ಉತ್ತರ ಕನ್ನಡ: ಮಂಕಿ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ವಾಸಿಸುವ ಬಡ ಕುಟುಂಬಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆಯಡಿ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಕುರಿತು ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿಗಳು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಜನವರಿ 31ರ ಒಳಗೆ ನಿಗದಿತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಸೂಚಿಸಿದ್ದಾರೆ.
ಯೋಜನೆಯ ವಿವರಗಳು: ಮುಖ್ಯಮಂತ್ರಿ ಅಮೃತ ನಗರೋತ್ಥಾನ (ಮುನಿಸಿಪಾಲಟಿ) ಯೋಜನೆ ಹಂತ-4ರ ಅಡಿಯಲ್ಲಿ ಎರಡು ಪ್ರಮುಖ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಮೊದಲನೆಯದಾಗಿ, 2023-24ನೇ ಸಾಲಿನ ಯೋಜನೆಯಡಿ ಬಡ ಕುಟುಂಬದವರಿಗೆ ಸೆಫ್ಟಿಕ್ ಟ್ಯಾಂಕ್ ಶೌಚಾಲಯ ನಿರ್ಮಾಣಕ್ಕಾಗಿ ಧನಸಹಾಯ ನೀಡಲಾಗುವುದು.
ಎರಡನೆಯದಾಗಿ, 2022-23ನೇ ಸಾಲಿನ ಯೋಜನೆಯಡಿ ಮನೆಯ ಛಾವಣಿ ದುರಸ್ತಿ ಸಾಮಗ್ರಿಗಳನ್ನು ಖರೀದಿಸಲು ಆರ್ಥಿಕ ನೆರವು ಒದಗಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಸಲ್ಲಿಸಬೇಕಾದ ದಾಖಲೆಗಳು: ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿ, 2025-26ನೇ ಸಾಲಿನ ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಇತ್ತೀಚಿನ 2 ಪಾಸ್ಪೋರ್ಟ್ ಸೈಜ್ ಫೋಟೋಗಳು, ಪಡಿತರ ಚೀಟಿ (Ration Card) ಮತ್ತು ಆಧಾರ್ ಕಾರ್ಡ್ ಪ್ರತಿ, ಮತದಾರರ ಗುರುತಿನ ಚೀಟಿ ಪ್ರತಿ, 2025-26ನೇ ಸಾಲಿನ ಮನೆ ತೆರಿಗೆ ರಶೀದಿ ಮತ್ತು ನೀರಿನ ಕರ ಪಾವತಿಸಿದ ರಶೀದಿ ಪ್ರತಿ, 2025-26ನೇ ಸಾಲಿನ ಪಹಣಿ ಪತ್ರಿಕೆ ಹಾಗೂ ಮನೆಯ ಫೋಟೋ,
ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಕಸ ವಿಲೇವಾರಿ ಘಟಕದಲ್ಲಿ ಅಗ್ನಿ ಅವಘಡ; ಪಟ್ಟಣ ಪಂಚಾಯತ ವಿರುದ್ಧ ಜಾತಿ ತಾರತಮ್ಯದ ಗಂಭೀರ ಆರೋಪ
ಆಸಕ್ತ ಮತ್ತು ಅರ್ಹ ಫಲಾನುಭವಿಗಳು ಜನವರಿ 31ರ ಒಳಗಾಗಿ ತಮ್ಮ ಅರ್ಜಿಯನ್ನು ಮಂಕಿ ಪಟ್ಟಣ ಪಂಚಾಯತ ಕಚೇರಿಯಲ್ಲಿ ಸಲ್ಲಿಸಬೇಕು. ನಿಗದಿಪಡಿಸಿದ ಅವಧಿಯ ನಂತರ ಬಂದ ಅರ್ಜಿಗಳನ್ನು ಹಾಗೂ ಅಪೂರ್ಣ ದಾಖಲೆಗಳನ್ನು ಹೊಂದಿರುವ ಅರ್ಜಿಗಳನ್ನು ಯಾವುದೇ ಮುನ್ಸೂಚನೆಯಿಲ್ಲದೆ ತಿರಸ್ಕರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕರು ಕಚೇರಿಯ ಕೆಲಸದ ಅವಧಿಯಲ್ಲಿ ಸಂಪರ್ಕಿಸಬಹುದು ಅಥವಾ ಪಟ್ಟಣ ಪಂಚಾಯತಿಯ ಅಧಿಕೃತ ವೆಬ್ಸೈಟ್ https://www.mankitown.mrc.gov.in ಗೆ ಭೇಟಿ ನೀಡಬಹುದಾಗಿದೆ.





