ಉತ್ತರ ಕನ್ನಡ | ಬ್ರಹ್ಮಶ್ರೀ ನಾರಾಯಣಗುರು ಜಯಂತಿ: ಶಿಕ್ಷಣ, ಸಮಾನತೆ, ಸಮಾಜ ಸುಧಾರಣೆಯ ಸಂದೇಶ

Date:

ಶಿಕ್ಷಣ, ಸಮಾನತೆ, ಸಮಾಜ ಸುಧಾರಣೆಯ ಸಂದೇಶವನ್ನು ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣಗುರು ಭರತ ಖಂಡ ಕಂಡಂತಹ ಅಪ್ರತಿಮ ಸಮಾಜ ಪರಿವರ್ತಕ, ಧಾರ್ಮಿಕ ಚಿಂತಕ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕಧ್ಯಕ್ಷ ರಾಮಾ ನಾಯ್ಕ ತಿಳಿಸಿದರು.

ಉತ್ತರ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದೊಂದಿಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.

“ನಾರಾಯಣ ಗುರುಗಳು, ಒಂದೇ ಜಾತಿ, ಧರ್ಮಕ್ಕೆ ಸಿಮೀತರಾದವರಲ್ಲ. ಇಡೀ ಜಗತ್ತಿನ ಮಾನವ ಕುಲಕ್ಕೇ ಗುರುಗಳು. ಸಮಾಜದಲ್ಲಿ ಬೇರೂರಿದ್ದ ಅಸ್ಪೃಶ್ಯತೆ ಮತ್ತು ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಲು ಶ್ರಮಿಸಿದವರು. ಅವರು ಪ್ರತಿಪಾದಿಸಿದ ತತ್ವವೆಂದರೆ ಜಗತ್ತಿನಲ್ಲಿರುವುದು, ʼಒಂದೇ ಜಾತಿ, ಒಂದೇ ಮತ ಹಾಗೂ ಒಂದೇ ದೇವರುʼ ಎಂಬುದು. ದೇವಾಲಯಗಳಲ್ಲಿ ತುಳಿತಕ್ಕೆ ಒಳಗಾದ ವರ್ಗದವರಿಗೆ ಪ್ರವೇಶ ಸಿಗದಿದ್ದಾಗ ರಕ್ತಕ್ರಾಂತಿ ಮಾಡದೇ ಜನರಿಗೆ ದೇವಾಲಯಗಳನ್ನು ನಿರ್ಮಿಸಿದರು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಿಂದುಳಿದ ವರ್ಗದವರನ್ನು ಉದ್ಯೋಗ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಮೆಲೆತ್ತುವ ಕಾರ್ಯದಲ್ಲಿ ತೊಡಗಿದ್ದರು. ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿದ ಅವರು ಶಿಕ್ಷಣ ಸಂಸ್ಥೆಗಳನ್ನು ಕಟ್ಟಿದ್ದಾರೆ. ನಾರಾಯಣ ಗುರುಗಳ ತತ್ವ ಸಿದ್ದಾಂತ ಆದರ್ಶಗಳು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಬೇಕಿದೆ” ಎಂದರು. 

ನಾಮದಾರಿ ಸಮಾಜದ ಉಪಾಧ್ಯಕ್ಷ ಸುನೀಲ್ ಸೋನಿ ಮಾತನಾಡಿ, “ಒಂದೇ ಜಾತಿ, ಒಂದೇ ಮತ ಹಾಗೂ ಒಂದೇ ದೇವರು ಎಂಬುವುದು ನಾರಾಯಣ ಗುರುಗಳ ತತ್ವವಾಗಿತ್ತು. ಹಿಂದುಳಿದ ವರ್ಗದವರಿಗೆ ದೇವಾಲಯಗಳಲ್ಲಿ ಪ್ರವೇಶಕ್ಕೆ ನಿರಾಕರಿಸಿದ ಸಮಯದಲ್ಲಿ ದೇವಾಲಯಗಳನ್ನು ನಿರ್ಮಿಸಿದವರು. ಅವರ ತತ್ವದಂತೆ ಎಲ್ಲ ಹಿಂದುಳಿದ ವರ್ಗದವರೂ ಒಂದೆ ಎಂಬ ಮನೋಭಾವವನ್ನು ಬೆಳೆಸಿಕೊಳ್ಳಬೇಕು” ಎಂದರು. 

ಕಾರ್ಯಕ್ರಮಕ್ಕೂ ಮುನ್ನ ಕಾರವಾರ ತಹಶೀಲ್ದಾರ್ ನಿಶ್ಚಲ್ ನರೋನ್ಹಾ ಅವರು ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಭಾರತೀಯ ಸೇನೆ ಸೇರ ಬಯಸುವ ಹಿಂದುಳಿದ ವರ್ಗದ ಯುವಕರಿಗೆ ಉಚಿತ ತರಬೇತಿ

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಾಮಾಜಿಕ ಪಿಂಚಣಿ ವಿಭಾಗದ ಸಹಾಯಕ ನಿರ್ದೇಶಕ ಪ್ರಶಾಂತ್, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಸೇರಿದಂತೆ ಇತರರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಲಾ ವೆಂ. ನಾಯ್ಕ ಸ್ವಾಗತಿಸಿದರು, ಶಿಕ್ಷಕಿ ವನಿತಾ ಶೇಟ್ ನಿರೂಪಿಸಿ, ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...