ಉತ್ತರ ಕನ್ನಡ | ಕೆಡಿಪಿ ಸಭೆ: ಆರೋಗ್ಯ, ಶಿಕ್ಷಣ, ಸಾರಿಗೆ ಸುಧಾರಣೆಗೆ ಸಚಿವ ಮಂಕಾಳ ವೈದ್ಯ ಕಟ್ಟುನಿಟ್ಟಿನ ಸೂಚನೆ

Date:

ಉತ್ತರ ಕನ್ನಡ ಜಿಲ್ಲೆಯ ಯಾವುದೇ ಸರ್ಕಾರಿ ವೈದ್ಯಕೀಯ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ನೀಡುವ ಔಷಧಿಗಳ ವಿತರಣೆಯಲ್ಲಿ ಕೊರತೆಯಾಗದಂತೆ ಎಚ್ಚರವಹಿಸಬೇಕು. ರೋಗಿಗಳಿಗೆ ಆಸ್ಪತ್ರೆಯ ಹೊರಗಿನಿಂದ ಔಷಧಿ ಪಡೆಯುವಂತೆ ಚೀಟಿಗಳನ್ನು ನೀಡಬಾರದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ (KDP) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆಯಿದ್ದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ಯ ಮೂಲಕ ಅಗತ್ಯ ಔಷಧಿಗಳನ್ನು ಖರೀದಿಸಿ ರೋಗಿಗಳಿಗೆ ಉಚಿತವಾಗಿ ವಿತರಿಸಬೇಕು ಎಂದು ತಿಳಿಸಿದರು.

ಇದೇ ವೇಳೆ ಕಾರವಾರದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ತಜ್ಞ ವೈದ್ಯರನ್ನು ನೇಮಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಕೆಡಿಪಿ ಸಭೆಯಲ್ಲಿ ಸಚಿವ-ಶಾಸಕರ ನಡುವೆ ತಾರಕಕ್ಕೇರಿದ ವಾಗ್ವಾದ; ಸಭೆಯಿಂದ ಹೊರನಡೆದ ಸತೀಶ್ ಸೈಲ್

ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ, ಸುರಕ್ಷತೆಗೆ ಒತ್ತು ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚಿರುವ ಸರ್ಕಾರಿ ಶಾಲೆಗಳ ಜಾಗ ಅತಿಕ್ರಮಣವಾಗದಂತೆ ನೋಡಿಕೊಳ್ಳುವುದು ಸಂಬಂಧಿಸಿದ ಪಂಚಾಯತ್ ಪಿಡಿಓ ಹಾಗೂ ತಾ.ಪಂ ಕಾರ್ಯನಿರ್ವಹಣಾಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡಗಳನ್ನು ತೆರವುಗೊಳಿಸಿ, ಅಪಾಯಕಾರಿ ಮರಗಳು ಹಾಗೂ ವಿದ್ಯುತ್ ತಂತಿಗಳನ್ನು ಸರಿಪಡಿಸಿ ಮಕ್ಕಳ ಸುರಕ್ಷತೆ ಖಚಿತಪಡಿಸಬೇಕು ಎಂದು ಸೂಚಿಸಿದರು. ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಜಿಲ್ಲೆಯು ಶೇ.100ರಷ್ಟು ಸಾಧನೆ ಮಾಡುವಂತೆ ಶಿಕ್ಷಕರು ಶ್ರಮಿಸಬೇಕು ಎಂದು ತಿಳಿಸಿದರು.

ಸಾರಿಗೆ ವ್ಯವಸ್ಥೆ ಕುರಿತು ಚರ್ಚೆ ಸಭೆಯಲ್ಲಿ ಜಿಲ್ಲೆಯ ಸಾರಿಗೆ ವ್ಯವಸ್ಥೆಯ ಬಗ್ಗೆ ಗಂಭೀರ ಚರ್ಚೆ ನಡೆಯಿತು. ಶಾಸಕ ಸತೀಶ್ ಸೈಲ್ ಅವರು ಜಿಲ್ಲೆಯಲ್ಲಿ ಹಳೆಯ ಬಸ್‌ಗಳು ಸಂಚರಿಸುತ್ತಿದ್ದು, ನಿರ್ವಹಣೆ ಸಮರ್ಪಕವಾಗಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಜಿಲ್ಲೆಗೆ ಈಗಾಗಲೇ 104 ಹೊಸ ಬಸ್‌ಗಳನ್ನು ನೀಡಲಾಗಿದ್ದು, ಶೀಘ್ರದಲ್ಲೇ ಇನ್ನೂ 20 ಬಸ್‌ಗಳು ಆಗಮಿಸಲಿವೆ ಎಂದು ತಿಳಿಸಿದರು. ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಬಸ್ ವ್ಯವಸ್ಥೆ ಮಾಡಬೇಕು ಹಾಗೂ ಸ್ಥಗಿತಗೊಂಡಿರುವ ಕಾರವಾರ–ಬೆಂಗಳೂರು ಬಸ್ ಸಂಚಾರವನ್ನು ಪುನರಾರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ನದಿ ಜೋಡಣೆ ಯೋಜನೆಗೆ ವಿರೋಧ ಜಿಲ್ಲೆಯಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವ ಬೇಡ್ತಿ–ವರದಾ ಹಾಗೂ ಅಘನಾಶಿನಿ–ವೇದಾವತಿ ನದಿ ಜೋಡಣೆ ಯೋಜನೆಗಳ ವಿರುದ್ಧ ಸಭೆಯಲ್ಲಿ ನಿರ್ಣಯ ಕೈಗೊಳ್ಳುವಂತೆ ಶಿರಸಿ ಶಾಸಕ ಭೀಮಣ್ಣ ನಾಯ್ಕ್ ಒತ್ತಾಯಿಸಿದರು. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಸಹ ಸಮ್ಮತಿ ಸೂಚಿಸಿ ಅನುಮೋದನೆ ನೀಡಿದರು.

ಈ ಸುದ್ದಿ ಓದಿದ್ದೀರಾ ? ಹೊನ್ನಾವರ | ಬಂಗಾರಮಕ್ಕಿ ಆಂಜನೇಯನ ಸನ್ನಿಧಿಗೆ ಭೇಟಿ ನೀಡಿದ ಕೆ.ಎಲ್. ರಾಹುಲ್

ಇತರ ಪ್ರಮುಖ ಸೂಚನೆಗಳು ಮಳೆಗಾಲದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗದಂತೆ 24 ಗಂಟೆಯೊಳಗೆ ಟ್ರಾನ್ಸ್‌ಫಾರ್ಮರ್ ಹಾಗೂ ಕಂಬಗಳ ದುರಸ್ತಿ ಕಾರ್ಯಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು. ಜಲಪಾತಗಳ ಬಳಿ ಪ್ರವಾಸಿಗರ ಸುರಕ್ಷತೆಗಾಗಿ ಹೋಂ ಗಾರ್ಡ್‌ಗಳನ್ನು ನಿಯೋಜಿಸಿ, ಮುನ್ನೆಚ್ಚರಿಕೆ ಫಲಕಗಳನ್ನು ಅಳವಡಿಸಬೇಕು.

ಬೇಸಿಗೆಯಲ್ಲಿ ನೀರಿನ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ, ‘ಜಲ ಜೀವನ್ ಮಿಷನ್’ ಕಾಮಗಾರಿಗಳನ್ನು ನೀರಿನ ಮೂಲ ಇರುವ ಪ್ರದೇಶಗಳಲ್ಲಿ ಮಾತ್ರ ಕೈಗೊಳ್ಳಬೇಕು. ಹಾಸ್ಟೆಲ್ ಪ್ರವೇಶ ಪ್ರಕ್ರಿಯೆಯನ್ನು ಶೀಘ್ರ ಆರಂಭಿಸಿ, ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಶಶಿ, ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ್ ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...