ಉತ್ತರ ಕನ್ನಡ | ಅಕ್ರಮ ಗಾಂಜಾ ಮಾರುತ್ತಿದ್ದ ಆಟೋ ಚಾಲಕನ ಬಂಧನ; 6 ಸಾವಿರ ಮೌಲ್ಯದ ಗಾಂಜಾ ವಶ

Date:

ಉತ್ತರ ಕನ್ನಡದ ಶಿರಸಿ ನಗರದ ಹೊಸ ಬಸ್ ನಿಲ್ದಾಣದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಹಾವೇರಿ ಮೂಲದ ಆಟೋ ಚಾಲಕನನ್ನು ಶಿರಸಿ ನಗರ ಠಾಣಾ ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ. ಹಾವೇರಿಯ ಅಂಬೇಡ್ಕರ್ ಸರ್ಕಲ್ ನಿವಾಸಿ ಅಬ್ದುಲ್ ರಜಾಕ್ ಅಬ್ದುಲ್ ಮುನಾಫ್ ಬಾಗಲಕೋಟೆ (30) ಬಂಧಿತ ಆರೋಪಿ.

ಭಾನುವಾರ ರಾತ್ರಿ 10:30 ರ ಸುಮಾರಿಗೆ ಶಿರಸಿಯ ಹೊಸ ಬಸ್ ನಿಲ್ದಾಣದ ಶೌಚಾಲಯದ ಮುಂಭಾಗದ ಕಟ್ಟೆಯ ಮೇಲೆ ಕುಳಿತು ಗಾಂಜಾ ಮಾರಾಟಕ್ಕೆ ಸಿದ್ಧತೆ ನಡೆಸುತ್ತಿದ್ದ. ಆಗ ಗಸ್ತು ತಿರುಗುತ್ತಿದ್ದ ಪೊಲೀಸ್ ಜೀಪನ್ನು ಕಂಡು ಓಡಿಹೋಗಲು ಪ್ರಯತ್ನಿಸಿದ್ದ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ 108 ಗ್ರಾಂ ತೂಕದ ಸುಮಾರು ₹6,000 ಮೌಲ್ಯದ ಗಾಂಜಾ ಹಾಗೂ ಪೊಟ್ಟಣಗಳನ್ನು ಕಟ್ಟಿಕೊಡಲು ಇಟ್ಟುಕೊಂಡಿದ್ದ 20 ಸಣ್ಣ ಪ್ಲಾಸ್ಟಿಕ್ ಚೀಲಗಳನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್‌ಐ ನಾರಾಯಣ ರಾಥೋಡ್ ಅವರು ತನಿಖೆ ಮುಂದುವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಉತ್ತರ ಕನ್ನಡ | ಸ್ವಚ್ಛತೆಯಲ್ಲಿ ಪ್ರಥಮ ಸ್ಥಾನ ಪಡೆದ ಅಂಕೋಲಾ ಬಸ್ ನಿಲ್ದಾಣ

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಹೆಚ್ಚುವರಿ ಎಸ್ಪಿಗಳಾದ ಜಿ. ಕೃಷ್ಣಮೂರ್ತಿ ಹಾಗೂ ಜಗದೀಶ್, ಶಿರಸಿ ಡಿವೈಎಸ್‌ಪಿ ಗೀತಾ ಪಾಟೀಲ್ ಮತ್ತು ಸಿಪಿಐ ಶಶಿಕಾಂತ್ ವರ್ಮಾ ಅವರ ಮಾರ್ಗದರ್ಶನದಲ್ಲಿ, ನಗರ ಠಾಣೆಯ ಪಿಎಸ್‌ಐ ನಾಗಪ್ಪ ಬಿ. ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಸದ್ದಾಂ ಹುಸೇನ್, ಚನ್ನಬಸಪ್ಪ ಕ್ಯಾರಕಟ್ಟಿ, ರಾಮಯ್ಯ ಪೂಜಾರಿ, ಹನುಮಂತ ಮಾಕಾಪುರ, ರಾಜಶೇಖರ, ಸುನೀಲ್ ಹಡಲಗೆ, ರಾಜು ಎಂ ಹಾಗೂ ಸುದರ್ಶನ ನಾಯ್ಕ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...