ಉತ್ತರ ಕನ್ನಡ | ಸಿಜೆಐ ಮೇಲೆ ಶೂ ಎಸೆತ ಪ್ರಕರಣ; ಆರೋಪಿ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲು ಭೀಮಘರ್ಜನೆ ಆಗ್ರಹ

Date:

ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಲ್ಲಿ ಭೀಮಘರ್ಜನೆ ಸಂಘಟನೆ ವತಿಯಿಂದ ಸಿ.ಜೆ.ಐ. ಗವಾಯಿ ಅವರ ಮೇಲೆ ಶೂ ಎಸೆದ ಆರೋಪಿ ರಾಕೇಶ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ, ಅವನನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಪ್ರತಿಭಟನಾಕಾರರು ಆರೋಪಿಯ ಪ್ರತಿಕೃತಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಭೀಮಘರ್ಜನೆ ಜಿಲ್ಲಾ ಅಧ್ಯಕ್ಷ ಅರ್ಜುನ್ ಮಿಂಟಿ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ದೇಶದಲ್ಲಿ ದಿನದಿಂದ ದಿನಕ್ಕೆ ದಲಿತ ಸಮುದಾಯದ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿವೆ. ಇಂತಹ ಘಟನೆಗಳು ಸಂವಿಧಾನದ ಮೇಲಿನ ನೇರ ದಾಳಿಯಂತಿವೆ. ಜಾತಿವಾದಿ ಮನೋಭಾವ ಹೊಂದಿರುವವರಿಂದಲೇ ಇಂತಹ ಕೃತ್ಯಗಳು ಸಂಭವಿಸುತ್ತಿವೆ. ದಲಿತರು ಉನ್ನತ ಹುದ್ದೆಗಳಲ್ಲಿ ಇರೋದನ್ನು ಸಹಿಸಲು ಸಾಧ್ಯವಿಲ್ಲ ಎಂಬ ಮನೋಭಾವದಿಂದಲೇ ಇಂತಹ ಘಟನೆಗಳು ನಡೆಯುತ್ತಿವೆ,” ಎಂದು ಖಂಡಿಸಿದರು. ಮುಂದುವರಿದು, “ರಾಕೇಶನಂತಹ ಮನುವಾದಿಗಳು ಸಂವಿಧಾನದ ವಿರೋಧಿಗಳು. ಇವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕು. ದಲಿತರು ಸಂವಿಧಾನ ಉಳಿವಿಗಾಗಿ ಯಾವ ಮಟ್ಟಿಗೂ ಹೋರಾಡಲು ಸಿದ್ದರಾಗಿದ್ದಾರೆ. ಇಂತಹ ದೌರ್ಜನ್ಯಗಳು ಮುಂದುವರಿದರೆ ಮತ್ತೊಮ್ಮೆ ಭೀಮಕೋರೆಗಾಂವ್ ಯುದ್ಧದಂತಹ ಹೋರಾಟಗಳು ಸಂಭವಿಸಬಹುದು,” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ʼದೀಕ್ಷಾ ಬ್ರ್ಯಾಂಡ್ʼ ಮೂಲಕ ಸ್ವಾವಲಂಬನೆ ಬದುಕು; PMFME ಯೋಜನೆಯಿಂದ ಯಶಸ್ಸು ಕಂಡ ಮಹಿಳಾ ಉದ್ಯಮಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ಪುನೀತ್ ಮರಾಠೇ, ಉಪಾಧ್ಯಕ್ಷ ರಾಜೇಶ್ ಕೆ., ಮನೋಜ್, ಕಿರಣ್, ವಿಶ್ವ ಪಾವಸ್ಕರ್, ಸುನಿಲ್, ಪ್ರಶಾಂತ್, ಶಿವಕುಮಾರ್, ಬಸಲ್ಲಿ ರಾಜು, ಚಂದ್ರಶೇಖರ್, ಅವಿನಾಶ್, ಉಮೇಶ್ ಹಾಗೂ ಅನೇಕ ಕಾರ್ಯಕರ್ತರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...