ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

Date:

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ ಹೆಚ್ಚುವರಿ ಸೀಮೆಎಣ್ಣೆ ಹಂಚಿಕೆಯಾಗಿದ್ದು, ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಸಕ್ತ ಮಾರ್ಚ್ 2026ರ ತಿಂಗಳಿಗೆ ಅನ್ವಯವಾಗುವಂತೆ, ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿರುವ 639 ಅನಿಲ ರಹಿತ ಪಡಿತರ ಚೀಟಿದಾರರಿಗೆ ಹಾಗೂ ಸೀಮೆಎಣ್ಣೆ ಪಡೆಯಲು ಒಪ್ಪಿಗೆ ನೀಡಿರುವ 1,89,086 ಅನಿಲ ಸಹಿತ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡಿಗೆ 3 ಲೀಟರ್‌ನಂತೆ ಸೀಮೆಎಣ್ಣೆಯನ್ನು ಮರು ಹಂಚಿಕೆ ಮಾಡಿ ಆದೇಶ ಹೊರಡಿಸಲಾಗಿದೆ.

ನ್ಯಾಯಬೆಲೆ ಅಂಗಡಿಗಳಲ್ಲಿ ನಿಗದಿಪಡಿಸಿದ ಪ್ರಮಾಣಕ್ಕಿಂತ ಕಡಿಮೆ ಸೀಮೆಎಣ್ಣೆ ನೀಡುತ್ತಿರುವುದು ಕಂಡುಬಂದಲ್ಲಿ ಅಥವಾ ಪಡಿತರ ವಿತರಣೆಯಲ್ಲಿ ಯಾವುದೇ ಲೋಪದೋಷಗಳ ಕುರಿತು ದೂರುಗಳು ಸ್ವೀಕೃತವಾದಲ್ಲಿ ಅಂತಹ ಅಂಗಡಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾಂಡೇಲಿ | ಬಡ ರೋಗಿಗಳಿಂದ ಹಣ ವಸೂಲಿ ಆರೋಪ: ವೈದ್ಯರಿಗೆ ಶಾಸಕ ಆರ್.ವಿ. ದೇಶಪಾಂಡೆ ಖಡಕ್ ಸೂಚನೆ

ಪಡಿತರ ಚೀಟಿದಾರರಿಗೆ ವಿತರಣೆಯಲ್ಲಿ ಯಾವುದೇ ಸಮಸ್ಯೆಗಳು ಎದುರಾದಲ್ಲಿ ತಕ್ಷಣವೇ ತಮ್ಮ ತಾಲೂಕಿನ ಆಹಾರ ಶಿರಸ್ತೇದಾರರನ್ನು ಅಥವಾ ಆಹಾರ ನಿರೀಕ್ಷಕರನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಾರವಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರನ್ನು ಸಂಪರ್ಕಿಸಲು ಕೋರಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...

ಹಾವೇರಿ | ವೃತ್ತಿ ಶಿಕ್ಷಣ, ಕೆರಿಯರ್ ಮೇಳ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶ: ಸಿಇಒ ರುಚಿ ಬಿಂದಲ್

"ವೃತ್ತಿ ಶಿಕ್ಷಣ, ಕೆರಿಯರ್ ಮೇಳ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಇದೊಂದು...