆ ಸರ್ಕಾರದ ಸಾಮಾಜಿಕ ಭದ್ರತಾ ಪಿಂಚಣಿಯ ಪ್ರಯೋಜನ ದೊರೆಯಬೇಕು. ಆದರೆ ರಾಜ್ಯದಲ್ಲಿ 11.80 ಲಕ್ಷ ಮಂದಿ ಸುಳ್ಳು ದಾಖಲೆಗಳನ್ನು ಸಲ್ಲಿಸಿ ವೃದ್ದಾಪ್ಯ ಪಿಂಚಣಿ ಪಡೆಯುತ್ತಿರುವುದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದ್ದು, ಇದರಲ್ಲಿ 13,702 ಮಂದಿ ಆದಾಯ ತೆರಿಗೆ ಪಾವತಿದಾರರು, 117 ಮಂದಿ ಸರ್ಕಾರಿ ನೌಕರರು ಮತ್ತು ಎಪಿಎಲ್ ಕಾರ್ಡ್ ಹೊಂದಿದವರೂ ಇದ್ದಾರೆ” ಎಂದು ಹೇಳಿದರು.

“ಆಧಾರ್ ಪರಿಶೀಲನೆ ವೇಳೆಯಲ್ಲಿ ಇವರ ವಯಸ್ಸು ಯೋಜನೆಗೆ ಅರ್ಹವಾದ ವಯಸ್ಸಿಗಿಂತ ಕಡಿಮೆ ಇರುವುದು ಕಂಡುಬಂದಿದೆ. ಅಲ್ಲದೇ ಆರೋಗ್ಯಕರವಾಗಿರುವವರೂ ಕೂಡಾ ವಿಕಲಚೇತನ ಪ್ರಮಾಣ ಪತ್ರ ಪಡೆದು ವಿಕಲಚೇತನರ ಪಿಂಚಣಿ ಪಡೆಯುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಇಂತಹ ಪ್ರಕರಣಗ ಬಗ್ಗೆ ಪುನರ್‌ಪರಿಶೀಲನೆ ಮಾಡಲಾಗುವುದು. ಇದು ಸರ್ಕಾರಕ್ಕೆ ಮಾಡುವ ವಂಚನೆ ಮಾತ್ರವಲ್ಲದೆ ಸಾರ್ವಜನಿಕರಿಗೆ ಮಾಡುವ ವಂಚನೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 11,956 ಮಂದಿ ಈ ರೀತಿಯಾಗಿ ಅನಧಿಕೃತವಾಗಿ ಪಿಂಚಣಿ ಪಡೆಯುತ್ತಿದ್ದು, ಇದರಲ್ಲಿ 351 ಮಂದಿ ಆದಾಯ ತೆರಿಗೆ ಪಾವತಿದಾರರು ಇದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಪೌತಿ ಖಾತೆ ಆಂದೋಲನವನ್ನು ಆನ್‌ಲೈನ್ ಮೂಲಕ ಆರಂಭ ಮಾಡಲಾಗಿದ್ದು, ರಾಜ್ಯದಲ್ಲಿ 52.55 ಲಕ್ಷ ಜಮೀನುಗಳು ಮೃತ ರೈತರ ಹೆಸರಿನಲ್ಲಿ ಮುಂದುವರದಿವೆ. ಕೇಂದ್ರ ಸರ್ಕಾರ ಮೃತರ ಹೆಸರಿನಲ್ಲಿ ಇರುವ ಜಮೀನುಗಳಿಗೆ ಪಿಎಂ ಕಿಸಾನ್ ಸೇರಿದಂತೆ ಇತರೇ ಯೋಜನೆಗಳ ಸಬ್ಸಡಿ ನೀಡದಂತೆ ಸೂಚಿಸಿದ್ದು, ಇದರಿಂದಾಗಿ ಮೃತರ ಹೆಸರಿನಲ್ಲಿರುವ ಜಮಿನುಗಳನ್ನು ಅವರ ವಾರಸುದಾರಿಗೆ ಖಾತೆ ಬದಲಾವಣೆ ಮಾಡುವ ಅನಿವಾರ್ಯತೆ ಇದೆ. ಇದಕ್ಕಾಗಿ ಕಂದಾಯ ಇಲಾಖೆ ಅಧಿಕಾರಿಗಳ ಮೂಲಕ ಜನರ ಮನೆ ಬಾಗಿಲಿಗೆ ತೆರಳಿ ಖಾತೆ ಬದಲಾವಣೆ ಮಾಡಿಕೊಡಲಾಗುತ್ತಿದೆ” ಎಂದು ಹೇಳಿದರು.

“ರಾಜ್ಯದಲ್ಲಿ ಒಂದು ತಿಂಗಳ ಅವಧಿಯಲ್ಲಿ 20,000 ರೈತರ ಜಮೀನುಗಳನ್ನು ಮೃತರ ವಾರಿಸುದಾರರಿಗೆ ವರ್ಗಾವಣೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಈ ಕಾರ್ಯವನ್ನು ಇನಷ್ಟು ಶೀಘ್ರದಲ್ಲಿ ಮಾಡಲಾಗುವುದು. ಉತ್ತರ ಕನ್ನಡ ಜಿಲ್ಲೆಯಲ್ಲಿ 1.90 ಲಕ್ಷ ಜಮೀನುಗಳು 57,000 ಮೃತ ರೈತರ ಹೆಸರಿನಲ್ಲಿವೆ, 6 ತಿಂಗಳಲ್ಲಿ ಇದನ್ನು ಅವರ ವಾರಿಸುದಾರರಿಗೆ ಉಚಿತವಾಗಿ ಮಾಡಿಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದರು.

“ರಾಜ್ಯಾದ್ಯಂತ ಇರುವ ಹಳೆಯ ಕಂದಾಯ ದಾಖಲೆಗಳನ್ನು ಸಂರಕ್ಷಿಸಲು ಭೂ ಸುರಕ್ಷಾ ಯೋಜನೆ ಅನುಷ್ಠಾನ ಮಾಡಲಾಗಿದ್ದು, ಹಳೆಯ ದಾಖಲೆಗಳನ್ನು ಸ್ಕ್ಯಾನಿಂಗ್ ಮಾಡಿ ಡಿಜಿಟಲೈಸೇಶನ್ ಮಾಡಲಾಗುತ್ತಿದೆ. ಈ ಮೂಲಕ ಸಾರ್ವಜನಿಕರಿಗೆ ಬೆರಳ ತುದಿಯಲ್ಲಿ ತಮ್ಮ ಕಂದಾಯ ದಾಖಲೆ ತಲುಪಿಸಲಾಗುವುದು. ಕಂದಾಯ ದಾಖಲೆಗಳ ನಕಲಿ ಸೃಷ್ಟಿ, ತಿದ್ದುಪಡಿ ಮತ್ತು ಪೋರ್ಜರಿಗೆ ಕಡಿವಾಣ ಹಾಕುವ ಉದ್ದೇಶದಿಂದ ಅಂದಾಜು 100 ಕೋಟಿ ಪುಟಗಳ ಕಂದಾಯ ದಾಖಲೆಗಳಲ್ಲಿ ಈವರೆಗೆ 33.1 ಕೋಟಿ ಪುಟಗಳನ್ನು ಸ್ಕ್ಯಾನ್ ಮಾಡಲಾಗಿದ್ದು, ಮುಂದಿನ 6 ತಿಂಗಳ ಒಳಗೆ ಈ ಎಲ್ಲ ದಾಖಲೆಗಳನ್ನು ಸಂಪೂರ್ಣವಾಗಿ ಗಣಕೀಕರಣಗೊಳಿಸಲು ಸೂಚನೆ ನಿಡಲಾಗಿದೆ. ಇದರಿಂದ ಸಾರ್ವಜನಿಕರು ತಮ್ಮ ಕಂದಾಯ ದಾಖಲೆಗಳಿಗೆ ತಾಲೂಕು ಕಚೇರಿಗೆ ಅಲೆದಾಡದೆ, ಮನೆಯಲ್ಲಿಯೇ ಕುಳಿತು ಭೂ ಸುರಕ್ಷಾ ಆನ್‌ಲೈನ್ ಪೋರ್ಟಲ್ ಮೂಲಕ ಉಚಿತವಾಗಿ ಅಧಿಕೃತ ದಾಖಲೆಗಳನ್ನು ಪಡೆಯಬಹುದು” ಎಂದರು.‌

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಪಿಎಚ್‌ಸಿಗೆ ಕಾಯಂ ವೈದ್ಯರ ನೇಮಕಕ್ಕೆ ಮೆಟಗುಡ್ಡ ಗ್ರಾಮಸ್ಥರ ಆಗ್ರಹ: ಟಿಎಚ್‌ಒ ಭರವಸೆ

“ಕಂದಾಯ ಇಲಾಖೆಯಲ್ಲಿ ಜನಪರ ಆಡಳಿತ ಸುಧಾರಣೆಯು ಎಲ್ಲ ಹಂತದಲ್ಲಿ ನಡೆಯುತ್ತಿದ್ದು, ನಮ್ಮ ಸರ್ಕಾರದ ಅವಧಿಯಲ್ಲಿ ತಹಶೀಲ್ದಾರ್ ಕೋರ್ಟ್‌ನಲ್ಲಿ ಈ ಹಿಂದೆ ಕೇಸ್ ಬಾಕಿಯಿದ್ದ ಅವಧಿ ಮೀರಿದ 10,774 ಪ್ರಕರಣಗಳನ್ನು ಆಂದೋಲನ ಮಾದರಿಯಲ್ಲಿ ವಿಲೇವಾರಿ ಮಾಡಲಾಗುತ್ತಿದ್ದು, ಪ್ರಸ್ತುತ ಇವುಗಳ ಸಂಖ್ಯೆಯನ್ನು 457ಕ್ಕೆ ಇಳಿಸಲಾಗಿದೆ. ಎಸಿ ಕೋರ್ಟ್‌ನಲ್ಲಿದ್ದ 62,857 ಅವಧಿ ಮೀರಿದ ಪ್ರಕರಣಗಳನ್ನು ಪ್ರಸ್ತುತ 19,219ಕ್ಕೆ ಇಳಿಸಿದ್ದು ಶೇ.66ರಷ್ಟು ವಿಲೇವಾರಿ ಮಾಡಲಾಗಿದೆ” ಎಂದರು.

ಸಭೆಯಲ್ಲಿ ಎಂಸಿಎ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್, ಶಿರಸಿ ಶಾಸಕ ಭೀಮಣ್ಣ ನಾಯ್ಕ್, ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಪ್ ಶಶಿ, ಅಪರ ಜಿಲ್ಲಾದಿಕಾರಿ ಸಾಜಿದ್ ಮುಲ್ಲಾ, ಎಎಸ್‌ಪಿ ಜಗದೀಶ್, ಭೂ ದಾಖಲೆಗಳ ಇಲಾಖೆಯ ಜಂಟಿ ನಿರ್ದೇಶಕ ಉಮೇಶ್, ಜಿಲ್ಲೆಯ ಎಲ್ಲ ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರ್‌ಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...