ಉತ್ತರ ಕನ್ನಡ | ಮುಂಡಗೋಡದಲ್ಲಿ ಧರ್ಮಗುರು ದಲೈಲಾಮಾರ 90ನೇ ವರ್ಷದ ಜನ್ಮ ದಿನಾಚರಣೆ

Date:

ಟಿಬೇಟಿಯನ್ ಧರ್ಮಗುರು, ವಿಶ್ವ ಶಾಂತಿ ಮತ್ತು ಕರುಣೆಯ ಪ್ರತೀಕ ದಲೈಲಾಮಾ ಅವರ 90ನೇ ಜನ್ಮದಿನವನ್ನು ಉತ್ತರ ಕನ್ನಡ ಜಿಲ್ಲೆ ಮುಂಡಗೋಡದ ಟಿಬೇಟಿಯನ್ ಶರಣಾರ್ಥಿ ಶಿಬಿರ ಸಂಖ್ಯೆ-6 ರಲ್ಲಿರುವ ಡ್ರೆಪುಂಗ್ ಲೋಸೆಲಿಂಗ್ ಬೃಹತ್ ಬೌದ್ಧ ಮಠದಲ್ಲಿ ಭವ್ಯವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ, ದಲೈ ಲಾಮಾ ಅವರ ಧ್ಯಾನ, ತತ್ವ ಮತ್ತು ಮಾನವೀಯ ಸಂದೇಶಗಳನ್ನು ಚರ್ಚಿಸುವುದರ ಜೊತೆಗೆ, ಅವರ ದೀರ್ಘಾಯುಷ್ಯಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಶಂಕರ್ ಗೌಡಿ ಮಾತನಾಡಿ, “ದಲೈ ಲಾಮಾ ಜಗತ್ತಿಗೆ ಶಾಂತಿ ಮತ್ತು ಕರುಣೆಯ ರಾಯಭಾರಿಯಾಗಿದ್ದು, ಅವರ ಸಂದೇಶಗಳು ಈ ದಿನದ ಜಗತ್ತಿಗೆ ಅತ್ಯಗತ್ಯವಾಗಿವೆ. ಮಾನವೀಯತೆ, ಸಹಿಷ್ಣುತೆ ಮತ್ತು ದಯೆಯ ಬೆಳಕು ಹಂಚುವ ಈ ಮಹಾನ್ ಧರ್ಮಗುರು ಈ ಕಾಲಘಟ್ಟದ ಅತೀವ ಅಗತ್ಯ,” ಎಂದು ಹೇಳಿದರು.

WhatsApp Image 2025 06 26 at 3.27.07 PM

ಈ ಕಾರ್ಯಕ್ರಮದಲ್ಲಿ ಇಂಡೋ-ಟಿಬೇಟಿಯನ್ ಫ್ರೆಂಡ್‌ಶಿಪ್ ಸೊಸೈಟಿ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಬಣ) ಮುಖಂಡರು ಭಾಗಿಯಾಗಿದ್ದರು. ಮಠಾಧೀಶ ಪರಮಪೂಜ್ಯ ಯೇಶಿ ತುಂಡುಪ್ ಲಾಮಾ, ದಲೈ ಲಾಮಾ ಅವರ ತತ್ವವನ್ನು ಪ್ರತಿನಿಧಿಸಿ ಮಾತನಾಡುತ್ತಾ, ಬೌದ್ಧ ತತ್ತ್ವಗಳ ಆಳವನ್ನು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: https://eedina.com/world/iran-israel-conventional-war-is-indias-neutral-stance-right/2025-06-26/

ಬೌದ್ಧ ತತ್ತ್ವ, ವಿಶ್ವ ಶಾಂತಿ, ದಲೈ ಲಾಮಾ ಅವರ ಧರ್ಮದರ್ಶನ ಹಾಗೂ ಡಾ. ಬಿ. ಆರ್. ಅಂಬೇಡ್ಕರ್ ಅವರ ಚಿಂತನೆಗಳ ಕುರಿತು ಆಳವಾದ ಚರ್ಚೆ ನಡೆಯಿತು.

WhatsApp Image 2025 06 26 at 3.27.42 PM

ದ.ಸಂ.ಸ. ರಾಜ್ಯ ಸಂಘಟನಾ ಸಂಚಾಲಕ ಎಸ್. ಪಕ್ಕೀರಪ್ಪ, ಮುಂಡಗೋಡ ಘಟಕದ ಲಕ್ಷ್ಮಣ ಭೋವಿವಡ್ಡರ ಮತ್ತು ಪರಶುರಾಮ ಪೂಜಾರ, ಅಂಬೇಡ್ಕರ್ ಸಹಕಾರಿ ಸಂಘದ ಪಿಆರ್‌ಒ ಪ್ರಮೋದ ರತ್ನಾಕರ್ ಮತ್ತು ಪೂಜ್ಯ ಜಂಪಾ ಲಾಮಾ ಗುರೂಜಿಗಳು ತಮ್ಮ ಅಭಿಪ್ರಾಯ ಹಂಚಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...