ಉತ್ತರ ಕನ್ನಡ | ಪ್ರಜಾಪ್ರಭುತ್ವದ ಉಳಿವಿಗೆ ಬಿಜೆಪಿ ಸೋಲಿಸುವುದು ಅನಿವಾರ್ಯ: ಮುಖ್ಯಮಂತ್ರಿ ಚಂದ್ರು

Date:

ಪ್ರಜಾಪ್ರಭುತ್ವದ ಉಳಿವಿಗೆ ಈ ಬಾರಿ ಬಿಜೆಪಿ ಸೋಲಿಸುವುದು ಅನಿವಾರ್ಯವಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

“ಅಭಿವೃದ್ಧಿಯ ಬದಲು ಕೋಮುವಾದಕ್ಕೆ ಆದ್ಯತೆ ನೀಡುತ್ತಿರುವ ಬಿಜೆಪಿ ಸರ್ವಾಧಿಕಾರಿಯಾಗಿದೆ. ಆ ಪಕ್ಷದ ಒಕ್ಕೂಟ ಸೋಲಿಸಲು ಆಪ್ ‘ಇಂಡಿಯಾ’ ಒಕ್ಕೂಟಕ್ಕೆ ಬೆಂಬಲಿಸುತ್ತಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಧರ್ಮದ ಹೆಸರಿನಲ್ಲಿ ಬಿಜೆಪಿ ಚುನಾವಣೆಗೆ ಹೋಗುತ್ತಿದೆ. ಚುನಾವಣಾ ಆಯೋಗದಿಂದ ಮುಖ್ಯ ನ್ಯಾಯಮೂರ್ತಿ ಅವರನ್ನು ಹೊರಗಿಡಲು ಕಾಯ್ದೆ ತಂದ ಬಿಜೆಪಿ ವಾಮಮಾರ್ಗದ ಮೂಲಕ ಗೆಲ್ಲಲು ಪ್ರಯತ್ನಿಸುತ್ತಿದೆ” ಎಂದು ಹೇಳಿದರು.

“ಉದ್ಯಮಿಗಳು, ಭ್ರಷ್ಟಾಚಾರಿಗಳನ್ನು ಜಾರಿ ನಿರ್ದೇಶನಾಲಯದ ಮೂಲಕ ಬೆದರಿಸಿ ಚುನಾವಣೆ ಬಾಂಡ್ ಖರೀದಿಸುವಂತೆ ಒತ್ತಡ ಹೇರಿದೆ. ಹಿಟ್ಲರ್‌ಗಿಂತ ಕೆಟ್ಟ ಸರ್ವಾಧಿಕಾರಿ ಆಡಳಿತ ನೀಡಿದೆ” ಎಂದರು.

“ರೈತರ ಸಾಲಮನ್ನಾ ಮಾಡದೆ, ಬಡ್ಡಿ ರಿಯಾಯಿತಿಯೂ ಕೊಡದ ಸರ್ಕಾರ ಉದ್ಯಮಿಗಳ ಹತ್ತಾರು ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿದ್ದು ನಾಚಿಕೆಗೇಡು. ಬಿಜೆಪಿ ನಾಯಕರು ವಿಶ್ವಗುರುವಾಗುವ ಮುನ್ನ ವಿಶ್ವ ಮಾನವರಾಗಬೇಕಿದೆ” ಎಂದು ವ್ಯಂಗ್ಯವಾಡಿದರು.

“ರಾಜ್ಯದಿಂದ ಎರಡು ಕ್ಷೇತ್ರದಲ್ಲಿ ಸ್ಪರ್ಧೆಗೆ ಅವಕಾಶ ಕೇಳಲಾಗಿತ್ತು. ಅವಕಾಶ ಸಿಕ್ಕಿಲ್ಲ. ಸ್ಪರ್ಧೆಯಲ್ಲಿ ಇಲ್ಲದಿದ್ದರೂ ಬಿಜೆಪಿ ವಿರುದ್ಧ ಪ್ರಚಾರ ಮಾಡಲಾಗುತ್ತದೆ” ಎಂದರು.

“ಸಂವಿಧಾನ ಬದಲಿಸುವ ಮಾತುಗಳನ್ನಾಡಿದ ಅನಂತಕುಮಾರ ಹೆಗಡೆ ಮೇಲೆ ಬಿಜೆಪಿ ಈವರೆಗೆ ಕ್ರಮ ಕೈಗೊಂಡಿಲ್ಲ. ಅಂಬೇಡ್ಕರ್ ಬರೆದ ಸಂವಿಧಾನದ ಬದಲು ಆರ್‌ಎಸ್‌ಎಸ್‌ ಸಂವಿಧಾನ ಜಾರಿಗೆ ತರುವುದು ಆ ಪಕ್ಷದ ಹುನ್ನಾರ” ಎಂದು ಆರೋಪಿಸಿದರು.

“ಕುಟುಂಬ ರಾಜಕಾರಣದ ಬಗ್ಗೆ ಟೀಕಿಸುವ ಬಿಜೆಪಿ ವರಿಷ್ಠರು ರಾಜ್ಯದಲ್ಲಿ ಯಡಿಯೂರಪ್ಪ ಕುಟುಂಬಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಇಲ್ಲಿನ ಹಲವು ನಾಯಕರ ಮಕ್ಕಳು ಚುನಾವಣೆಗೆ ಸ್ಪರ್ಧಿಸಲು ಯತ್ನಿಸುತ್ತಿದ್ದಾರೆ. ಕುಟುಂಬಕ್ಕೆ ಸೀಮಿತವಾದ ಜೆಡಿಎಸ್ ಪಕ್ಷದೊಂದಿಗೆ ಕೈ ಜೋಡಿಸಿದ್ದಾರೆ. ಇವೆಲ್ಲ ಮೋದಿ ಗಮನದಲ್ಲಿ ಇಲ್ಲವೆ” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ಧಾರವಾಡ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಯಾರು?

“ಉತ್ತರ ಕನ್ನಡವೂ ಸೇರಿದಂತೆ ರಾಜ್ಯದಲ್ಲಿರುವ ಅರಣ್ಯ ಅತಿಕ್ರಮಣದಾರರ ಸಮಸ್ಯೆ ಪರಿಹಾರವಾಗಬೇಕು. ಹೊನ್ನಾವರ ತಾಲೂಕಿನ ಕಾಸರಕೋಡದಲ್ಲಿ ಬಂದರು ನಿರ್ಮಾಣಕ್ಕೆ ಅವಕಾಶದ ನೆಪದಲ್ಲಿ ಬಡವರನ್ನು ಒಕ್ಕಲೆಬ್ಬಿಸಬಾರದು” ಎಂದು ಹೇಳಿದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಾಲಕೃಷ್ಣ ನಾಯ್ಕ, ಪ್ರಧಾನ ಕಾರ್ಯದರ್ಶಿ ಲಿಯೋ ಲ್ಯೂಯಿಸ್, ಅನಂತಕುಮಾರ ಬುಗುಡಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...