ಉತ್ತರ ಕನ್ನಡ | ಅನಂತ ಕುಮಾರ್ ಹೇಳಿಕೆಯಿಂದ ಜಿಲ್ಲೆಯ ಜನ ತಲೆ ತಗ್ಗಿಸುವಂತಾಗಿದೆ: ಕಾಂಗ್ರೆಸ್‌ ಮುಖಂಡ ದೀಪಕ್

Date:

“ವೇದ, ಸಂಸ್ಕೃತಿ‌ ಬಗ್ಗೆ ಮಾತನಾಡುವ ಸಂಸದ ಅನಂತ್ ಕುಮಾರ್ ಹೆಗಡೆ ಅವರು ಸಿಎಂ ಸಿದ್ದರಾಮಯ್ಯ ಅವರ‌ ಬಗ್ಗೆ ಏಕವಚನ, ಅಸಂವಿಧಾನಿಕವಾಗಿ ಮಾತನಾಡಿದ್ದು, ಜಿಲ್ಲೆಯ ಜನ ತಲೆ ತಗ್ಗಿಸುವಂತಾಗಿದೆ. ಇಂಥ ಜನಪ್ರತಿನಿಧಿಗಳು ಯಾವುದೇ ಪಕ್ಷದಲ್ಲಿ ಇದ್ದರೂ ಆ ಪಕ್ಷಕ್ಕೆ ಮುಜುಗರ” ಎಂದು ಕಾಂಗ್ರೆಸ್ ವಕ್ತಾರ ದೀಪಕ್ ದೊಡ್ಡೂರು ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಸುಪ್ರಿಯಾ ಹೋಟೆಲ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.

“ಸಂಸದ ಅನಂತ್ ಕುಮಾರ್ ಹೆಗಡೆ ನಾಲಾಯಕ್ಕು ಮನುಷ್ಯ. ಅವರು ರಾಷ್ಟ್ರಮಟ್ಟಕ್ಕೆ ಹೋದ ಬಳಿಕ ಜಿಲ್ಲೆಗೆ ಮಸಿ ಬಳಿಯುವಂತಾಗಿದೆ. ಅಗೌರವ ತೋರಿಸುವಂಥದ್ದು ಸಂಸದರಿಗೆ ಹೊಸತಲ್ಲ. ಜಿಲ್ಲೆಗೆ ಹಿಂದೆ ಪ್ರಧಾನಿಗಳು ಬಂದಾಗಲೂ‌ ಸಮಯ‌ ಕೊಡಲಿಲ್ಲ.‌ ಮೊನ್ನೆ‌ ಮೊನ್ನೆ ಗೂಡಿನಿಂದ ಹೊರ‌ ಬಂದು ಸಿಎಂ ಸಿದ್ದರಾಮಯ್ಯ ಬಗ್ಗೆ ಏಕವಚನ‌ ಪದ‌ ಪ್ರಯೋಗ ಮಾಡಿದ್ದಾರೆ. ನಾಲ್ಕೂವರೆ ವರ್ಷ ಜನರಿಗೆ ಧ್ವನಿಯಾಗದೆ ಜನರ ನಕಾರಾತ್ಮಕ ಹೇಳಿಕೆ ನೀಡಿದ್ದಾರೆ. ಇದನ್ನು ಆತ ಬಿಡಬೇಕು. ಈ‌ ಜಿಲ್ಲೆಯ ಜನ ಸಾಕಷ್ಟು ಅವಧಿಯ ತನಕ ಅನಂತರ ಹರಿಕತೆ ಕೇಳಿಯೂ ಆಯಿತು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ಸಿದ್ದರಾಮಯ್ಯ ಬಗ್ಗೆ ಅವಹೇಳನ; ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಪ್ರತಿಭಟನೆ

“ಜನಪ್ರತಿನಿಧಿಗಳಾದವರು ಕೋಮು ಸೌಹಾರ್ದತೆ ಹೊಂದಿರಬೇಕು. ಆದರೆ, ಅನಂತನ ನಡೆಯಿಂದ ಆತಂಕ ಉಂಟಾಗಿದೆ. ಅನಂತರು ಇತಿಹಾಸಕಾರರು, ಸಾಹಿತ್ಯಕ್ಕೆ ಮಹತ್ವ ಕೊಟ್ಟರೆ ಹೆಚ್ಚಿನ ಹೆಸರು ಅವರಿಗೆ ಬರುತ್ತಿತ್ತು. ಸಂಸದರು ಅಬ್ಬರಿಸುವುದು ಕೋಮು ಸೌಹಾರ್ದ ಕೆಡಿಸಲು ಮಾತ್ರ. ಅಭಿವೃದ್ಧಿ ಬಗ್ಗೆ ಅವರು ಮಾತನಾಡುತ್ತಿಲ್ಲ. ಅಂಕೋಲಾ‌ ಹುಬ್ಬಳ್ಳಿ ರೈಲ್ವೆ, ರಸ್ತೆ ಅಭಿವೃದ್ಧಿಯಾಗಿಲ್ಲ. ವಿಮಾನ ನಿಲ್ದಾಣ ಬಂದಿಲ್ಲ” ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...