ಉ. ಕನ್ನಡ | ಮೂಲ ಸೌಕರ್ಯಗಳಿಂದ ವಂಚಿತಗೊಂಡಿರುವ ಗೌಳಿ ದಡ್ಡಿಯ ಕುಟುಂಬಗಳು: ಪರಿಹಾರ ಯಾವಾಗ?

Date:

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಬಾಳೆಹಳ್ಳಿ ಗ್ರಾಮದ ಗೌಳಿ ದಡ್ಡಿಯಲ್ಲಿ ವಾಸವಿರುವ ಗೌಳಿ ಸಮುದಾಯದ 32 ಕುಟುಂಬಗಳು ಹಲವು ವರ್ಷಗಳಿಂದ ಕಾಡಿನೊಳಗೆ ಯಾವುದೇ ಮೂಲಭೂತ ಸೌಲಭ್ಯಗಳಿಲ್ಲದೇ ಬದುಕು ಸಾಗಿಸುತ್ತಿದ್ದಾರೆ.

ವಿದ್ಯುತ್, ನೀರು, ಶಿಕ್ಷಣ ಮತ್ತು ಆರೋಗ್ಯದಂತಹ ಅಗತ್ಯ ಸೇವೆಗಳು ಇಲ್ಲದಿರುವುದರಿಂದ ಈ ಕುಟುಂಬಗಳು ಸಂಕಷ್ಟದ ಜೀವನ ನಡೆಸುತ್ತಿವೆ. ಇವರಿಗೆ ಸರ್ಕಾರದಿಂದ ಬರುವ ಯೋಜನೆಗಳು ಕೇವಲ ಕಾಗದದಲ್ಲಿ ಮಾತ್ರ ಕಾಣಸಿಗುತ್ತವೆ. ಹಾಗೆ ಈ ಮಳೆಗಾಲದಲ್ಲಿ ಅವರ‌ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ‌ ರಸ್ತೆಯಂತೂ ಯಮ‌ಸ್ವರೂಪಿ ಗುಂಡಿಗಳಿಂದ ಕೂಡಿದ್ದು ಮತ್ತು ರಸ್ತೆಗಳು ಡಾಂಬರು ಕಾಣದೆ, ಚರಂಡಿ ಇಲ್ಲದೇ ಕನಿಷ್ಠ ಪಕ್ಷ ನಡೆದಾಡಲು ಕೂಡ ಕಷ್ಟ ಪಡುವಂತಾಗಿದೆ.

ಗ್ರಾಮಕ್ಕೆ ಹೆಸರು ಸೂಚಿಸುವ ಬೋರ್ಡ್ ಕೂಡ ಇಲ್ಲದೇ ಇರುವುದು ಅತ್ಯಂತ ವಿಷಾದದ ಸಂಗತಿಯಾಗಿದೆ. ಗ್ರಾಮದ‌‌ಲ್ಲಿ ಒಂದು ಅಂಗನವಾಡಿ ಕೇಂದ್ರ ಹಾಗೂ ಒಂದು ಕಿರಿಯ ಪ್ರಾಥಮಿಕ ಶಾಲೆ ಮಾತ್ರ ಇದೆ. ಮುಂದಿನ ವಿದ್ಯಾಭ್ಯಾಸಕ್ಕೆ ಹೋಗಬೇಕೆಂದರೆ ಸುಮಾರು 10 ಕಿ.ಮೀ ನಡೆದುಕೊಂಡು ಹೋಗಬೇಕು ಎನ್ನುತ್ತಾರೆ ಅರ್ಧದಲ್ಲಿಯೇ ವಿದ್ಯಾಭ್ಯಾಸ ನಿಲ್ಲಿಸಿದ ಮಕ್ಕಳ ಪೋಷಕರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಗ್ರಾಮಕ್ಕೆ ಬಸ್ಸಿನ ವ್ಯವಸ್ಥೆ ಕೂಡ ಈ‌ ಗ್ರಾಮಕ್ಕೆ ಇಲ್ಲ. ವಿದ್ಯಾರ್ಥಿಗಳು‌‌ ಅಷ್ಟೇ ಅಲ್ಲದೆ ಅನಾರೋಗ್ಯದಿಂದ ಬಳಲುತ್ತಿರುವವರೂ ಕೂಡ ಖಾಸಗಿ ವಾಹನಗಳನ್ನೆ ಅವಲಂಬಿಸುವ ಪರಿಸ್ಥಿತಿ ಇಲ್ಲಿದೆ. ಆದ್ದರಿಂದ ಎಷ್ಟೋ ಮಕ್ಕಳು ಶಾಲೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಹೊಟೇಲ್ ಮತ್ತು ಬೇರೆ ಕಡೆ ದುಡಿಯಲು ಹೋಗುತ್ತಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಬಗ್ಗೆ ಈ ಮೊದಲು ಕ್ರಮಕ್ಕೆ ಆಗ್ರಹಿಸಿ ಮನವಿ ಸಲ್ಲಿಸಿದ್ದರೂ ಏನೂ ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಇಲ್ಲಿನ ಗ್ರಾಮದ ನಿವಾಸಿಗಳದ್ದು.

ಆದಷ್ಟು ಬೇಗ ಬಸ್ಸಿನ ವ್ಯವಸ್ಥೆ ಕಲ್ಪಿಸುವಂತೆ ಶಿರಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಮತ್ತು ರಸ್ತೆ ನಿರ್ಮಾಣ, ಚರಂಡಿ ನಿರ್ಮಿಸಿ ಕೊಡುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಆಗ್ರಹಿಸಿದ್ದಾರೆ.

WhatsApp Image 2025 07 05 at 5.25.24 PM

ಗೌಳಿ ಸಮಾಜದ ಪ್ರತಿನಿಧಿಗಳ ಪ್ರಕಾರ, ಈ ಬಗ್ಗೆ ಅನೇಕ ಬಾರಿ ಜಿಲ್ಲಾ ಆಡಳಿತ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೆ ಈವರೆಗೂ ಯಾವುದೇ ಸ್ಪಂದನೆ ದೊರೆತಿಲ್ಲ. ಇದರ ವಿರುದ್ಧವಾಗಿ ಗೌಳಿ ಸಮುದಾಯದವರು ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತಪಡಿಸಿದ್ದು, ತಕ್ಷಣದ ಕ್ರಮವಿಲ್ಲದಿದ್ದರೆ ಪ್ರತಿಭಟನೆ ಮಾಡಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಹಾವೇರಿ | ಮುಸ್ಲಿಮರೇ ಇಲ್ಲದ ಊರಲ್ಲಿ ಮೊಹರಂ ಸಂಭ್ರಮ!

ಈ ಗ್ರಾಮದ ಸಮಸ್ಯೆಗಳನ್ನು ಪರಿಹರಿಸುವಂತೆ ಗ್ರಾಮದ ಕೆಲವರು ಸೇರಿಕೊಂಡು ಗ್ರಾಮ ಅಭಿವೃದ್ಧಿ ಸಮಿತಿ ರಚಿಸಿಕೊಂಡಿದ್ದಾರೆ. ಅವರೇ ತಮ್ಮ ಗ್ರಾಮದ ಸಮಸ್ಯೆಗಳನ್ನು ಪರಿಹರಿಸಿ ಕೊಡುವಂತೆ ಪ್ರತಿಯೊಂದು ಇಲಾಖೆಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಮನವಿ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಇನ್ನಾದರೂ ಮುಂಡಗೋಡ ತಾಲೂಕಿನ ಬಾಳೆಹಳ್ಳಿ ಗ್ರಾಮದ ಗೌಳಿ ದಡ್ಡಿಯಲ್ಲಿನ ನಿವಾಸಿಗಳಿಗೆ ಮೂಲ ಸೌಕರ್ಯ ಕಲ್ಪಿಸುವಲ್ಲಿ ಅಧಿಕಾರಿಗಳು ಪ್ರಯತ್ನಿಸುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...