ಉತ್ತರ ಕನ್ನಡ | ‘ವರ್ಕ್ ಫ್ರಮ್ ಹೋಮ್’ ಹೆಸರಿನಲ್ಲಿ ಮೋಸ: ಮಹಿಳೆಯಿಂದ ₹10.98 ಲಕ್ಷ ದೋಚಿದ ಆನ್ಲೈನ್ ವಂಚಕರು

Date:

ಉತ್ತರ ಕನ್ನಡ ಜಿಲ್ಲೆಯಲ್ಲಿ ಆನ್‌ಲೈನ್ ಕೆಲಸದ ಆಮಿಷ ತೋರಿಸಿ ಖಾಸಗಿ ನೌಕರಿ ಮಾಡುತ್ತಿದ ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಟೆಲಿಗ್ರಾಂನಲ್ಲಿ “Mishika” ಎಂದು ಪರಿಚಯಿಸಿಕೊಂಡ ವ್ಯಕ್ತಿಯಿಂದ ಬಂದ ಸಂದೇಶದ ಆಧಾರದ ಮೇಲೆ ಮಹಿಳೆ ಅವರು ‘ಮನೆಯಲ್ಲೇ ಕುಳಿತು ಪ್ರತಿ ದಿನ ₹3,000 ಗಳಿಸಬಹುದು’ ಎಂಬ ಮಾತನ್ನು ನಂಬಿ ಹೂಡಿಕೆ ಮಾಡಿದ್ದಾರೆ.

ನವೆಂಬರ್ 4ರಂದು ಟೆಲಿಗ್ರಾಂ ಮೂಲಕ ಬಂದ ಸಂದೇಶದಲ್ಲಿ ಆನ್‌ಲೈನ್ ಪಾರ್ಟ್–ಟೈಮ್ ಕೆಲಸವಿದೆ ಎಂದು ತಿಳಿಸಿ, ನಂತರ ವಾಟ್ಸಪ್ ಮೂಲಕ ಸಂಪರ್ಕ ಮಾಡುವುದಾಗಿ ಹೇಳಿ ಮಹಿಳೆಯ ಮೊಬೈಲ್ ಸಂಖ್ಯೆಗೆ 8985056339 ಎಂಬ ಸಂಖ್ಯೆಯಿಂದ ಸಂದೇಶ ಬಂದಿದೆ. ಆರೋಪಿಗಳು ಕಳುಹಿಸಿದ ಲಿಂಕ್ ಕ್ಲಿಕ್ ಮಾಡಿದಾಗ “RENT” ಎಂದು ಕಾಣಿಸಿಕೊಂಡ ವೆಬ್‌ಸೈಟ್ ತೆರೆದುಕೊಂಡಿದ್ದೆ. ಅಲ್ಲಿ ಲಾಗಿನ್ ಆದ ಮಹಿಳೆಗೆ ಹಲವು ಕಂಪನಿಗಳ ಉತ್ಪನ್ನಗಳಿಗೆ ರೇಟಿಂಗ್ ಹಾಗೂ ವಿಮರ್ಶೆ (ರಿವ್ಯೂ) ನೀಡುವುದು ಕೆಲಸ ಎಂದು ತಿಳಿಸಿ, ಮೊದಲ ಹಂತವಾಗಿ ₹10,000 ಹಣವನ್ನು ಡಿಪಾಸಿಟ್ ಮಾಡಲು ಸೂಚಿಸಲಾಗಿದೆ.

ವಂಚಕರು ಹೇಳಿದಂತೆ ಹಣ ಜಮಾ ಮಾಡಿದ ನಂತರ, ಲಾಭಾಂಶದ ಹೆಸರಿನಲ್ಲಿ ₹15,268 ಹಣ ಬಂದಿರುವಂತೆ ತೋರಿಸಿ ನಂಬಿಕೆ ಮೂಡಿಸಲಾಗಿದೆ. ಆ ನಂತರ ಇನ್ನೂ ಜಾಸ್ತಿ ಲಾಭ ಪಡೆಯಲು ಇನ್ನಷ್ಟು ಹಣ ಹೂಡಿಕೆ ಮಾಡುವಂತೆ ಆರೋಪಿಗಳು ಒತ್ತಾಯಿಸಿದ್ದು, ಮಹಿಳೆ ತಮ್ಮ ಪರಿಚಿತರ ಸಹಾಯದಿಂದ ಅವರು ಹೇಳಿದಂತೆ ವಿಭಿನ್ನ ಬ್ಯಾಂಕ್ ಖಾತೆಗಳಿಗೆ ಒಟ್ಟು ₹10,98,113 ಮೊತ್ತವನ್ನು ವರ್ಗಾವಣೆ ಮಾಡಿದ್ದಾರೆ. ಹೀಗೆ ಹಣ ಕಳುಹಿಸಿದ ಬಳಿಕ ಲಾಭಾಂಶವೂ ಬಾರದಿದ್ದು, ಹೂಡಿಕೆ ಮಾಡಿದ ಮೊತ್ತದ ಮರುಪಾವತಿಗೂ ಯಾವುದೇ ಮಾಹಿತಿ ಸಿಗದೆ ಸಂಪರ್ಕ ಸಂಪೂರ್ಣ ಕಡಿತಗೊಂಡಿರುವುದನ್ನು ಗಮನಿಸಿ ತಾವು ವಂಚನೆಗೆ ಒಳಗಾಗಿರುವುದು ಮಹಿಳೆಗೆ ಅರಿವಾಗಿದೆ. ಈ ಹಿನ್ನೆಲೆಯಲ್ಲಿ ಸಂಬಂಧಿತ ದಾಖಲೆಗಳಾದ ಬ್ಯಾಂಕ್ ಖಾತೆ ವಿವರಗಳು, ಟೆಲಿಗ್ರಾಂ ಹಾಗೂ ವಾಟ್ಸಪ್ ಸಂದೇಶಗಳ ಸ್ಕ್ರೀನ್‌ಶಾಟ್‌ಗಳನ್ನು ಸೇರಿಸಿ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಅಬಕಾರಿ ಇಲಾಖೆಯ ಕಾರ್ಯಾಚರಣೆ; ಅಕ್ರಮ ಮದ್ಯ ಸೇರಿ ₹7 ಲಕ್ಷ ಮೌಲ್ಯದ ವಸ್ತುಗಳು ಜಪ್ತಿ

ಪೊಲೀಸರು ದೂರು ದಾಖಲಿಸಿಕೊಂಡು, ಆರೋಪಿಗಳ ಫೋನ್ ಸಂಖ್ಯೆ, ವೆಬ್‌ಸೈಟ್‌ ಮತ್ತು ಹಣ ಜಮಾ ಮಾಡಿದ ಖಾತೆಗಳ ಬಗ್ಗೆ ತನಿಖೆ ಆರಂಭಿಸಿದ್ದಾರೆ. ವಂಚನೆಯಲ್ಲಿ ಬಳಸಿದ ಲಿಂಕ್, ಮೊಬೈಲ್ ನಂಬರ್ ಹಾಗೂ ಸಂಬಂಧಿಸಿದ ಬ್ಯಾಂಕ್ ಖಾತೆಗಳ ಪರಿಶೀಲನೆಗಾಗಿ ಸೈಬರ್ ವಿಭಾಗದ ಸಹಾಯ ಪಡೆಯಲಾಗುತ್ತಿದೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...