ಉತ್ತರ ಕನ್ನಡ | ಜಾತ್ರಾ ಮಹೋತ್ಸವಗಳಲ್ಲೂ ಜೂಜಿನ ಕರಿನೆರಳು; ಬೀಳಬೇಕಿದೆ ಬ್ರೇಕ್

Date:

ಉತ್ತರ ಕನ್ನಡ ಜಿಲ್ಲೆಯ ಸುಪ್ರಸಿದ್ಧ ಶ್ರೀ ಕ್ಷೇತ್ರ ಉಳವಿ ಚನ್ನಬಸವೇಶ್ವರ ಜಾತ್ರೆಯ ಸಂದರ್ಭದಲ್ಲಿ ಬಹಿರಂಗವಾಗಿ ನಡೆಯುತ್ತಿದ್ದ ‘ಅಂದರ್-ಬಾಹರ್’ ಇಸ್ಪೀಟ್ ಜೂಜಾಟದ ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸುವ ಮೂಲಕ ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್ ಹಾಕಿದ್ದಾರೆ.

ಪತ್ರಿಕೆಗಳಲ್ಲಿ ವರದಿ ಪ್ರಕಟವಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಜೋಯಿಡಾ ಪೊಲೀಸರು, ವಿಶೇಷ ತಂಡವನ್ನು ರಚಿಸಿ ಈ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.

ಉಳವಿ ಜಾತ್ರೆಯಲ್ಲಿ ನಡೆದಿದ್ದೇನು? ಜಾತ್ರೆಯ ಸೋಗಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ರಾಜಾರೋಷವಾಗಿ ಇಸ್ಪೀಟ್ ಆಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿದ ಕೂಡಲೇ, ಜೋಯಿಡಾ ಪಿ.ಎಸ್.ಐ ಮಹೇಶ ಬಸಪ್ಪ ಮಾಳಿ ಮತ್ತು ಅವರ ತಂಡ ಫೆಬ್ರವರಿ 01, 2026 ರಂದು ದಾಳಿ ನಡೆಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000494542

ಈ ಕಾರ್ಯಾಚರಣೆಯಲ್ಲಿ ಒಟ್ಟು 15 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಒಟ್ಟು 34,030 ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಜೋಯಿಡಾ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಅಡಿಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಇಂತಹ ಸುಪ್ರಸಿದ್ಧ ಜಾತ್ರೆಗಳಲ್ಲಿ ಇಷ್ಟು ಬಹಿರಂಗವಾಗಿ ಜೂಜಾಟ ನಡೆಯುತ್ತಿರುವುದು ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಭಕ್ತಾದಿಗಳು ಪವಿತ್ರ ಭಾವನೆಯಿಂದ ಬರುವ ಸ್ಥಳಗಳಲ್ಲಿ ಇಂತಹ ಅಕ್ರಮ ಚಟುವಟಿಕೆಗಳು ನಡೆಯದಂತೆ ಪೊಲೀಸರು ಮತ್ತು ಜಾತ್ರಾ ಸಮಿತಿಗಳು ಮೊದಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ ಎಂಬ ಒತ್ತಾಯ ಕೇಳಿಬಂದಿದೆ.

ಈಗಾಗಲೇ ಜಿಲ್ಲೆಯಲ್ಲಿ ಸಾಲು ಸಾಲು ಐತಿಹಾಸಿಕ ಜಾತ್ರೆಗಳು ಪ್ರಾರಂಭವಾಗಲಿವೆ. ಎರಡು ವರ್ಷಕ್ಕೊಮ್ಮೆ ನಡೆಯುವ ವಿಶ್ವಪ್ರಸಿದ್ಧ ಶಿರಸಿ ಮಾರಿಕಾಂಬಾ ಜಾತ್ರೆ, ಮೂರು ವರ್ಷಕ್ಕೊಮ್ಮೆ ನಡೆಯುವ ಯಲ್ಲಾಪುರ ಮಾರಿಕಾಂಬಾ ಜಾತ್ರೆ ಹಾಗೂ ಮುಂಡಗೋಡ ಮಾರಿಕಾಂಬಾ ಜಾತ್ರೆಗಳು ಕೆಲವೇ ದಿನಗಳಲ್ಲಿ ಆರಂಭವಾಗಲಿವೆ.

ಈ ಸುದ್ದಿ ಓದಿದ್ದೀರಾ? ಸಿದ್ದಾಪುರ | ಹುಲ್ಕುತ್ರಿ ಶಾಲೆಯಲ್ಲಿ ‘ಬಾನು ಬೆರಗು’: ಟೆಲಿಸ್ಕೋಪ್ ಮೂಲಕ ಆಕಾಶಕಾಯಗಳನ್ನು ವೀಕ್ಷಿಸಿದ ವಿದ್ಯಾರ್ಥಿಗಳು

ಲಕ್ಷಾಂತರ ಭಕ್ತರು ಸೇರುವ ಈ ಮಹೋತ್ಸವಗಳಲ್ಲಿ ಉಳವಿ ಜಾತ್ರೆಯಂತೆ ಅಕ್ರಮ ಚಟುವಟಿಕೆಗಳು ಮರುಕಳಿಸದಂತೆ ನೋಡಿಕೊಳ್ಳುವುದು ಪೊಲೀಸ್ ಇಲಾಖೆಗೆ ದೊಡ್ಡ ಸವಾಲಾಗಿದೆ.

ಈ ಜಾತ್ರೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಹೇಗಿರುತ್ತದೆ? ಜಾತ್ರಾ ಮಹೋತ್ಸವ ಸಮಿತಿಗಳು ಜೂಜಾಟ ಮತ್ತು ಅಕ್ರಮಗಳನ್ನು ತಡೆಯಲು ಯಾವ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಿವೆ? ಜೂಜುಕೋರರಿಗೆ ಮತ್ತು ಕಾನೂನು ಉಲ್ಲಂಘಿಸುವವರಿಗೆ ಪೊಲೀಸರು ಯಾವ ರೀತಿ ಬಿಸಿ ಮುಟ್ಟಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ಈ ಬಾರಿ ಜಾತ್ರೆಗಳು ಶಾಂತಿಯುತವಾಗಿ ಮತ್ತು ಕಾನೂನುಬದ್ಧವಾಗಿ ನಡೆಯಲಿ ಎಂಬುದು ಸಾರ್ವಜನಿಕರ ಮತ್ತು ಭಕ್ತರ ಆಶಯವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...