ಉತ್ತರ ಕನ್ನಡ | ಯಲ್ಲಾಪುರದಲ್ಲಿ ಟೆಕ್ ಪಾರ್ಕ್ ನಿರ್ಮಾಣಕ್ಕೆ ಸಚಿವ ಎಂ.ಬಿ. ಪಾಟೀಲ್‌ಗೆ ನಿಯೋಗದ ಮನವಿ

Date:

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾಗೋಡು ಕಾಲನಿಯನ್ನು ‘ವಿಶೇಷ ಆರ್ಥಿಕ ವಲಯ’ (SEZ) ಅಥವಾ ‘ವಿಶೇಷ ಕೈಗಾರಿಕಾ ಪ್ರದೇಶ’ ಎಂದು ಘೋಷಿಸಿ, ಅಲ್ಲಿ ಟೆಕ್ ಪಾರ್ಕ್ ಅಥವಾ ಕೈಗಾರಿಕಾ ಪಾರ್ಕ್ ಸ್ಥಾಪಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರಿಗೆ ಒತ್ತಾಯಿಸಲಾಗಿದೆ.

ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ, ಮಾಜಿ ಶಾಸಕ ವಿ.ಎಸ್. ಪಾಟೀಲ ಮತ್ತು ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಶಿರಸಿ ನೇತೃತ್ವದ ನಿಯೋಗವು ಸಚಿವರನ್ನು ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಿದರು. ಜಿಲ್ಲೆಯ ಸಮಗ್ರ ಅಭಿವೃದ್ಧಿ ಮತ್ತು ಯುವಜನರ ವಲಸೆ ತಡೆಯುವ ನಿಟ್ಟಿನಲ್ಲಿ ಟೆಕ್ ಪಾರ್ಕ್ ನಿರ್ಮಾಣದ ಅವಶ್ಯಕತೆಯನ್ನು ನಿಯೋಗವು ಸಚಿವರಿಗೆ ಮನವರಿಕೆ ಮಾಡಿಕೊಟ್ಟಿತು.

ಯಲ್ಲಾಪುರದ ಮಾಗೋಡು ಪ್ರದೇಶದಲ್ಲಿ ಸುಮಾರು 300 ಎಕರೆಗೂ ಅಧಿಕ ಸರ್ಕಾರಿ ಭೂಮಿ ಲಭ್ಯವಿದೆ. ಈ ಜಾಗವು ಮೂಲತಃ ಬೇಡ್ತಿ ಯೋಜನೆಗೆಂದು ಕೆ.ಪಿ.ಸಿ. ಕಾಲನಿ ನಿರ್ಮಾಣಕ್ಕೆ ಮೀಸಲಾಗಿತ್ತು. ಪ್ರಸ್ತುತ ಅಲ್ಲಿನ ಕಟ್ಟಡಗಳು ಹಾಳಾಗಿದ್ದು, ಈ ಪ್ರದೇಶವು ನಿರ್ಜನವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000361331

ಈ ಭೂಮಿಯನ್ನು ಅರಣ್ಯ ಇಲಾಖೆಯಿಂದ ಮರಳಿ ಪಡೆದು, ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (KIADB) ಮೂಲಕ ಇಲ್ಲಿ ಟೆಕ್ ಪಾರ್ಕ್ ನಿರ್ಮಿಸಿದರೆ, ಸ್ಥಳೀಯ ಪ್ರತಿಭಾವಂತ ಯುವಕರಿಗೆ ಉದ್ಯೋಗ ದೊರೆತು, ಅವರು ಉದ್ಯೋಗ ಅರಸಿ ಬೆಂಗಳೂರು ಅಥವಾ ಇತರ ನಗರಗಳಿಗೆ ವಲಸೆ ಹೋಗುವುದನ್ನು ತಡೆಯಬಹುದು ಎಂದು ಮನವಿಯಲ್ಲಿ ವಿವರಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಸಂವಿಧಾನದ ಅರಿವಿನೊಂದಿಗೆ ಸಂಸ್ಕಾರಯುತ ಬದುಕು ರೂಪಿಸಿಕೊಳ್ಳಿ: ನ್ಯಾ. ಅಕ್ಷತಾ ಸಿ.ಆರ್ ಕರೆ

ಮಾಗೋಡು ಕಾಲನಿಯು ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಕೇವಲ 75 ಕಿ.ಮೀ. ದೂರದಲ್ಲಿದೆ. ಅಲ್ಲದೆ, ಉದ್ದೇಶಿತ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗ ಹಾಗೂ ರಾಷ್ಟ್ರೀಯ ಹೆದ್ದಾರಿ-53ರ ಸಮೀಪದಲ್ಲೇ ಇದೆ. ಊಟಿ ಮತ್ತು ಕೊಡೈಕೆನಾಲ್ ಮಾದರಿಯ ಆಹ್ಲಾದಕರ ಹವಾಮಾನ, ಉತ್ತಮ ಜಲಸಂಪನ್ಮೂಲ ಮತ್ತು ಸಾಂಸ್ಕೃತಿಕ ಪರಿಸರ ಇರುವುದರಿಂದ, ಈ ಪ್ರದೇಶವು ಐಟಿ-ಬಿಟಿ ಮತ್ತು ಸಾಫ್ಟ್‌ವೇರ್ ಪಾರ್ಕ್‌ಗಳ ಸ್ಥಾಪನೆಗೆ ಅತ್ಯಂತ ಸೂಕ್ತವಾಗಿದೆ ಎಂದು ವಿವರಣೆ ನೀಡಿದರು.

ಅಡಿಕೆ, ಸಾಂಬಾರ ಪದಾರ್ಥಗಳು ಮತ್ತು ವಿದ್ಯುತ್ ಯೋಜನೆಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯು ರಾಜ್ಯದ ಬೊಕ್ಕಸಕ್ಕೆ ಸಾವಿರಾರು ಕೋಟಿ ರೂಪಾಯಿ ಆದಾಯವನ್ನು ನೀಡುತ್ತಿದೆ. ಆದರೆ, ಇದಕ್ಕೆ ಪ್ರತಿಯಾಗಿ ಜಿಲ್ಲೆಗೆ ಉತ್ತಮ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳು ಅಥವಾ ಉನ್ನತ ಶಿಕ್ಷಣ ಸಂಸ್ಥೆಗಳು ದೊರೆತಿಲ್ಲ ಎಂದು ನಿಯೋಗ ಅಸಮಾಧಾನ ವ್ಯಕ್ತಪಡಿಸಿದೆ.

ಹೀಗಾಗಿ, ಇದೇ ಅಧಿವೇಶನದಲ್ಲಿ ಮಾಗೋಡನ್ನು ವಿಶೇಷ ಆರ್ಥಿಕ ವಲಯವೆಂದು ಘೋಷಿಸಬೇಕು. ಮುಂಬರುವ ಅಂತರರಾಷ್ಟ್ರೀಯ ಟೆಕ್ ಸಮ್ಮಿಟ್‌ನಲ್ಲಿ ಈ ಭಾಗದಲ್ಲಿ ಬಹುರಾಷ್ಟ್ರೀಯ ಕಂಪನಿಗಳಿಗೆ ಅವಕಾಶ ಕಲ್ಪಿಸಿಕೊಡಬೇಕೆಂದು ನಿಯೋಗವು ಸಚಿವ ಎಂ.ಬಿ. ಪಾಟೀಲ್ ಅವರನ್ನು ಒತ್ತಾಯಿಸಿದೆ. ನಿಯೋಗದಲ್ಲಿ ಗಣೇಶ್ ಹೆಗಡೆ, ರಮೇಶ ನಾಯ್ಕ್ ಕುಪ್ಪಳ್ಳಿ, ಶ್ರೀಪತಿ ಮುದ್ದೆಪಾಲ್, ರಾಘವೇಂದ್ರ ನಾಯ್ಕ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...