ಉತ್ತರ ಕನ್ನಡ | ಕಾಳಿ ನದಿಗೆ ಉರುಳಿದ ಕೋಡಿಭಾಗ್ ಸೇತುವೆ

Date:

ಉತ್ತರ ಕನ್ನಡ ಜಿಲ್ಲೆಯಲ್ಲಿ ಶಿರೂರು ಗುಡ್ಡ ಕುಸಿತ ಪ್ರಕರಣ, ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಆ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಪೈಕಿ ಮೂವರ ಮೃತದೇಹಗಳು ಇನ್ನೂ ಪತ್ತೆಯಾಗಿಲ್ಲ. ಇಂತಹ ಸಂದರ್ಭದಲ್ಲಿಯೇ, ಜಿಲ್ಲೆಯ ಕಾರವಾರ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೋಡಿಭಾಗ್ ಸೇತುವೆ ಕುಸಿದು ಬಿದ್ದಿದೆ. ಕಾಳಿ ನದಿಯ ಮೇಲೆ ಕಟ್ಟಲಾಗಿದ್ದ ಕೋಡಿಭಾಗ್ ಸೇತುವೆ ಕುಸಿದು ಬಿದ್ದಿದ್ದು, ತಮಿಳುನಾಡು ಮೂಲದ ಲಾರಿ ನದಿಗೆ ಉರುಳಿದೆ. ಲಾರಿ ಚಾಲಕನನ್ನು ಸ್ಥಳೀಯರು ಮತ್ತು ಪೊಲೀಸರು ರಕ್ಷಿಸಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕರಾವಳಿ-ಮಲೆನಾಡು ಪ್ರದೇಶದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಭಾರೀ ಮಳೆಯಾಗುತ್ತಿದೆ. ಕಾಳಿ ನದಿ ತುಂಬಿ ಹರಿಯುತ್ತಿದ್ದು, ನದಿ ತಟದಲ್ಲಿನ ಗ್ರಾಮಗಳ ಜನಜೀವನ ಅಸ್ತವ್ಯಸ್ತವಾಗಿದೆ. ಈ ಮಧ್ಯೆ, ಕಾರವಾರ ಬಳಿ ಸೇತುವೆ ಕುಸಿದು ಬಿದ್ದಿದೆ.

ಘಟನಾ ಸ್ಥಳಕ್ಕೆ ಉತ್ತರ ಕನ್ನಡ ಎಸ್‌ಪಿ ನಾರಾಯಣ ಭೇಟಿ ನೀಡಿ, ಮಾಹಿತಿ ಪಡೆದುಕೊಂಡಿದ್ದಾರೆ. “ಘಟನಾ ಸ್ಥಳದಲ್ಲಿ ಕರವಾಳಿ ಕಾವಲು ಪಡೆ, ಎಸ್​​ಡಿಆರ್​​ಎಫ್ ಮತ್ತು ಎನ್​ಡಿಆರ್​ಎಫ್ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಲಾರಿ ಚಾಲಕನನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಧ್ಯರಾತ್ರಿ ಸೇತುವೆ ಕುಸಿದು ಬಿದ್ದಿದೆ. ಘಟನೆ ಬಗ್ಗೆ ಮಾಹಿತಿ ಬಂದ ಕೂಡಲೇ ಕಾರ್ಯ ಪಡೆಗಳು ಸ್ಥಳಕ್ಕೆ ಭೇಟಿ ನೀಡಿ, ಕಾರ್ಯಾಚರಣೆ ಆರಂಭಿಸಿವೆ. ನದಿಗೆ ಲಾರಿಯಲ್ಲದೆ ಬೇರೆ ಯಾವುದಾದರೂ ವಾಹನಗಳು ಬಿದ್ದಿವೆಯೇ ಎಂಬ ಬಗ್ಗೆ ಶೋಧ ನಡೆಯುತ್ತಿದೆ” ಎಂದು ಅವರು ಹೇಳಿದ್ದಾರೆ.

ಕುಸಿದು ಬಿದ್ದಿರುವ ಸೇತುವೆಯನ್ನು 41 ವರ್ಷಗಳ ಹಿಂದೆ ನಿರ್ಮಿಸಲಾಗಿತ್ತು. ಇತ್ತೀಚೆಗೆ ಹೆದ್ದಾರಿಗಾಗಿ ಅದರ ಪಕ್ಕದಲ್ಲಿಯೇ ಮತ್ತೊಂದು ಸೇತುವೆಯನ್ನೂ ನಿರ್ಮಾಣ ಮಾಡಲಾಗಿತ್ತು. ಆದರೆ, ಒಂದು ಬದಿಯ ಸಂಚಾರಕ್ಕೆ ಹೊಸ ಸೇತುವೆಯನ್ನು, ಮತ್ತೊಂದು ಬದಿಯ ಸಂಚಾರಕ್ಕೆ ಹಳೆಯ ಸೇತುವೆಯನ್ನೂ ಬಳಸಲಾಗುತ್ತಿತ್ತು. ಇದೀಗ, ಸೇತುವೆ ಕುಸಿದು ಬಿದ್ದಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಐಆರ್​ಬಿ ಕಂಪನಿ ವಿರುದ್ಧ ಕಾರವಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...