ಉತ್ತರ ಕನ್ನಡ | ಹೊಸ ನ್ಯಾಯಬೆಲೆ ಅಂಗಡಿಗಳಿಗೆ ಪ.ಜಾತಿ–ಪಂಗಡದವರಿಗೆ ಮೊದಲ ಆದ್ಯತೆ: ಎಡಿಸಿ ಸಾಜಿದ್ ಮುಲ್ಲಾ

Date:

ಉತ್ತರ ಕನ್ನಡ ಜಿಲ್ಲೆಯಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿಗಳನ್ನು ತೆರೆಯುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಸಾಜಿದ್ ಮುಲ್ಲಾ ಅವರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗುರುವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿರುವ ಪಡಿತರ ಚೀಟಿಗಳ ಸಂಖ್ಯೆಯನ್ನು ಕೂಲಂಕಷವಾಗಿ ಪರಿಶೀಲಿಸಿ, ಹೊಸ ಅಂಗಡಿಗಳನ್ನು ತೆರೆಯುವಾಗ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.

ವಿಶೇಷವಾಗಿ, ಶೇಕಡಾ 40 ಕ್ಕಿಂತ ಹೆಚ್ಚು ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರು ವಾಸವಿರುವ ಪ್ರದೇಶಗಳಲ್ಲಿ ಅದೇ ಸಮುದಾಯದವರಿಗೆ ಆದ್ಯತೆಯ ಮೇಲೆ ಪಡಿತರ ಅಂಗಡಿಗಳನ್ನು ಮಂಜೂರು ಮಾಡಬೇಕು. ಈ ಪ್ರಕ್ರಿಯೆಯಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಮೀಸಲಾತಿಯನುಸಾರ ಒಳಮೀಸಲಾತಿಯನ್ನು ಕೂಡ ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಅವರು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ ? ಮುಂಡಗೋಡ | ಬಿಜೆಪಿಗೆ ಬಿಗ್ ಶಾಕ್; ವಿವೇಕ್ ಹೆಬ್ಬಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ಯುವ ನಾಯಕ ರವಿ ಹಾವೇರಿ

ಹೊಸ ಅಂಗಡಿಗಳ ಬಗ್ಗೆ ಪ್ರಕಟಣೆ ಹೊರಡಿಸುವಾಗ ಯಾವೆಲ್ಲಾ ಅಂಗಡಿಗಳು ಪ.ಜಾತಿ ಮತ್ತು ಪಂಗಡದವರಿಗೆ ಮೀಸಲಿಡಲಾಗಿದೆ ಎಂಬ ಮಾಹಿತಿಯನ್ನು ಸ್ಪಷ್ಟವಾಗಿ ನಮೂದಿಸಬೇಕು ಎಂದು ಎಡಿಸಿ ನಿರ್ದೇಶನ ನೀಡಿದರು.

ಇದೇ ಸಂದರ್ಭದಲ್ಲಿ, ಪ.ಜಾತಿ ಮತ್ತು ಪಂಗಡದ ಜನರು ಶೇ. 40 ಕ್ಕಿಂತ ಹೆಚ್ಚಿರುವ ಪ್ರದೇಶಗಳ ನಿಖರ ಮಾಹಿತಿಯನ್ನು ಆಹಾರ ಇಲಾಖೆಗೆ ಒದಗಿಸುವಂತೆ ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಮಂಜುನಾಥ ರೇವಣ್‌ಕರ, ಪೌರಾಯುಕ್ತ ಜಗದೀಶ್ ಹುಲಿಗಜ್ಜಿ ಸೇರಿದಂತೆ ವಿವಿಧ ತಾಲೂಕುಗಳ ಆಹಾರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...