ಉತ್ತರ ಕನ್ನಡ | ಯುವತಿಗೆ ಉದ್ಯೋಗ ಕೊಡಿಸಲು ಹೊರಟಿದ್ದ ಯುವಕನ ಮೇಲೆ ಹಲ್ಲೆ

Date:

ಯುವತಿಗೆ ಉದ್ಯೋಗ ಕೊಡಿಸಲೆಂದು ಕರೆದೊಯ್ಯುತ್ತಿದ್ದ ಯುವಕನ ಮೇಲೆ ಪ್ರೀತಿ ಮಾಡುತ್ತಿದ್ದಾನೆ ಎಂದು ಅನುಮಾನಿಸಿ ಮೂವರು ಯುವಕರು ಹಲ್ಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.

ನಗರದ ಶಿವಾಜಿ ಚೌಕ್ ಬಳಿ‌ ಈ ಘಟನೆ ನಡೆದಿದ್ದು, ಶಿರಸಿ ತಾಲೂಕಿನ ಕೊರ್ಲಕಟ್ಟಾ ಗೌಡಕೊಪ್ಪದ ವೀರೇಂದ್ರ ಜೀನದತ್ತ ಜೈನ್ ಎಂಬ 21ವರ್ಷದ ಯುವಕ ಹತ್ತಿರದ ಚನ್ನಾಪುರ ಗ್ರಾಮದ ನಿವಾಸಿಯಾದ ಉಸ್ಮಾ ಬಾನು ಎಂಬ ಯುವತಿಗೆ ಕೆಲಸ ಕೊಡಿಸಲು ಕರೆದೊಯ್ಯುತ್ತಿದ್ದನು. ಈ ಮೊದಲು ಇವರಿಬ್ಬರಿಗೂ ಪರಿಚಯವಿತ್ತು ಎನ್ನಲಾಗಿದೆ. ಮುಸ್ಲಿಂ ಯುವತಿಯನ್ನು ಕರೆದೊಯ್ಯುತ್ತಿರುವುದು ಹಿಂದೂ ಯುವಕನಾದ ಕಾರಣ ವೀರೇಂದ್ರನನ್ನು ಅನುಮಾನಿಸಿ ಶಕೀಲ್ ಅಹ್ಮದ್ (24), ಮಹಮ್ಮದ್ ಮಾಜ್ (26) ಹಾಗೂ ಶಿರಸಿ ಗೋಲಗೇರಿ ಓಣಿಯ ಉಬೇದ್ ಸವಣೂರ್ (25) ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಧಾರವಾಡ | 6 ಮಕ್ಕಳ ಅಪಹರಣ: ಹೆತ್ತ ತಾಯಂದಿರೇ ಮಾಡಿದ್ದು ಏಕೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುವತಿಯನ್ನು ಕೆಲಸ ಕೊಡಿಸಲು ಶಿರಸಿ ರೋಟರಿ ಆಸ್ಪತ್ರಗೆ ಕರೆದುಕೊಂಡು ಹೊರಟಾಗ, ಮಾರ್ಗಮಧ್ಯದಲ್ಲಿ ವೀರೇಂದ್ರ ಮತ್ತು ಉಸ್ಮಾಬಾನು ಐಸ್ ಕ್ರೀಂ ತಿನ್ನುತ್ತಿದ್ದ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಆರೋಪಿಗಳು, ಮುಸ್ಲಿಂ ಹುಡುಗಿಯನ್ನು ಪ್ರೀತಿ ಮಾಡುತ್ತೀಯಾ ಎಂದು ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ಬೈಯ್ದು ಕಾಲಿನಿಂದ ತುಳಿದು, ಕಲ್ಲಿನಿಂದ ಬೆನ್ನಿಗೆ ಹೊಡೆದಿದ್ದಾರೆ ಎನ್ನಲಾಗಿದೆ. ಈ ಕುರಿತು ಶಿರಸಿ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...