ಉತ್ತರ ಕನ್ನಡ | ರಾಜಸ್ಥಾನ ಮೂಲದವರಿಗೆ ನಕಲಿ ಕಾರ್ಮಿಕ ಕಾರ್ಡ್ ವಿತರಣೆ: ‘ಭೀಮ್ ಘರ್ಜನೆ’ ಆರೋಪ

Date:

ಸರ್ಕಾರದಿಂದ ಕಾರ್ಮಿಕರಿಗೆ ಉಚಿತವಾಗಿ ನೀಡಬೇಕಾಗಿದ್ದ ಟೂಲ್ ಕಿಟ್ ಮತ್ತು ಪೌಷ್ಟಿಕ ಆಹಾರ ಸಾಮಗ್ರಿಗಳನ್ನು ಕಾರ್ಮಿಕರಿಗೆ ವಿತರಿಸದೆ ಕಚೇರಿಯಲ್ಲಿ ದಾಸ್ತಾನು ಮಾಡಿಕೊಂಡಿದ್ದಾರೆ ಹಾಗೂ ರಾಜಸ್ಥಾನ ಮೂಲದವರಿಗೆ ನಕಲಿ ಕಾರ್ಮಿಕ ಕಾರ್ಡ್ ವಿತರಣೆ ಮಾಡಿದ್ದಾರೆ ಎಂದು ಶಿರಸಿ ಕಾರ್ಮಿಕ ಇಲಾಖೆ ವಿರುದ್ಧ ಭೀಮ ಘರ್ಜನೆ ಸಂಘಟನೆ ಗಂಭೀರ ಆರೋಪ ಮಾಡಿದೆ.

ಈ ಆರೋಪದ ಹಿನ್ನೆಲೆ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಅಮಿತ್ ಕುಮಾರ್ ನಾಗರಾಜ ಜೋಗಳೇಕರ ಹಾಗೂ ಸಂಘಟನೆಯ ಪ್ರಮುಖರು ಸೇರಿ, ಶಿರಸಿ ಕಾರ್ಮಿಕ ಇಲಾಖೆ ಕಚೇರಿಯ ಅಧಿಕಾರಿಗಳ ಆಲಸ್ಯ ಹಾಗೂ ಬೇಜವಾಬ್ದಾರಿತನವನ್ನು ವಿಡಿಯೋ ಮಾಡಿ ಸಾಕ್ಷಿ ಸಮೇತ ಹೊರ ಹಾಕಿದ್ದಾರೆ.

ಇಲಾಖೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ, ಅರ್ಹ ಕಾರ್ಮಿಕರಿಗೆ ನೀಡಬೇಕಿದ್ದ ಟೂಲ್ ಕಿಟ್ ಹಾಗೂ ಪೌಷ್ಟಿಕ ಆಹಾರದ ಸಾಮಗ್ರಿಗಳನ್ನು ಕಚೇರಿಯಲ್ಲೇ ಇಟ್ಟುಕೊಂಡಿರುವುದನ್ನು ಪತ್ತೆಹಚ್ಚಲಾಗಿದೆ. ಸರ್ಕಾರದಿಂದ ಕಾರ್ಮಿಕರಿಗೆ ನೀಡಬೇಕಾಗಿದ್ದ ಕಿಟ್‌ಗಳನ್ನು ತಮ್ಮಲ್ಲೇ ಉಳಿಸಿಕೊಂಡಿದ್ದಾರೆ. ಸುಮಾರು ₹10 ಲಕ್ಷ ಮೌಲ್ಯದ ಈ ಸಾಮಾಗ್ರಿಗಳು ಒಟ್ಟು 622 ಕಾರ್ಮಿಕರಿಗೆ ತಲುಪಬೇಕಾಗಿತ್ತು. ಆದರೆ ಕೇವಲ 150 ಕಾರ್ಮಿಕರಿಗೆ ಮಾತ್ರ ವಿತರಿಸಿದ್ದಾರೆ. ಮೊದಲು ಎಲ್ಲ ಕಿಟ್‌ಗಳನ್ನು ವಿತರಿಸಿದ್ದೇವೆ ಎಂದು ಸುಳ್ಳು ಹೇಳಿ, ನಂತರ ಇದು ಹಳೆಯ ಅಧಿಕಾರಿಯ ಅವಧಿಯಲ್ಲಿ ಮಂಜೂರಾದ ವಸ್ತುಗಳು ಎಂದು ತಪ್ಪಿಸಿಕೊಳ್ಳಲು ಯತ್ನಿಸಿರುವುದಾಗಿ ಜೋಗಳೇಕರರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರದಿಂದ ಮಂಜೂರಾದ ರೋಡ್ ಕನ್‌ಸ್ಟ್ರಕ್ಷನ್ ಕಿಟ್ ಮತ್ತು ಟೈಲ್ಸ್ ಕಿಟ್ ಕೂಡ ಕಾರ್ಮಿಕರಿಗೆ ನೀಡದೆ ಮಚ್ಚಿಟ್ಟಿದ್ದಾರೆ. ಕಾರ್ಮಿಕರಿಗೆ ಸಿಗಬೇಕಾದ ಸವಲತ್ತುಗಳನ್ನು ತಡೆದಿದ್ದಾರೆ ಎಂಬ ಆರೋಪವೂ ಇದೆ.

ಇದನ್ನೂ ಓದಿ: ಉತ್ತರ ಕನ್ನಡ | ಭಾರತೀಯ ಸೇನೆ ಸೇರ ಬಯಸುವ ಹಿಂದುಳಿದ ವರ್ಗದ ಯುವಕರಿಗೆ ಉಚಿತ ತರಬೇತಿ

ಜಿಲ್ಲಾ ಉಪಾಧ್ಯಕ್ಷ ಅಮಿತಕುಮಾರ್ ಜೋಗಳೇಕರ ಮಾತನಾಡಿ, “ಈ ವಿಷಯವನ್ನು ಸರ್ಕಾರ ಹಾಗೂ ಸ್ಥಳೀಯ ಶಾಸಕರು ಗಂಭೀರವಾಗಿ ಪರಿಗಣಿಸಬೇಕು. ಉಳಿದಿರುವ ಕಿಟ್‌ಗಳ ಲೆಕ್ಕ ಪತ್ತೆಹಚ್ಚಿ, ಅರ್ಹ ಕಾರ್ಮಿಕರಿಗೆ ವಿತರಿಸಬೇಕು. ನಕಲಿ ಕಾರ್ಡ್ ವಿತರಣೆ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಭೀಮ್ ಘರ್ಜನೆ ಸಂಘಟನೆಯ ರಾಜೇಶ್, ಅಕ್ಷಯ ದೋತ್ರೆ, ಸಂಕೇತ ರೇವಣಕರ, ಗುರುಮೂರ್ತಿ ಮಡಗಾಂವಕರ, ಪ್ರಜ್ವಲ್ ಚಂದಾವರ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...