ಉತ್ತರ ಕನ್ನಡ | ನದಿ ತಿರುವು ಯೋಜನೆಗಳ ಸ್ಥಗಿತಕ್ಕೆ ಜಿಲ್ಲೆಯ ನಾಯಕರಿಂದ: ಸಿಎಂಗೆ ಅರ್ಜಿ ಸಲ್ಲಿಕೆ

Date:

ಉತ್ತರ ಕನ್ನಡ ಜಿಲ್ಲೆಯ ಪರಿಸರ ಮತ್ತು ಜನಜೀವನಕ್ಕೆ ತೀವ್ರ ಆತಂಕ ತಂದಿರುವ ಬೇಡ್ತಿ–ವರದಾ, ಅಘನಾಶಿನಿ–ವೇದಾವತಿ ನದಿ ತಿರುವು ಯೋಜನೆಗಳು ಹಾಗೂ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗಳನ್ನು ತಕ್ಷಣ ನಿಲ್ಲಿಸುವಂತೆ ಆಗ್ರಹಿಸಿ ಜಿಲ್ಲೆಯ ಶಾಸಕರು ಹಾಗೂ ಸಂಸದರು ಒಟ್ಟಾಗಿ ಸೇರಿ ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ನಿಯೋಗವು ಈ ಯೋಜನೆಗಳ ಕುರಿತು ತಜ್ಞ ವಿಜ್ಞಾನಿಗಳ ಸಭೆ ನಡೆಸಿ, ಜಿಲ್ಲೆಯ ಒಟ್ಟಾರೆ ಸಾಮರ್ಥ್ಯದ (Carrying Capacity) ಕುರಿತು ವೈಜ್ಞಾನಿಕ ಅಧ್ಯಯನ ಮಾಡಬೇಕೆಂದು ಒತ್ತಾಯಿಸಿದೆ.

ಮನವಿಯಲ್ಲಿ ನದಿಗಳ ತಿರುವಿನಿಂದ ಉಂಟಾಗಬಹುದಾದ ಪರಿಸರ ಹಾನಿಯ ಬಗ್ಗೆ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. “ಬೇಡ್ತಿ ಹಾಗೂ ಅಘನಾಶಿನಿ ಕಣಿವೆಗಳು ಪಶ್ಚಿಮ ಘಟ್ಟದ ಹೃದಯ ಭಾಗವಾಗಿದ್ದು, ಅಣೆಕಟ್ಟು, ಕಾಲುವೆ ಮತ್ತು ರಸ್ತೆ ಕಾಮಗಾರಿಗಳು ಭೂಕುಸಿತ ಹಾಗೂ ಜಲಚರ-ಸ್ಥಲಚರ ಜೀವಿಗಳ ವಾಸಸ್ಥಳ ನಾಶಕ್ಕೆ ಕಾರಣವಾಗಬಹುದು. ಸುಮಾರು 2 ಲಕ್ಷ ಮಲೆನಾಡು ಕುಟುಂಬಗಳು ಹಾಗೂ ಕರಾವಳಿಯ ಮೀನುಗಾರರು ಈ ನದಿಗಳ ಮೇಲೆ ಅವಲಂಬಿತರಾಗಿದ್ದಾರೆ. ಈ ಯೋಜನೆಗಳು ಜಾರಿಯಾದರೆ ನದಿಗಳಲ್ಲಿ ಸಿಹಿನೀರು ಕಡಿಮೆಯಾಗಿ ಉಪ್ಪುನೀರು ನುಗ್ಗುವ ಅಪಾಯವಿದೆ,” ಎಂದು ತಿಳಿಸಿದರು.

ಸುಮಾರು ₹35,000 ಕೋಟಿ ವೆಚ್ಚದ ಈ ಯೋಜನೆಗಳ ಸಾಧ್ಯತಾ ವರದಿಯನ್ನು ಜಲಸಂಪನ್ಮೂಲ ಇಲಾಖೆ ಸಿದ್ಧಪಡಿಸಿರುವ ಹಿನ್ನೆಲೆಯಲ್ಲಿ ಜನಾಕ್ರೋಶ ಹೆಚ್ಚಾಗಿದೆ. ಪೂಜ್ಯ ಸೋಂದಾ ಸ್ವರ್ಣವಲ್ಲಿ ಶ್ರೀಗಳ ನೇತೃತ್ವದ ‘ಬೇಡ್ತಿ–ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ’ ಈ ಯೋಜನೆಗಳ ವಿರುದ್ಧ ಹೋರಾಟ ನಡೆಸುತ್ತಿದ್ದು, 2021–22ರ ಪ್ರತಿಭಟನೆಯ ಬಳಿಕ ಸರ್ಕಾರವು ಬೇಡ್ತಿ–ವರದಾ ಯೋಜನೆ ಸ್ಥಗಿತಗೊಳಿಸಿತ್ತು ಎಂಬುದನ್ನು ನಿಯೋಗವು ಸಿಎಂ ಗಮನಕ್ಕೆ ತಂದಿದೆ. ನಿಯೋಗವು ಯಾವುದೇ ಕಾರಣಕ್ಕೂ ಈ ಯೋಜನೆಗಳ ಡಿ.ಪಿ.ಆರ್. (DPR) ತಯಾರಿಗೆ ಮುಂದಾಗಬಾರದು ಎಂದು ಆಗ್ರಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? 12 ಗಂಟೆ ಹೋರಾಡಿ ಆ್ಯಂಬುಲೆನ್ಸ್‌ನಲ್ಲೇ ಅಂತ್ಯ ಕಂಡ ಬಡ ಕಾರ್ಮಿಕ; ಇದೇನಾ ಆರೋಗ್ಯ ವ್ಯವಸ್ಥೆಯ ನಿಜಮುಖ?

ಅತಿವೃಷ್ಟಿಯಿಂದ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡುವ ಕುರಿತು ಸಹ ನಿಯೋಗವು ಸಿಎಂಗೆ ಮನವಿ ಮಾಡಿದೆ. “ಬೆಳೆ ನಷ್ಟ ಪರಿಹಾರದ ಮೊತ್ತವನ್ನು ತಕ್ಷಣ ಬಿಡುಗಡೆ ಮಾಡಬೇಕು, ಹವಾಮಾನ ಆಧಾರಿತ ಬೆಳೆ ವಿಮೆ ಸರಿಯಾದ ಸಮಯಕ್ಕೆ ದೊರಕುವಂತೆ ಕ್ರಮ ಕೈಗೊಳ್ಳಬೇಕು, ಹವಾಮಾನ ಮಾಪಕ ಉಪಕರಣಗಳನ್ನು ತುರ್ತಾಗಿ ದುರಸ್ತಿ ಮಾಡಬೇಕು ಹಾಗೂ ಪ್ರವಾಹದಿಂದ ಹಾನಿಯಾದ ರಸ್ತೆಗಳನ್ನು ಪುನರ್‌ನಿರ್ಮಿಸಲು ಅನುದಾನ ಬಿಡುಗಡೆ ಮಾಡಬೇಕು,” ಎಂದು ಒತ್ತಾಯಿಸಿದ್ದಾರೆ.

ಈ ನಿಯೋಗದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರುಗಳಾದ ಶಿವರಾಮ್ ಹೆಬ್ಬಾರ್, ಭೀಮಣ್ಣ ನಾಯ್ಕ, ವಿಧಾನ ಪರಿಷತ್ ಸದಸ್ಯ ಶಾಂತರಾಮ್ ಸಿದ್ಧಿ, ಅಘನಾಶಿನಿ ಕೊಳ್ಳ ಸಮಿತಿಯ ಅಧ್ಯಕ್ಷ ಅನಂತ ಹೆಗಡೆ ಅಶಿಸರ, ಶ್ರೀ ಸ್ವರ್ಣವಲ್ಲಿ ಮಠದ ಅಧ್ಯಕ್ಷ ವಿ.ಎನ್. ಹೆಗಡೆ ಸೇರಿದಂತೆ ಪರಿಸರ ಹೋರಾಟಗಾರರು ಭಾಗಿಯಾಗಿದ್ದರು. ಜಿಲ್ಲೆಯ ಹಿತಕ್ಕಾಗಿ ಪಕ್ಷಾತೀತವಾಗಿ ಎಲ್ಲಾ ಪ್ರಮುಖರು ಒಟ್ಟಾಗಿ ಸರ್ಕಾರದ ಗಮನ ಸೆಳೆದಿರುವುದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...