ಉತ್ತರ ಕನ್ನಡ | ಮಂಕಿ ಪಟ್ಟಣ ಪಂಚಾಯತಿ: ಶೌಚಾಲಯ ನಿರ್ಮಾಣ ಮತ್ತು ಛಾವಣಿ ದುರಸ್ತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Date:

ಉತ್ತರ ಕನ್ನಡ: ಮಂಕಿ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ವಾಸಿಸುವ ಬಡ ಕುಟುಂಬಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆಯಡಿ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಕುರಿತು ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿಗಳು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಜನವರಿ 31ರ ಒಳಗೆ ನಿಗದಿತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಸೂಚಿಸಿದ್ದಾರೆ.

ಯೋಜನೆಯ ವಿವರಗಳು: ಮುಖ್ಯಮಂತ್ರಿ ಅಮೃತ ನಗರೋತ್ಥಾನ (ಮುನಿಸಿಪಾಲಟಿ) ಯೋಜನೆ ಹಂತ-4ರ ಅಡಿಯಲ್ಲಿ ಎರಡು ಪ್ರಮುಖ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಮೊದಲನೆಯದಾಗಿ, 2023-24ನೇ ಸಾಲಿನ ಯೋಜನೆಯಡಿ ಬಡ ಕುಟುಂಬದವರಿಗೆ ಸೆಫ್ಟಿಕ್ ಟ್ಯಾಂಕ್ ಶೌಚಾಲಯ ನಿರ್ಮಾಣಕ್ಕಾಗಿ ಧನಸಹಾಯ ನೀಡಲಾಗುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡನೆಯದಾಗಿ, 2022-23ನೇ ಸಾಲಿನ ಯೋಜನೆಯಡಿ ಮನೆಯ ಛಾವಣಿ ದುರಸ್ತಿ ಸಾಮಗ್ರಿಗಳನ್ನು ಖರೀದಿಸಲು ಆರ್ಥಿಕ ನೆರವು ಒದಗಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಸಲ್ಲಿಸಬೇಕಾದ ದಾಖಲೆಗಳು: ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿ, 2025-26ನೇ ಸಾಲಿನ ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಇತ್ತೀಚಿನ 2 ಪಾಸ್‌ಪೋರ್ಟ್ ಸೈಜ್ ಫೋಟೋಗಳು, ಪಡಿತರ ಚೀಟಿ (Ration Card) ಮತ್ತು ಆಧಾರ್ ಕಾರ್ಡ್ ಪ್ರತಿ, ಮತದಾರರ ಗುರುತಿನ ಚೀಟಿ ಪ್ರತಿ, 2025-26ನೇ ಸಾಲಿನ ಮನೆ ತೆರಿಗೆ ರಶೀದಿ ಮತ್ತು ನೀರಿನ ಕರ ಪಾವತಿಸಿದ ರಶೀದಿ ಪ್ರತಿ, 2025-26ನೇ ಸಾಲಿನ ಪಹಣಿ ಪತ್ರಿಕೆ ಹಾಗೂ ಮನೆಯ ಫೋಟೋ,

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಕಸ ವಿಲೇವಾರಿ ಘಟಕದಲ್ಲಿ ಅಗ್ನಿ ಅವಘಡ; ಪಟ್ಟಣ ಪಂಚಾಯತ ವಿರುದ್ಧ ಜಾತಿ ತಾರತಮ್ಯದ ಗಂಭೀರ ಆರೋಪ

ಆಸಕ್ತ ಮತ್ತು ಅರ್ಹ ಫಲಾನುಭವಿಗಳು ಜನವರಿ 31ರ ಒಳಗಾಗಿ ತಮ್ಮ ಅರ್ಜಿಯನ್ನು ಮಂಕಿ ಪಟ್ಟಣ ಪಂಚಾಯತ ಕಚೇರಿಯಲ್ಲಿ ಸಲ್ಲಿಸಬೇಕು. ನಿಗದಿಪಡಿಸಿದ ಅವಧಿಯ ನಂತರ ಬಂದ ಅರ್ಜಿಗಳನ್ನು ಹಾಗೂ ಅಪೂರ್ಣ ದಾಖಲೆಗಳನ್ನು ಹೊಂದಿರುವ ಅರ್ಜಿಗಳನ್ನು ಯಾವುದೇ ಮುನ್ಸೂಚನೆಯಿಲ್ಲದೆ ತಿರಸ್ಕರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕರು ಕಚೇರಿಯ ಕೆಲಸದ ಅವಧಿಯಲ್ಲಿ ಸಂಪರ್ಕಿಸಬಹುದು ಅಥವಾ ಪಟ್ಟಣ ಪಂಚಾಯತಿಯ ಅಧಿಕೃತ ವೆಬ್‌ಸೈಟ್ https://www.mankitown.mrc.gov.in ಗೆ ಭೇಟಿ ನೀಡಬಹುದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...