ಉತ್ತರ ಕನ್ನಡ | ಬೇಡಿಕೆ ಇದ್ದರೂ ಖರೀದಿಯಾಗದೇ ಹಾಳಾಗುತ್ತಿದೆ ಬಾಳೆಕಾಯಿ; ರೈತರು ಕಂಗಾಲು

Date:

ಉತ್ತರ ಕನ್ನಡ ಜಿಲ್ಲೆಯ ರೈತರಿಗೆ ಉಪ ಆದಾಯ ತಂದುಕೊಡುವ ಬಾಳೆಕಾಯಿಗೆ ಬೇಡಿಕೆ ಇದ್ದರೂ ಖರೀದಿ ಪ್ರಕ್ರಿಯೆ ನಡೆಯುತ್ತಿಲ್ಲ. ಆದ್ದರಿಂದ ಬಾಳೆಗೊನೆಗಳು ತೋಟ, ರೈತರ ಮನೆಯಲ್ಲಿಯೇ ಕೊಳೆಯಲು ಆರಂಭಿಸಿದ್ದು ರೈತರು ಕಂಗಾಲಾಗಿದ್ದಾರೆ.

ಮೇ ತಿಂಗಳವರೆಗೆ ಶುಭ ಕಾರ್ಯಗಳು, ಜಾತ್ರೆ ಮತ್ತು ಉತ್ಸವಗಳು ನಡೆಯುವ ಕಾರಣ ಬಾಳೆಹಣ್ಣುಗಳಿಗೆ ಬೇಡಿಕೆ ಇರುತ್ತದೆ. ಆದರೆ, ಕಳೆದೊಂದು ವಾರದಿಂದ ಮಾರುಕಟ್ಟೆಯಲ್ಲಿ ಮತ್ತು ವ್ಯಾಪಾರಿಗಳು ಬಾಳೆಕಾಯಿ ಖರೀದಿಸುತ್ತಿಲ್ಲ ಎಂದು ರೈತರು ಬೇಸರ ವ್ಯಕ್ತ ಪಡಿಸುತ್ತಿದ್ದಾರೆ.

ಸಿದ್ಧಾಪುರ ತಾಲೂಕಿನಲ್ಲಿ 622 ಹೆಕ್ಟೇರ್ ಪ್ರದೇಶದಲ್ಲಿ ಬಾಳೆ ಬೆಳೆಯಲಾಗುತ್ತಿದೆ. ಮಲೆನಾಡಿನ ಗ್ರಾಮಗಳ ರೈತರಿಂದ ಬಾಳೆಕಾಯಿ ಖರೀದಿಸುವ ರೈತರು ಅವುಗಳನ್ನು ಗೋವಾ, ಕರಾವಳಿ ಭಾಗಕ್ಕೆ ಪೂರೈಸುತ್ತಾರೆ. ಅತಿ ಬಿಸಿಲಿನಿಂದ ಬಾಳೆಕಾಯಿ ಸಾಗಣೆ ಮಾಡುವ ಅವಧಿಯಲ್ಲೇ ಹಣ್ಣಾಗುತ್ತಿರುವುದು ವ್ಯಾಪಾರಿಗಳನ್ನು ಚಿಂತೆಗೆ ತಳ್ಳಿದೆ. ಹಣ್ಣು ಕಡಿಮೆ ಅವಧಿಯಲ್ಲೇ ಕೊಳೆಯುವ ಕಾರಣ ಖರೀದಿ ಪ್ರಕ್ರಿಯೆ ನಡೆಯುತ್ತಿಲ್ಲ ಎನ್ನುತ್ತಿದ್ದಾರೆ ರೈತರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಪಮಾನ ಹೆಚ್ಚಳದಿಂದ ಬಾಳೆಕಾಯಿ ಬೇಗ ಹಾಳಾಗುತ್ತವೆ. ಸಾಗಣೆ, ದಾಸ್ತಾನು ಮಾಡುವುದರಿಂದ ಲಾಭಕ್ಕಿಂತ ನಷ್ಟ ಹೆಚ್ಚು. ಮಳೆ ಆರಂಭವಾದರೆ, ಇಳುವರಿ ಕಡಿಮೆಯಾಗಿ ಬೆಲೆ ಹೆಚ್ಚುತ್ತದೆ ಎನ್ನುತ್ತಾರೆ ವ್ಯಾಪಾರಿಗಳು.

ಇಲ್ಲಿನ ಕೆಲವು ರೈತರು ಅಡಿಕೆ ನೆಟ್ಟಿದ್ದು, ಅಡಿಕೆಯಿಂದ ಆದಾಯಬರಲು ಇನ್ನೂ ನಾಲ್ಕು ವರ್ಷ ಕಾಯಬೇಕು. ಉಪಬೆಳೆಯಾಗಿ ಬಾಳೆ ಬೆಳೆಯುತ್ತಿದ್ದು, ತಿಂಗಳಿಗೆ ನಾಲ್ಕುಸಾವಿರದ ವರೆಗೆ ಆದಾಯ ಸಿಗುತ್ತಿತ್ತು. ಆದರೆ, ಬಾಳೆಕಾಯಿ ಮಾರಾಟವಾಗದೆ ನಿರ್ವಹಣೆ ಕಷ್ಟವಾಗಿದೆ ಎನ್ನುತ್ತಿದ್ದಾರೆ ಸ್ಥಳೀಯ ರೈತರು.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ತೋಟಗಾರಿಕೆ ಅಧಿಕಾರಿ ಪ್ರಶಾಂತ ಜಿ.ಎಸ್, ರೈತರು ಬಾಳೆಕಾಯಿಯ ಮೌಲ್ಯವರ್ಧನೆಯತ್ತ ಗಮನಹರಿಸಬೇಕು. ಬಾಳೆಕಾಯಿಯ ಚಿಪ್ಸ್, ಹಪ್ಪಳ ಮುಂತಾದ ಉತ್ಪನ್ನಗಳನ್ನು ತಯಾರಿಸಿದರೆ ಉತ್ತಮ ಮಾರುಕಟ್ಟೆ ಕಂಡುಕೊಳ್ಳಬಹುದು ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...