ಉತ್ತರ ಕನ್ನಡ | ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಅಣಕು ಕಾರ್ಯಾಚರಣೆ ಯಶಸ್ವಿ: ಜಿಲ್ಲಾಡಳಿತದಿಂದ ತುರ್ತು ಕ್ರಮಗಳ ಪ್ರದರ್ಶನ

Date:

ಉತ್ತರ ಕನ್ನಡ: ದೇಶದ ಭದ್ರತೆ ಮತ್ತು ವಿದ್ಯುತ್ ಉತ್ಪಾದನೆಯ ದೃಷ್ಟಿಯಿಂದ ಅತ್ಯಂತ ಮಹತ್ವದ ಕೇಂದ್ರವಾದ ಕೈಗಾ ಅಣು ವಿದ್ಯುತ್ ಸ್ಥಾವರ (KAPS) ದಲ್ಲಿ ಅಕಸ್ಮಿಕವಾಗಿ ಅಣು ವಿಕಿರಣ ಸೋರಿಕೆಯಾದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ತುರ್ತು ಕ್ರಮಗಳು, ಸಾರ್ವಜನಿಕರ ಸುರಕ್ಷತೆ ಮತ್ತು ಇಲಾಖಾ ಸಮನ್ವಯದ ಕುರಿತು ಪೂರ್ಣ ಪ್ರಮಾಣದ ಅಣಕು ಕಾರ್ಯಾಚರಣೆಯನ್ನು (Mock Drill) ಯಶಸ್ವಿಯಾಗಿ ನಡೆಸಲಾಯಿತು.

ಈ ಕಾರ್ಯಾಚರಣೆಯು ಜಿಲ್ಲಾಡಳಿತದ ಸರ್ವಸನ್ನದ್ಧತೆ ಮತ್ತು ಪರಿಣಾಮಕಾರಿ ಪ್ರತಿಕ್ರಿಯೆ ಸಾಮರ್ಥ್ಯವನ್ನು ದೃಢಪಡಿಸಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ತಿಳಿಸಿದ್ದಾರೆ. ಅಣಕು ಕಾರ್ಯಾಚರಣೆಯು ಡಿಸೆಂಬರ್ 11, ಗುರುವಾರ ಬೆಳಗ್ಗೆ 6.30ಕ್ಕೆ, ‘ಸೈಟ್ ಎಮರ್ಜನ್ಸಿ ಡೈರೆಕ್ಟರ್’ ಅವರಿಂದ ಫ್ಯಾಕ್ಸ್ ಮತ್ತು ಇ-ಮೇಲ್ ಮೂಲಕ ವಿಕಿರಣ ಸೋರಿಕೆಯ ಅಧಿಸೂಚನೆ ಬಂದ ಕೂಡಲೇ ತುರ್ತು ಪರಿಸ್ಥಿತಿಯನ್ನು ಸೃಷ್ಟಿಸಲಾಯಿತು.

ವಲಯ ‘L’ (ಸೋರಿಕೆ ವಲಯ): ಹರ್ಟುಗಾ, ಗೂಳೆ, ನಗೆಕೋವೆ. ವಲಯ ‘M’: ಕುಚೆಗಾರ, ಶಿರ್ವೆ, ಕೆರವಡಿ, ದೇವಳಮಕ್ಕಿ ಬೆಳಗ್ಗೆ 6.45 ಕ್ಕೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆಸಿ, ಜಿಲ್ಲಾಧಿಕಾರಿ ಕಚೇರಿಯಲ್ಲಿನ ಜಿಲ್ಲಾ ತುರ್ತು ಕಾರ್ಯಾಚರಣಾ ಕೇಂದ್ರವನ್ನು (DEOC) ತಕ್ಷಣದಿಂದಲೇ ಸಕ್ರಿಯಗೊಳಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000366133

ಬೆಳಗ್ಗೆ 7 ಗಂಟೆಗೆ ವಿಕಿರಣ ಸೋರಿಕೆ ಮಟ್ಟದ ಮೊದಲ ವರದಿ (PAR-1) ಸ್ವೀಕೃತವಾಗುತ್ತಿದ್ದಂತೆ, ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸೂಚನೆ ಮೇರೆಗೆ ಪೊಲೀಸ್ ಇಲಾಖೆ ಕಾರ್ಯಪ್ರವೃತ್ತವಾಯಿತು. ವಲಯ ‘L’ ಮತ್ತು ‘M’ ಸಂಪರ್ಕಿಸುವ ರಸ್ತೆಗಳಲ್ಲಿ ತಕ್ಷಣವೇ ಬ್ಯಾರಿಕೇಡ್‌ಗಳನ್ನು ಅಳವಡಿಸಿ ವಾಹನ ಸಂಚಾರವನ್ನು ನಿರ್ಬಂಧಿಸಲಾಯಿತು. ಆರೋಗ್ಯ ಇಲಾಖೆ ವತಿಯಿಂದ ವಿಕಿರಣದ ಅಪಾಯವಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ವಿಕಿರಣ ತಡೆ ನಿಯಂತ್ರಣ ಮಾತ್ರೆಗಳನ್ನು (ITB – Iodine Tablets) ತಕ್ಷಣವೇ ವಿತರಿಸಲಾಯಿತು.

ಅಣು ವಿಕಿರಣ ಹರಡುತ್ತಿದ್ದ ಪ್ರದೇಶಗಳಲ್ಲಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ಮುಂದಿನ ಆದೇಶದವರೆಗೆ ರಜೆಯನ್ನು ಘೋಷಿಸಲಾಯಿತು. ಸ್ಥಳೀಯವಾಗಿ ಸಿದ್ಧಪಡಿಸಿದ ಆಹಾರ ಮತ್ತು ನೀರನ್ನು ಸೇವಿಸದಂತೆ ಸೂಚನೆ ನೀಡಿ, ಜಿಲ್ಲಾಡಳಿತದಿಂದ ಸುರಕ್ಷಿತ ಸ್ಥಳಗಳಿಂದ ಆಹಾರ ಪ್ಯಾಕೆಟ್‌ಗಳು ಮತ್ತು ಕುಡಿಯುವ ನೀರಿನ ಬಾಟಲ್‌ಗಳನ್ನು ಸರಬರಾಜು ಮಾಡಲಾಯಿತು.

ಸ್ಥಳಾಂತರ ಮತ್ತು ಡಿ-ಕಂಟಾಮಿನೇಷನ್ (ಶುದ್ಧೀಕರಣ): ಅತ್ಯಂತ ಪ್ರಭಾವಿತ ಹರ್ಟುಗಾ ಗ್ರಾಮದ ನಿವಾಸಿಗಳನ್ನು ಪ್ರಾದೇಶಿಕ ಸಾರಿಗೆ ಮತ್ತು ಕ.ರಾ.ರ.ಸಾ.ಸಂಸ್ಥೆಯ ಸಹಯೋಗದೊಂದಿಗೆ ಜೋಯಿಡಾ ತಾಲ್ಲೂಕಿನ ಕುಂಬಾರವಾಡದ ಸಮುದಾಯ ಭವನದಂತಹ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು. ಜಾನುವಾರುಗಳನ್ನು ಸಹ ಸುರಕ್ಷಿತ ಸ್ಥಳಗಳಿಗೆ ಸಾಗಿಸಲಾಯಿತು.

ವಿಕಿರಣ ಸೋರಿಕೆ ಪ್ರದೇಶದಿಂದ ಹೊರಬಂದ ನಾಗರಿಕರು, ಜಾನುವಾರುಗಳು ಮತ್ತು ವಾಹನಗಳನ್ನು ನಿಯಮಾನುಸಾರ ಸೂಕ್ತ ರೀತಿಯಲ್ಲಿ ಡಿ ಕಂಟಾಮೀನೇಶನ್ (ಶುದ್ಧೀಕರಣ) ನಡೆಸಲಾಯಿತು. ಈ ಪ್ರಕ್ರಿಯೆಗೆ ಬಳಸಿದ ನೀರು ಮತ್ತು ಉಪಕರಣಗಳನ್ನು ಸಹ ಸುರಕ್ಷಿತ ವಿಲೇವಾರಿ ನಿಯಮಗಳಂತೆ ನಿರ್ವಹಿಸಲಾಯಿತು.

1000366134

ಮಧ್ಯಾಹ್ನ 2.10 ಗಂಟೆಯ ವೇಳೆಗೆ, ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಸೋರಿಕೆಯಾಗಿದ್ದ ಅಣು ವಿಕಿರಣದ ಹರಡುವಿಕೆಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲಾಗಿದೆ ಎಂದು ಕೈಗಾ ಸೈಟ್ ನಿರ್ದೇಶಕರು ದೃಢಪಡಿಸಿದರು. “ಅಣು ವಿಕಿರಣದ ಪ್ರಮಾಣವು ಅತ್ಯಂತ ಕಡಿಮೆ ಇದ್ದು, ಸಾರ್ವಜನಿಕರಿಗೆ ಹೆಚ್ಚಿನ ಅಪಾಯ ಒಡ್ಡುವುದಿಲ್ಲ. ಸೋರಿಕೆಯನ್ನು ನಿಯಂತ್ರಿಸಲಾಗಿದೆ. ಸಾರ್ವಜನಿಕರು ಯಾವುದೇ ಆತಂಕ ಭೀತಿಗೆ ಒಳಗಾಗದೇ ಎಂದಿನಂತೆ ತಮ್ಮ ದೈನಂದಿನ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳಬಹುದಾಗಿದೆ,” ಎಂದು ಜಿಲ್ಲಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದರು.

ಊಹಾಪೋಹಗಳಿಗೆ ತೆರೆ: ಮಾಧ್ಯಮಗಳ ಪಾತ್ರದ ಪ್ರದರ್ಶನ ಸಾರ್ವಜನಿಕರು ಸಾಮಾಜಿಕ ಮಾಧ್ಯಮಗಳಲ್ಲಿ ಬರುವ ಯಾವುದೇ ಊಹಾಪೋಹಗಳಿಗೆ ಕಿವಿಗೊಡದೇ, ಜಿಲ್ಲಾಡಳಿತ ಮತ್ತು ಎನ್.ಪಿ.ಸಿ.ಎಲ್ ಕೈಗಾದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನೀಡುವ ಅಧಿಕೃತ ಮಾಹಿತಿಗಳನ್ನಷ್ಟೇ ಪಾಲಿಸಬೇಕು ಎಂದು ಸೂಚಿಸಲಾಯಿತು. ಕಾರ್ಯಾಚರಣೆಯ ಪ್ರತಿ ಹಂತದ ವಿವರಗಳನ್ನು ಸಕಾಲದಲ್ಲಿ ಮಾಧ್ಯಮಗಳಿಗೆ ಒದಗಿಸುವ ಮೂಲಕ ಸುಳ್ಳು ಸುದ್ದಿಗಳನ್ನು ನಂಬಿ ಅನಗತ್ಯ ಭಯ ಮತ್ತು ಆತಂಕಗಳಿಗೆ ಒಳಗಾಗದಂತೆ ಎಚ್ಚರ ವಹಿಸಲಾಯಿತು.

ಈ ಸುದ್ದಿ ಓದಿದ್ದೀರಾ? ನನಸಾಗದ ʼಸ್ವಂತ ಮನೆʼ ಕನಸು; ಸಂಗ್ರಹಿಸಿದ ಶುಲ್ಕಕ್ಕೆ ಲೆಕ್ಕ ಕೊಡುವುದೇ ಗೃಹ ಮಂಡಳಿ?

ಈ ಬೃಹತ್ ಅಣಕು ಕಾರ್ಯಾಚರಣೆಯಲ್ಲಿ ಜಿ. ಪಂ. ಸಿಇಓ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠ್ಟಾಧಿಕಾರಿ ದೀಪನ್ ಎಂ.ಎನ್, ಡಿ.ಎಫ್.ಓ ರವಿಶಂಕರ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ತರಬೇತಿ ನಿರತ ಐ.ಎ.ಎಸ್. ಅಧಿಕಾರಿ ಜೂಫಿಶಾನ್ ಹಕ್ ಸೇರಿದಂತೆ NDRF, ಕೋಸ್ಟ್ ಗಾರ್ಡ್, CISF, ಪೊಲೀಸ್, ಕಂದಾಯ, ಆರೋಗ್ಯ ಸೇರಿದಂತೆ ಎಲ್ಲಾ ಪ್ರಮುಖ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿ ಯಶಸ್ವಿಯಾಗಿ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿದರು.

ಇದೇ ಸಂದರ್ಭದಲ್ಲಿ, ಅರಣ್ಯ ಇಲಾಖೆ ವತಿಯಿಂದ ವಿರ್ಜೆ ಗ್ರಾಮದ ವ್ಯಾಪ್ತಿಯಲ್ಲಿ ಅರಣ್ಯದಲ್ಲಿ ಸಂಭವಿಸುವ ಆಕಸ್ಮಿಕ ಬೆಂಕಿ ನಂದಿಸುವ ಕುರಿತ ಇನ್ನೊಂದು ಅಣಕು ಕಾರ್ಯಾಚರಣೆಯನ್ನು ಸಹ ಯಶಸ್ವಿಯಾಗಿ ನಡೆಸಲಾಯಿತು. ಇದು ಕೇವಲ ಅಣು ವಿಕಿರಣಕ್ಕೆ ಮಾತ್ರವಲ್ಲದೆ, ಇತರೆ ಪ್ರಾಕೃತಿಕ ತುರ್ತು ಪರಿಸ್ಥಿತಿಗಳಿಗೂ ಜಿಲ್ಲಾಡಳಿತ ಸಿದ್ಧವಿದೆ ಎಂಬುದನ್ನು ತೋರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...