ಉತ್ತರ ಕನ್ನಡ | ಅಂಬೇಡ್ಕರ್, ಇಂದಿರಾ ಗಾಂಧಿ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Date:

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಮತ್ತು ಇಂದಿರಾ ಗಾಂಧಿ ವಸತಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಆರನೇ ತರಗತಿ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪ್ರಸ್ತುತ 2025-26ನೇ ಸಾಲಿನಲ್ಲಿ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಈ ಸುವರ್ಣಾವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

ಆಸಕ್ತ ವಿದ್ಯಾರ್ಥಿಗಳು ಮತ್ತು ಪೋಷಕರು ದಿನಾಂಕ 10-01-2026 ರಿಂದ 25-01-2026ರ ಸಂಜೆ 4:00 ಗಂಟೆಯ ಒಳಗೆ ಆನ್‌ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಪ್ರವೇಶಾತಿಗಾಗಿ ವಿಶೇಷ ಪ್ರವೇಶ ಪರೀಕ್ಷೆಯನ್ನು 2026ರ ಮಾರ್ಚ್ 1ರಂದು ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರೀಕ್ಷೆಗೆ ಹಾಜರಾಗಲು ಅಗತ್ಯವಿರುವ ಪ್ರವೇಶ ಪತ್ರಗಳನ್ನು (Hall Ticket) ಫೆಬ್ರವರಿ 18 ರಿಂದ ಸಂಬಂಧಪಟ್ಟ ವೆಬ್‌ಸೈಟ್‌ಗಳ ಮೂಲಕ ಅಥವಾ ಆಯಾ ವಸತಿ ಶಾಲೆಗಳಲ್ಲಿ ಡೌನ್‌ಲೋಡ್ ಮಾಡಿಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಕಾರವಾರ | ಪ್ರೀತಿ ನಿರಾಕರಣೆಗೆ ಕಿರುಕುಳ ಆರೋಪ; ಯುವತಿ ಆತ್ಮಹತ್ಯೆ, ಜೆಡಿಎಸ್ ಜಿಲ್ಲಾ ನಾಯಕಿಯ ಪುತ್ರನ ಹೆಸರು ದೂರಿನಲ್ಲಿ

ಅರ್ಜಿ ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ನಿಯಮಾವಳಿಗಳಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/kreis2026 ಅಥವಾ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವೆಬ್‌ಸೈಟ್ http://kreis.karnataka.gov.in ಗೆ ಭೇಟಿ ನೀಡಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಬಾಸಗೋಡ ಹೋಬಳಿಯ (ಹಾಲಿ ಬೆಳಸೆ) ಅಂಬೇಡ್ಕರ್ ವಸತಿ ಶಾಲೆಯ ಪ್ರಾಂಶುಪಾಲರನ್ನು ಮೊಬೈಲ್ ಸಂಖ್ಯೆ 9482185887 ಮೂಲಕ ಅಥವಾ ಬೆಳಸೆಯ ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಾಂಶುಪಾಲರನ್ನು ಮೊಬೈಲ್ ಸಂಖ್ಯೆ 9449203033 ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...