ಉತ್ತರ ಕನ್ನಡ ಜಿಲ್ಲೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತ ಸಮುದಾಯಗಳ (ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ ಮತ್ತು ಪಾರ್ಸಿ) ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸಾಮೂಹಿಕ ವಿವಾಹದಲ್ಲಿ ಮದುವೆ ಆಗುವ ಪ್ರತಿ ಜೋಡಿಗೆ 50,000/- ರೂ.ಗಳನ್ನು ನೀಡಲು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಇರುವ ನಿಯಮಾವಳಿಗಳು: ವಧು-ವರರು ಕರ್ನಾಟಕ ರಾಜ್ಯದ ನಿವಾಸಿಗಳಾಗಿರಬೇಕು. ಹುಡುಗಿಗೆ ಕನಿಷ್ಠ 18 ವರ್ಷ ಗರಿಷ್ಠ 42 ವರ್ಷ ಆಗಿರಬೇಕು ಮತ್ತು ಹುಡುಗನಿಗೆ ಕನಿಷ್ಠ 21 ವರ್ಷದಿಂದ ಗರಿಷ್ಠ 45 ವರ್ಷ ವಯಸ್ಸು ಇರಬೇಕು. ವಧು-ವರರ ವಾರ್ಷಿಕ ಆದಾಯ ರೂ.2.5 ಲಕ್ಷದ ಒಳಗಿರಬೇಕು. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಈ ಸೌಲಭ್ಯವನ್ನು ಪಡೆಯಬಹುದು. ವರನಿಗೆ ಜೀವಂತ ಪತ್ನಿ ಅಥವಾ ವಧುಗೆ ಜೀವಂತ ಪತಿ ಇದ್ದಲ್ಲಿ ಈ ಯೋಜನೆ ಅನ್ವಯಿಸುವುದಿಲ್ಲ. 7 ದಿನ ಮುಂಚಿತವಾಗಿ ವಾಸ್ತವ್ಯವಿರುವ ಜಿಲ್ಲೆಯಲ್ಲಿಯೇ ಅರ್ಜಿ ಸಲ್ಲಿಸಬೇಕು. ಸಾಮೂಹಿಕ ವಿವಾಹದಲ್ಲಿ ಕನಿಷ್ಟ 10 ಜೋಡಿಗಳು ಆದರೂ ಭಾಗವಹಿಸಬೇಕು.
ಜಿಲ್ಲಾ ನೊಂದಣಿ/ವಕ್ಫ್ ಬೋರ್ಡ್ ಕಚೇರಿಗಳಲ್ಲಿ ನೊಂದಣಿಯಾಗಿರುವ ಖಾಸಗಿ ಟ್ರಸ್ಟ್‌ಗಳು, ದೇವಸ್ಥಾನದ ಟ್ರಸ್ಟ್‌ಗಳು, ಸಂಘಗಳು, ಸೊಸೈಟಿಗಳು, ವಕ್ಫ್ ಸಂಸ್ಥೆಗಳು ಮತ್ತು ಖಾಸಗಿ ವ್ಯಕ್ತಿಗಳು ನಡೆಸುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮದುವೆ ಆದ ಜೋಡಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಈ ಸುದ್ದಿ ಓದಿದ್ದೀರಾ? ಶಿರಸಿ | ಮಳೆ ಬಂದರೆ ಹೊಂಡ, ಬಿಸಿಲಾದ್ರೆ ಧೂಳು: ಭೀಮಘರ್ಜನೆಯ ವಿಡಿಯೋ ವೈರಲ್
ಸದರಿ ಸಾಮೂಹಿಕ ವಿವಾಹವನ್ನು ಆಯೋಜಿಸುವ ಆಯೋಜಕರ ಖರ್ಚು-ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ.5000 ಗಳನ್ನು ನೀಡಲಾಗುವುದು ಎಂದು ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: 8277799990 ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಉತ್ತರ ಕನ್ನಡ, ಕಾರವಾರ ದೂರವಾಣಿ ಸಂಖ್ಯೆ: 08382-220336 ಅಥವಾ ನಿಮ್ಮ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಕಚೇರಿ ಸಮಯದಲ್ಲಿ ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





