ಉತ್ತರ ಕನ್ನಡ | ಕೆಡಿಪಿ ಸಭೆಯಲ್ಲಿ ಸಚಿವ-ಶಾಸಕರ ನಡುವೆ ತಾರಕಕ್ಕೇರಿದ ವಾಗ್ವಾದ; ಸಭೆಯಿಂದ ಹೊರನಡೆದ ಸತೀಶ್ ಸೈಲ್

Date:

ಉತ್ತರ ಕನ್ನಡ: ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯು ಅನಿರೀಕ್ಷಿತ ಹೈಡ್ರಾಮಾಗೆ ಸಾಕ್ಷಿಯಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹಾಗೂ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಅವರ ನಡುವೆ ಔಷಧ ಮತ್ತು ವೈದ್ಯರ ಕೊರತೆಯ ವಿಷಯವಾಗಿ ತೀವ್ರ ಮಾತಿನ ಚಕಮಕಿ ನಡೆದು, ಶಾಸಕರು ಸಭೆಯಿಂದ ಅರ್ಧಕ್ಕೇ ಹೊರನಡೆದ ಘಟನೆ ಸಂಭವಿಸಿದೆ.

ಸಭೆಯ ಆರಂಭದಲ್ಲಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ಔಷಧಗಳ ಅಭಾವದ ಬಗ್ಗೆ ಶಾಸಕ ಸತೀಶ್ ಸೈಲ್ ಪ್ರಸ್ತಾಪಿಸಿದರು. “ಕೆಲವು ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಅಗತ್ಯವಿರುವ ಮೂಲಭೂತ ಔಷಧಿಗಳೂ ಸಿಗುತ್ತಿಲ್ಲ” ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದಾಗ,

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಮಂಕಾಳ ವೈದ್ಯ ಅವರು “ಆಸ್ಪತ್ರೆಗಳಲ್ಲಿ ಮೊದಲು ವೈದ್ಯರೇ ಇಲ್ಲ ಅಂದ ಮೇಲೆ ಇನ್ನು ಔಷಧ ಇದ್ದು ಏನು ಪ್ರಯೋಜನ?” ಎಂದು ಲೇವಡಿ ಮಾಡುವ ಧಾಟಿಯಲ್ಲಿ ಉತ್ತರಿಸಿದರು.

1000564237

ಸಚಿವರ ಈ ಮಾತಿನಿಂದ ಕೆರಳಿದ ಶಾಸಕರು, “ವೈದ್ಯರನ್ನು ನೇಮಕ ಮಾಡುವುದು ಯಾರ ಕೆಲಸ? ಅದು ನನ್ನ ಕೆಲಸವೇ ಅಥವಾ ಸರ್ಕಾರದ ಜವಾಬ್ದಾರಿಯೇ?” ಎಂದು ಮರುಪ್ರಶ್ನೆ ಹಾಕಿದರು. ಈ ಸಂದರ್ಭದಲ್ಲಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ಹೋಯಿತು.

ಸಚಿವರು “ನೀವು ಸುಮ್ಮನೆ ಕುಳಿತುಕೊಳ್ಳಿ, ನಿಮ್ಮ ಕೈಯಲ್ಲಿ ಆಗದಿದ್ದರೆ ನಾನು ಮಾಡ್ತೀನಿ, ಅತಿಯಾಗಿ ಮಾತನಾಡಬೇಡಿ” ಎಂದು ಏರುಧ್ವನಿಯಲ್ಲಿ ಹೇಳಿದ್ದು ಶಾಸಕರನ್ನು ಮತ್ತಷ್ಟು ಕೆರಳಿಸಿತು.

ಸಚಿವರ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸತೀಶ್ ಸೈಲ್, “ನಾನೇನು ಅಂಗೂಠಾ ಚಾಪ್ (ಹೆಬ್ಬೆಟ್ಟು ಗುರುತಿನವನು) ಅಲ್ಲ. ಜನರ ಸಮಸ್ಯೆಗಳನ್ನು ಕೇಳಲು ನಾವು ಇಲ್ಲಿಗೆ ಬಂದಿದ್ದೇವೆ.

ಈ ಸುದ್ದಿ ಓದಿದ್ದೀರಾ ? ದಾಂಡೇಲಿಯಲ್ಲಿ ಕರಗುತ್ತಿರುವ ಕಲರವ; ಪ್ರವಾಸಿಗರ ಅಬ್ಬರಕ್ಕೆ ಬೆದರಿದ ʼಹಾರ್ನ್‌ಬಿಲ್‌ʼ ಪಕ್ಷಿ ಪ್ರಭೇದ!

ತಾಲ್ಲೂಕು ಮಟ್ಟದ ಸಮಸ್ಯೆಗಳನ್ನು ಜಿಲ್ಲಾ ಮಟ್ಟದ ಸಭೆಯಲ್ಲಿ ಚರ್ಚಿಸಬೇಡಿ ಎನ್ನುವುದಾದರೆ ನಾವು ಸಭೆಗೆ ಬರುವ ಅಗತ್ಯವೇನಿದೆ? ನಮಗೆ ಬರಲು ಇಷ್ಟವಿಲ್ಲದಿದ್ದರೆ ನೇರವಾಗಿ ಹೇಳಿ, ನಾವು ಬರುವುದಿಲ್ಲ” ಎಂದು ಗುಡುಗಿದರು. ಸಚಿವರಿಂದ ಯಾವುದೇ ಸಮಾಧಾನಕರ ಪ್ರತಿಕ್ರಿಯೆ ಬಾರದಿದ್ದಾಗ, ಶಾಸಕ ಸತೀಶ್ ಸೈಲ್ ಸಭೆಯಿಂದ ಹೊರನಡೆದರು.

ಆಡಳಿತ ಪಕ್ಷದ ಇಬ್ಬರು ಪ್ರಮುಖ ನಾಯಕರ ನಡುವಿನ ಈ ಬಹಿರಂಗ ಸಂಘರ್ಷ ಸಭೆಯಲ್ಲಿದ್ದ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ, ಶಾಸಕ ಭೀಮಣ್ಣ ನಾಯ್ಕ್ ಸೇರಿದಂತೆ ಹಿರಿಯ ಅಧಿಕಾರಿಗಳನ್ನು ದಿಗ್ಭ್ರಮೆಗೊಳಿಸಿತು. ಸಾರ್ವಜನಿಕ ಸಮಸ್ಯೆಗಳ ಚರ್ಚೆಯ ವೇದಿಕೆಯಾಗಬೇಕಿದ್ದ ಕೆಡಿಪಿ ಸಭೆಯು ಜನಪ್ರತಿನಿಧಿಗಳ ಪ್ರತಿಷ್ಠೆಯ ಕಣವಾಗಿ ಬದಲಾಗಿದ್ದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...