ಉತ್ತರ ಕನ್ನಡ | ಜಿಲ್ಲೆಯಾದ್ಯಂತ ನಾಳೆ ಎಲ್ಲಾ ಸರ್ಕಾರಿ ಶಾಲೆ-ಕಾಲೇಜುಗಳಲ್ಲಿ ಪೋಷಕರ-ಶಿಕ್ಷಕರ ಮಹಾಸಭೆ

Date:

ಉತ್ತರ ಕನ್ನಡ: ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ವಿವಿಧ ಉಪಕ್ರಮಗಳಿಗೆ ಪೋಷಕರು, ಶಿಕ್ಷಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಿಸುವ ಉದ್ದೇಶದಿಂದ, ನವೆಂಬರ್ 14ರಂದು ಮಕ್ಕಳ ದಿನಾಚರಣೆಯ ಪ್ರಯುಕ್ತ ಜಿಲ್ಲೆಯ ಎಲ್ಲಾ ಸರ್ಕಾರಿ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ “ಪೋಷಕರ-ಶಿಕ್ಷಕರ ಮಹಾಸಭೆ” ಏಕಕಾಲಕ್ಕೆ ಜಿಲ್ಲೆಯಾದ್ಯಂತ ನಡೆಯಲಿದೆ.

ಈ ಕುರಿತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ಅವರು ಪ್ರಕಟಣೆ ನೀಡಿದ್ದು, ಸಭೆಗೆ ಎಲ್ಲಾ ಸರ್ಕಾರಿ ಶಾಲಾ ಮತ್ತು ಕಾಲೇಜುಗಳ ಪಾಲಕರು-ಪೋಷಕರು ಕಡ್ಡಾಯವಾಗಿ ಹಾಜರಾಗುವಂತೆ ಕೋರಿದ್ದಾರೆ. ಸಭೆಯ ಕಾರ್ಯಕ್ರಮದ ಅಂಗವಾಗಿ ಸಂವಿಧಾನ ಪೀಠಿಕೆಯ ಓದು, ಸಭೆಯ ಉದ್ದೇಶಗಳ ಮಂಡನೆ, ಮಕ್ಕಳ ಕಲಿಕಾ ಪ್ರಗತಿ ಮತ್ತು ಹಾಜರಾತಿ ವರದಿ ಹಂಚಿಕೆ, ಪೋಷಕರೊಂದಿಗೆ ಪ್ರಗತಿ ಪತ್ರ ವಿತರಣೆ ಮತ್ತು ಚರ್ಚೆ, ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಹಾಗೂ ಶಾಲಾ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರದ ಅರಿವು ಮೂಡಿಸುವಿಕೆ ನಡೆಯಲಿದೆ.

ಇದೇ ರೀತಿ, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಮಟ್ಟದಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಅಭಿನಂದನೆಗೊಳಿಸುವ ಕಾರ್ಯಕ್ರಮ, ಬಾಲ್ಯ ವಿವಾಹ ನಿಷೇಧ ಮತ್ತು ಬಾಲ ಕಾರ್ಮಿಕ ನಿಷೇಧ ನೀತಿಗಳ ಬಗ್ಗೆ ಜಾಗೃತಿ ಮೂಡಿಸುವಿಕೆ, ಹಾಗೂ ವಿಶೇಷ ಚೇತನ ಮಕ್ಕಳಿಗೆ ನೀಡಲಾಗುವ ಸೌಲಭ್ಯಗಳ ಕುರಿತು ಪೋಷಕರಿಗೆ ಅರಿವು ನೀಡುವುದು ಸೇರಿದಂತೆ ಹಲವಾರು ಚಟುವಟಿಕೆಗಳು ನಡೆಯಲಿವೆ. ಸಭೆಯಲ್ಲಿ ಶಾಲೆಯ ಅಭಿವೃದ್ಧಿಯಲ್ಲಿ ಭಾಗೀದಾರರ ಪಾತ್ರ, ಪೋಷಕರ ಸಹಕಾರದ ಅಗತ್ಯತೆ, ಮತ್ತು ಪೋಷಕರ ಪ್ರತಿಭೆ ಗುರುತಿಸುವಿಕೆ ಕುರಿತ ಚರ್ಚೆಗೂ ಅವಕಾಶ ಕಲ್ಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಜಿಲ್ಲೆಯಲ್ಲಿ ಆರು ಸಂಚಾರಿ ಆರೋಗ್ಯ ಘಟಕಗಳ ಸೇವೆ ಶೀಘ್ರದಲ್ಲೇ ಪ್ರಾರಂಭ

ಜಿಲ್ಲೆಯ ಪೋಷಕರ-ಶಿಕ್ಷಕರ ಮಹಾಸಭೆಯಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯ 1089 ಪ್ರಾಥಮಿಕ ಶಾಲೆಗಳ 41,224 ವಿದ್ಯಾರ್ಥಿಗಳು ಮತ್ತು 76 ಪ್ರೌಢಶಾಲೆಗಳ 7,259 ವಿದ್ಯಾರ್ಥಿಗಳು, ಕಾರವಾರ ಶೈಕ್ಷಣಿಕ ಜಿಲ್ಲೆಯ 913 ಪ್ರಾಥಮಿಕ ಶಾಲೆಗಳ 36,689 ವಿದ್ಯಾರ್ಥಿಗಳು ಮತ್ತು 49 ಪ್ರೌಢಶಾಲೆಗಳ 6,562 ವಿದ್ಯಾರ್ಥಿಗಳು, ಜೊತೆಗೆ ಪದವಿ ಪೂರ್ವ ವಿಭಾಗದ 37 ಕಾಲೇಜುಗಳ 12,488 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಒಟ್ಟಾರೆ ಜಿಲ್ಲೆಯ 2,164 ಸರ್ಕಾರಿ ಶಾಲೆ-ಕಾಲೇಜುಗಳ 1,04,222 ವಿದ್ಯಾರ್ಥಿಗಳು ಈ ಮಹಾಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...