ಉತ್ತರ ಕನ್ನಡ | CISF ಹೆಡಕಾನ್ಸ್‌ಟೇಬಲ್ ಮೇಲೆ ಕಬ್ಬಿಣದ ಗೇಟ್ ಬಿದ್ದು ದಾರುಣ ಸಾವು

Date:

ಉತ್ತರ ಕನ್ನಡ ಜಿಲ್ಲೆಯ ಕೈಗಾ ಅಣು ವಿದ್ಯುತ್ ಸ್ಥಾವರದ ಅಣು ತ್ಯಾಜ್ಯ ಘಟಕದಲ್ಲಿ ಭದ್ರತಾ ಕರ್ತವ್ಯದಲ್ಲಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಯ ಹೆಡ್‌ಕಾನ್ಸ್‌ಟೇಬಲ್ ಮೈಮೇಲೆ ಕಬ್ಬಿಣದ ಗೇಟ್ ಬಿದ್ದ ಪರಿಣಾಮವಾಗಿ ಮೃತಪಟ್ಟ ಘಟನೆ ನಡೆದಿದೆ.

ಮೃತ ಯೋಧನನ್ನು ಮಹಾರಾಷ್ಟ್ರದ ಮಹಿಮಾನಗಡ್ ಮೂಲದ ಶೇಖರ್ ಭೀಮರಾವ್ ಜಗದಾಲೆ (48) ಎಂದು ಗುರುತಿಸಲಾಗಿದೆ.

ಮಾಹಿತಿ ಪ್ರಕಾರ, ಅವರು ಕಾವಲು ಕರ್ತವ್ಯದಲ್ಲಿದ್ದ ವೇಳೆ ದೊಡ್ಡ ಕಬ್ಬಿಣದ ಗೇಟ್ ಅಕಸ್ಮಿಕವಾಗಿ ತುಂಡಾಗಿ ಅವರ ಮೈಮೇಲೆ ಬಿದ್ದ ಪರಿಣಾಮ ತಲೆಗೆ ತೀವ್ರ ಸ್ವರೂಪದ ಗಾಯವಾಗಿ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಸಣ್ಣವರ ಬಂಧನ, ದೊಡ್ಡವರಿಗೆ ರಕ್ಷಣೆ: ಮಟ್ಕಾ, ಇಸ್ಪಿಟ್ ದಂಧೆಯ ಹಿಂದಿರುವ ಕಾಣದ ಕೈ ಯಾವುದು?

ತಕ್ಷಣವೇ ಸ್ಥಳದಲ್ಲಿದ್ದ ಎಸ್‌ ಟಿ ಎಫ್ ಸಿಬ್ಬಂದಿ ಗಾಯಾಳುವನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕೈಗಾದ ಕೆಜಿಎಸ್ ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಸಂಬಂಧ ಮಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮತ್ತು ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...