ಉತ್ತರ ಕನ್ನಡ | ಸುಳ್ಳು ಪ್ರಚಾರ ಮಾಡಿ JSW ಕಂಪನಿ ಜನರ ದಾರಿತಪ್ಪಿಸುತ್ತಿದೆ: ಸಂಜೀವ ಬಲೆಗಾರ

Date:

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೇಣಿಯಲ್ಲಿ ವಾಣಿಜ್ಯ ಬಂದರು ನಿರ್ಮಾಣಕ್ಕೆ ಪರಿಸರ ಪರಿಶೀಲನೆ ಹಾಗೂ ಭೂ ಸ್ವಾಧೀನ ಪ್ರಕ್ರಿಯೆ ನಡೆಯುವ ಮುನ್ನವೇ ಬಂದರು ಸ್ಥಾಪನೆಯಾದರೆ ಜಿಲ್ಲೆ ಹಾಗೂ ಬಂದರು ಪ್ರದೇಶದಲ್ಲಿ ಹೆಚ್ಚು ಉಪಯೋಗಗಳಿವೆ ಎಂದು ಸುಳ್ಳು ಪ್ರಚಾರ ಮಾಡಿ JSW ಕಂಪನಿಯು ಜನರ ದಾರಿ ತಪ್ಪಿಸುತ್ತಿದೆ ಎಂದು ಕೇಣಿ ವಾಣಿಜ್ಯ ಬಂದರು ಹೊರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಸಂಜೀವ ಬಲೆಗಾರ ಆರೋಪಿಸಿದರು.

ವಾಣಿಜ್ಯ ಬಂದರು ಸ್ಥಾಪನೆಯಿಂದ ಸ್ಥಳೀಯ ಮೀನುಗಾರರಿಗೆ ಅನುಕೂಲ ಹಾಗೂ ಯುವಕರಿಗೆ ಉದ್ಯೋಗ ಸೃಷ್ಟಿಯಾಗಲಿದೆ ಎಂದು ನಮ್ಮ ಜಿಲ್ಲೆಯವರೇ ಅಲ್ಲದವರು ಹೇಳುತ್ತಿದ್ದಾರೆ. ಅದನ್ನು ದಾಖಲಿಸುತ್ತಾ ವ್ಯಾಪಕ ಸುಳ್ಳಿನ ಪ್ರಚಾರವನ್ನು ಮಾಡುತ್ತಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ದೂರಿದರು.

“ಜಿಲ್ಲೆಯ ಹಾಗೂ ಕೇಣಿ ಪ್ರದೇಶದ ಅಭಿವೃದ್ಧಿ ವಿರೋಧಿಗಳೇನೂ ಅಲ್ಲ. ಆದರೆ, ಜನರನ್ನು ನಿರಾಶ್ರಿತರನ್ನಾಗಿ ಮಾಡಿ ನೈಸರ್ಗಿಕ ಸಂಪನ್ಮೂಲಗಳನ್ನು ನಾಶ ಮಾಡುವ ಇಂತಹ ಯೋಜನೆಗೆ ನಮ್ಮ ವಿರೋಧವಿದೆ. ಮಂಗಳೂರು ಹಾಗೂ ಗೋವಾಗಳ‌ ಅಭಿವೃದ್ದಿಗೆ ಬಂದರು ಸ್ಥಾಪನೆ ಕಾರಣ ಎಂದು ಕಂಪನಿ ಹೇಳಿಕೊಂಡಿದೆ. ಆದರೆ, ಬಂದರು ಸ್ಥಾಪನೆಯಿಂದ ಅಲ್ಲಿ ಆಗುತ್ತಿರುವ ಮಾಲಿನ್ಯದ ಬಗ್ಗೆ ಏಕೆ ಹೇಳುತ್ತಿಲ್ಲ?” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲೆಯಲ್ಲಿ ಈಗ ಇರುವ ಬಂದರುಗಳಲ್ಲಿ ವಹಿವಾಟು ನಡೆಯುತ್ತಿಲ್ಲ. ಇದೇ ಸಂದರ್ಭದಲ್ಲಿ ಹೊಸ ಬಂದರು ಸ್ಥಾಪನೆ ಅವಶ್ಯಕತೆ ಇದೆಯೇ ಎಂದು ಪ್ರಶ್ನಿಸಿರುವ ಅವರು, ಇದು ಕೇವಲ ಮೀನುಗಾರರ ಹೋರಾಟ ಅಲ್ಲಾ ಬೇಲೆಕೇರಿ ಮತ್ತು ಬಾವಿಕೇರಿ ರೈತರು ಕೂಡ ತಮ್ಮ ಕೃಷಿ ಭೂಮಿ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದಾರೆ. ಜಿಲ್ಲೆಯ ಯಾವೊಬ್ಬ ಜನಪ್ರತಿನಿಧಿ ಕೂಡ ಹೋರಾಟಕ್ಕೆ ಬೆಂಬಲ ನೀಡುತ್ತಿಲ್ಲ. ಹೀಗೆ ಮಾಡಿದರೆ ನಾವು ಕೂಡ ಮುಂದಿನ ದಿನಗಳಲ್ಲಿ ಚುನಾವಣೆಯನ್ನು ಬಹಿಷ್ಕರಿಸುವ ನಿರ್ಧಾರವನ್ನು ಮಾಡಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಇದನ್ನೂ ಓದಿ: ಉತ್ತರ ಕನ್ನಡ | ನಗರಸಭೆ ಅಧಿಕಾರಿಗಳಿಂದಲೇ ನೀರಿನ ಪೈಪ್ ಕಳ್ಳತನ

“ಯೋಜನೆ ವಿರೋಧಿಸುವವರಿಗೆ ಕಂಪನಿ ಏನೇ ಆಮಿಷವೊಡ್ಡಿದರೂ ನಾವು ಯಾವುದಕ್ಕೂ ಬಲಿಯಾಗುವುದಿಲ್ಲ. ಯೋಜನೆ ವಿರುದ್ಧ ನಮ್ಮ ಕಾನೂನು ಹೋರಾಟ ಮುಂದುವರಿಯಲಿದೆ” ಎಂದು ಹೇಳಿದರು.

ಪತ್ರಿಕಾ ಗೋಷ್ಠಿಯಲ್ಲಿ ಹುವಾ ಖಂಡೇಕರ, ವೆಂಕಟೇಶ ದುರ್ಗೆಕರ, ಮಂಜುನಾಥ ಠಾಕೇಕರ, ಚಂದ್ರಕಾಂತ ಪಿರಣಕರ್, ಮಧ್ವರಾಜ್, ನಿಲೇಶ ಹರಿಕಂತ್ರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...