ಉತ್ತರ ಕನ್ನಡ | ಹಾಲಕ್ಕಿ ಮಹಿಳೆಯ‌ ಸ್ವಚ್ಛತಾ ಕಾರ್ಯ; ಆನಂದ್ ಮಹೀಂದ್ರಾ ಮೆಚ್ಚುಗೆ

Date:

  • ಜೀವನೋಪಾಯಕ್ಕಾಗಿ ಹಣ್ಣು ಮಾರುವ ಹಾಲಕ್ಕಿ ಮಹಿಳೆ
  • ʼಹಾಲಕ್ಕಿ ಮಹಿಳೆಯನ್ನು ಸಂಪರ್ಕಿಸಿ ಮಾತನಾಡಿಸಲು ಅವಕಾಶ ಮಾಡಿಕೊಡಿʼ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಸ್‌ ನಿಲ್ದಾಣದಲ್ಲಿ ಹಣ್ಣು ಮಾರುವ ಹಾಲಕ್ಕಿ ಮಹಿಳೆಯ‌ ಸ್ವಚ್ಛತಾ ಕಾರ್ಯವನ್ನು ಮಹೀಂದ್ರಾ ಸಂಸ್ಥೆಯ ಮಾಲೀಕ ಆನಂದ್ ಮಹೀಂದ್ರಾ ಕೊಂಡಾಡಿದ್ದಾರೆ.

“ಸದ್ದಿಲ್ಲದೆ ಸ್ವಚ್ಛ ಭಾರತದ ಪ್ರಯತ್ನವನ್ನು ಸಕಾರಗೊಳಿಸುವ ಇಂತಹವರೇ ಸ್ವಚ್ಛ ಭಾರತ್‌ನ ನಿಜವಾದ ನಾಯಕರು. ಇವರ ಕಾರ್ಯವನ್ನು ಗಮನಿಸದಿರುವುದು, ಶ್ಲಾಘಿಸದೆ ಇರುವುದು ದುರಂತ” ಎಂದು ಟ್ವೀಟ್‌ ಮೂಲಕ ಹಾಲಕ್ಕಿ ಮಹಿಳೆಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪಟ್ಟಣದ ಬಸ್ ನಿಲ್ದಾಣದಲ್ಲಿ ಹಾಲಕ್ಕಿ ಮಹಿಳೆಯೊಬ್ಬರು ಜೀವನೋಪಾಯಕ್ಕಾಗಿ ಪ್ರತಿನಿತ್ಯ ಎಲೆಯ ಕೊಟ್ಟೆಯಲ್ಲಿ ನೇರಳೆ ಹಣ್ಣುಗಳನ್ನು ತಂದು ಮಾರಾಟ ಮಾಡುತ್ತಾರೆ. ಮಹಿಳೆಯಿಂದ ನೇರಳೆ ಹಣ್ಣು ಖರೀದಿಸುವ ಪ್ರಯಾಣಿಕರು ಹಣ್ಣುಗಳನ್ನು ತಿಂದು, ಎಲೆಯನ್ನು ಬಸ್‌ನ ಕಿಟಕಿಯಿಂದ ಹೊರಗೆ ಬಿಸಾಡಿ ತೆರಳುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೀಗೆ ಪ್ರಯಾಣಿಕರು ಎಸೆದ ಎಲೆಗಳನ್ನು ಹಾಲಕ್ಕಿ ಮಹಿಳೆ ಆರಿಸಿ ತಂದು ಕಸದ ಬುಟ್ಟಿಗೆ ಹಾಕುವುದನ್ನು ರೂಢಿಸಿಕೊಂಡಿದ್ದಾರೆ. ಹೀಗೆ ಮಹಿಳೆ ಎಲೆ ಹೆಕ್ಕುತ್ತಿದ್ದ ವೇಳೆ ಆದರ್ಶ ಹೆಗಡೆ ಎಂಬುವವರು ಮೊಬೈಲ್‌ನಲ್ಲಿ ವಿಡಿಯೋ ಮಾಡಿ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಧಾನಸಭಾ ಚುನಾವಣೆ | ಮತದಾನ ಬಹಿಷ್ಕಾರ; ಬ್ಯಾನರ್‌ ಅಳವಡಿಸಿ ಗ್ರಾಮಸ್ಥರ ಆಕ್ರೋಶ

ಈ ವಿಡಿಯೋ ಸಾಕಷ್ಟು ವೈರಲ್ ಆಗಿದ್ದು, ಆನಂದ್ ಮಹೀಂದ್ರಾ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಹಾಲಕ್ಕಿ ಮಹಿಳೆಯ ಕಾರ್ಯವನ್ನು ಶ್ಲಾಘಿಸಿದ್ದು, “ಸ್ವಚ್ಛ ಭಾರತದ ನಿಜವಾದ ನಾಯಕಿ ಇವರೇ. ಈ ಮಹಿಳೆಯನ್ನು ಸಂಪರ್ಕಿಸಿ ಮಾತನಾಡಿಸಲು ಅವಕಾಶ ಮಾಡಿಕೊಡಿ” ಎಂದು ಕೇಳಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...