ಉತ್ತರ ಕನ್ನಡ | ಅಬಕಾರಿ ಇಲಾಖೆಯ ಕಾರ್ಯಾಚರಣೆ; ಅಕ್ರಮ ಮದ್ಯ ಸೇರಿ ₹7 ಲಕ್ಷ ಮೌಲ್ಯದ ವಸ್ತುಗಳು ಜಪ್ತಿ

Date:

ಉತ್ತರ ಕನ್ನಡ ಜಿಲ್ಲೆಯ ಮುಡಗೇರಿ ಡ್ಯಾಂ ಹತ್ತಿರದ ಅರಣ್ಯ ಪ್ರದೇಶದಲ್ಲಿ ಗೋವಾದಿಂದ ಅಕ್ರಮವಾಗಿ ತರಲಾಗುತ್ತಿದ್ದ ಭಾರೀ ಪ್ರಮಾಣದ ಮದ್ಯವನ್ನು ಅಬಕಾರಿ ಇಲಾಖೆ ಗುರುವಾರ ಬೆಳಿಗ್ಗೆ ವಶಪಡಿಸಿಕೊಂಡಿದೆ. ಅಧಿಕಾರಿಗಳು ಸ್ಥಳಕ್ಕೆ ತಲುಪುತ್ತಿದ್ದಂತೆಯೇ ಆರೋಪಿಗಳು ತಮ್ಮ ವಾಹನಗಳನ್ನು ಬಿಟ್ಟು ಕಾಡಿನೊಳಗೆ ಓಡಿ ಪರಾರಿಯಾಗದ್ದಾರೆ.

ಖಚಿತ ಮಾಹಿತಿ ಆಧಾರದ ಮೇಲೆ ಬೆಳಿಗ್ಗೆ ಸುಮಾರು 9 ಗಂಟೆಗೆ ಅಬಕಾರಿ ಅಧಿಕಾರಿಗಳು ಮುಡಗೇರಿ ಅರಣ್ಯ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ಐದು ದ್ವಿಚಕ್ರ ವಾಹನಗಳ ಮೇಲೆ ಅನುಮಾನ ಬಂದು ತಪಾಸಣೆ ನಡೆಸಿದ ವೇಳೆಯಲ್ಲಿ ಘಟನೆ ಬೆಳಕಿಗೆ ಬಂದಿದೆ.

ಕಾರ್ಯಾಚರಣೆಯಲ್ಲಿ ಒಟ್ಟು 649.610 ಲೀಟರ್ ಮದ್ಯ ಪತ್ತೆಯಾಗಿದ್ದು. ಇದರಲ್ಲಿ ಗೋವಾ ಫೆನ್ನಿ – 304.830 ಲೀಟರ್, ಗೋವಾ ಮದ್ಯ – 284.280 ಲೀಟರ್ ಹಾಗೂ ಬಿಯರ್ – 60.500 ಲೀಟರ್ ಸೇರಿವೆ. ಜಪ್ತಿ ಮಾಡಿದ ಮದ್ಯದ ಅಂದಾಜು ಮೌಲ್ಯ ₹3,62,350 ಎಂದು ಇಲಾಖೆಯ ಮಾಹಿತಿಯಿಂದ ತಿಳಿದುಬಂದಿದೆ. ಅಲ್ಲದೆ ಮದ್ಯ ಸಾಗಣೆಗೆ ಬಳಸಲಾಗಿದ್ದ ಐದು ದ್ವಿಚಕ್ರ ವಾಹನಗಳು (ಅಂದಾಜು ಮೌಲ್ಯ ₹4,00,000) ವಶಕ್ಕೆ ಪಡೆಯಲಾಗಿದೆ. ಒಟ್ಟು ಜಪ್ತಿ ಮಾಡಿದ ಮೌಲ್ಯ ₹7,62,350 ಆಗಿದೆ. ಪರಾರಿಯಾದ ಆರೋಪಿಗಳ ಪತ್ತೆಗೆ ಅಬಕಾರಿ ಇಲಾಖೆ ಶೋಧ ಕಾರ್ಯಾಚರಣೆ ಮುಂದುವರೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ವಾರು ಮೀಸಲಾತಿಗೆ ಜಿಲ್ಲೆಯಾದ್ಯಂತ 116 ಆಕ್ಷೇಪಣೆ ಅರ್ಜಿಗಳು ಸಲ್ಲಿಕೆ

ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರು ಹಾಗೂ ಉತ್ತರ ಕನ್ನಡ ಜಿಲ್ಲಾ ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಲ್ಲಿ ನಡೆದ ಈ ರೇಡ್‌ನಲ್ಲಿ ಅಬಕಾರಿ ಉಪ ಅಧೀಕ್ಷಕ ರಮೇಶ್ ಬಿ. ಭಜಂತ್ರಿ, ನಿರೀಕ್ಷಕ ರಂಜೀತಕುಮಾರ ಮೀತ್ರಾ, ಉಪ ನಿರೀಕ್ಷಕ ನಾಗರಾಜ ಕೊಟಗಿ, ಸಿಬ್ಬಂದಿಗಳಾದ ಪ್ರವೀಣಕುಮಾರ ಕಲ್ಲೊಳ್ಳಿ, ಹೇಮಚಂದ್ರ ಈರಣ್ಣನವರ್, ವಿರೇಶ ಕುರಿಯವರ ಹಾಗೂ ಚಾಲಕರಾದ ಇಮ್ಮಿಯಾಝ್ ಮತ್ತು ಪವನ ಮಸೂರಕರ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...