ಉತ್ತರ ಕನ್ನಡ | ನಿರ್ವಹಣೆ ಕೊರತೆ; ಹಳ್ಳಕ್ಕೆ ಬಿದ್ದ ಸರ್ಕಾರಿ ಬಸ್, ಸಾರ್ವಜನಿಕರ ಆಕ್ರೋಶ

Date:

ಕಾರವಾರದಿಂದ ದೇವಳಮಕ್ಕಿ, ಶಿರ್ವೆಗೆ ಸಂಚರಿಸುವ ಸರ್ಕಾರಿ ಬಸ್ ಗುರುವಾರ ಏಕಾಏಕಿ ಹಳ್ಳಕ್ಕೆ ಇಳಿದು ನಿಂತಿದೆ. ಆದರೆ ಬಸ್‌ನಲ್ಲಿದ್ದ ಎಲ್ಲಾ ವಿದ್ಯಾರ್ಥಿಗಳು ಸುರಕ್ಷಿತವಾಗಿ ಪಾರಾಗಿದ್ದಾರೆ. ಈ ಘಟನೆಯು ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಹಳೆಯ ಬಸ್ಸುಗಳ ದುರಸ್ತಿ ಮತ್ತು ನಿರ್ವಹಣೆಗೆ ಆಗ್ರಹಿಸಿದ್ದಾರೆ.

ದೇವರಮಕ್ಕಿ ಗ್ರಾಮ ಪಂಚಾಯತ್ ಸದಸ್ಯ ಸಂತೋಷ್ ಗೌಡ ಅವರು ಸುಸ್ಥಿತಿಯಲ್ಲಿರುವ ಬಸ್ ಒದಗಿಸುವಂತೆ ಸಾರಿಗೆ ಇಲಾಖೆಗೆ ಮನವಿ ಮಾಡಿದ್ದಾರೆ. ದೇವಳಮಕ್ಕಿ ಭಾಗದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ಸಂಚಾರಕ್ಕೆ ಈ ಬಸ್ ಅನುಕೂಲಕರವಾಗಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಈ ಬಸ್ ಆಗಾಗ್ಗೆ ಕೆಟ್ಟು ನಿಲ್ಲುತ್ತಿತ್ತು ಮತ್ತು ತಾಂತ್ರಿಕ ದೋಷಗಳು ಸಾಮಾನ್ಯವಾಗಿತ್ತು ಎಂದು ಸ್ಥಳೀಯರು ಹೇಳಿದ್ದಾರೆ.

ಗುರುವಾರವೂ ತಾಂತ್ರಿಕ ದೋಷದಿಂದ ಬಸ್ ಹಳ್ಳಕ್ಕೆ ಇಳಿದು ನಿಂತಿತು. ಘಟನೆಯ ನಂತರ ಹಳ್ಳಕ್ಕೆ ಇಳಿದ ಬಸ್‌ನಿಂದ ವಿದ್ಯಾರ್ಥಿಗಳನ್ನು ಬೇರೆ ಬಸ್‌ಗೆ ಸ್ಥಳಾಂತರಿಸಲಾಯಿತು. ಆದರೆ, ವಿದ್ಯಾರ್ಥಿಗಳು ಆ ಬಸ್‌ನಲ್ಲಿ ಕರೆದೊಯ್ಯಲು ನಿರಾಕರಿಸಿದ ಕಾರಣ, ನಂತರ ದೇವಳಮಕ್ಕಿಗೆ ರೂಪಾಲಿ ಎಸ್. ನಾಯ್ಕ್ ಅವರು ನೀಡಿದ ಆಂಬುಲೆನ್ಸ್‌ನಲ್ಲಿ ವಿದ್ಯಾರ್ಥಿಗಳು ತೆರಳಬೇಕಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಉತ್ತರ ಕನ್ನಡ | ಕನ್ನಡ ತರ್ಜುಮೆ ತಂತ್ರಾಂಶ ʼಕನ್ನಡ ಕಸ್ತೂರಿʼ ಶೀಘ್ರದಲ್ಲೇ ಬಿಡುಗಡೆ

ಸುಸ್ಥಿತಿಯಲ್ಲಿರುವ ಬಸ್ ಒದಗಿಸುವಂತೆ ಸಾರಿಗೆ ಇಲಾಖೆಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗ್ರಾಮೀಣ ಪ್ರದೇಶದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸುಸ್ಥಿತಿಯಲ್ಲಿರುವ ಬಸ್ ಅನ್ನು ನಿಗದಿತ ಸಮಯಕ್ಕೆ ಸರಿಯಾಗಿ ಓಡಿಸುವಂತೆ ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...