ಉತ್ತರ ಕನ್ನಡ | ಜಿಲ್ಲೆಯಲ್ಲಿ ₹21,000 ಕೋಟಿಗೂ ಅಧಿಕ ಮೊತ್ತದ ರೈಲ್ವೆ ಕಾಮಗಾರಿ: ಸಚಿವ ವಿ. ಸೋಮಣ್ಣ ಹೇಳಿಕೆ

Date:

ಉತ್ತರ ಕನ್ನಡ ಜಿಲ್ಲೆಯಲ್ಲಿ ರೈಲ್ವೆ ಇಲಾಖೆ ವತಿಯಿಂದ ಸುಮಾರು ರೂ. 21 ಸಾವಿರಕ್ಕೂ ಕೋಟಿ ಗೂ ಅಧಿಕ ಮೊತ್ತದ ಕಾಮಗಾರಿಗಳು ವಿವಿಧ ಹಂತದಲ್ಲಿ ನಡೆಯುತ್ತಿವೆ ಎಂದು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.

ಅವರು ಶನಿವಾರ ಕಾರವಾರ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಮಾತನಾಡಿ. ಮಲೆನಾಡು ಮತ್ತು ಬಯಲುಸೀಮೆಯನ್ನು ಜೋಡಿಸುವ ಉದ್ದೇಶದಿಂದ ತಾಳಗುಪ್ಪ-ಶಿರಸಿ-ಹುಬ್ಬಳಿ 158 ಕಿ.ಮೀ ಉದ್ದದ ಹೊಸ ಮಾರ್ಗವು ರೈಲ್ವೆ ಮಂಡಳಿಯಲ್ಲಿ ಅನುಮೋದನೆಯಾಗಿದ್ದು, ಸಚಿವ ಸಂಪುಟದಲ್ಲಿ ಅನುಮೋದನೆಯಾಗಬೇಕಿದೆ.

ಈ ಯೋಜನೆ ಮತ್ತು ತಾಳಗುಪ್ಪ ಹೊನ್ನಾವರ ಹೊಸ ಮಾರ್ಗಕ್ಕೆ ಒಟ್ಟು ಸುಮಾರು 21 ಸಾವಿರ ಕೋಟಿ ಖರ್ಚು ಮಾಡಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ಮುರ್ಡೇಶ್ವರ, ಗೋಕರ್ಣ ಮತ್ತು ಹೊನ್ನಾವರ ರೈಲ್ವೆ ನಿಲ್ದಾಣಗಳ ಆಧುನೀಕರಣ ಕಾಮಗಾರಿ ಪ್ರಾರಂಭವಾಗಿದೆ ಎಂದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಹುಬ್ಬಳ್ಳಿ- ಅಂಕೋಲಾ ನಡುವಿನ 164 ಕಿ.ಮೀ ಉದ್ದದ ನೂತನ ಯೋಜನೆಯನ್ನು 16,500 ಕೋಟಿ ವೆಚ್ಚದಲ್ಲಿ ರೈಲ್ವೆ ಇಲಾಖೆ ವತಿಯಿಂದ ಮಾಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗಾಗಲೇ ಸರ್ವೇ, ಡಿಪಿಆರ್, ಫಾರೆಸ್ಟ್ ಕ್ಲಿಯರೆನ್ಸ್ ಕೂಡ ಮುಕ್ತಾಯಗೊಂಡಿದ್ದು, ವನ್ಯಜೀವಿ ಕ್ಲಿಯರೆನ್ಸ್ ಬಾಕಿ ಇದೆ. ಇನ್ನು 5-6 ತಿಂಗಳಿನೊಳಗೆ ಇದಕ್ಕೆ ಪರಿಹಾರ ಸಿಗುವ ನಿರೀಕ್ಷೆ ಇದೆ. ಈ ಯೋಜನೆಯಿಂದ ಪಶ್ಚಿಮ ಘಟ್ಟಗಳಿಗೆ ಯಾವುದೇ ರೀತಿಯಲ್ಲಿ ಅನಾನುಕುಲವಾಗುವುದಿಲ್ಲ ಎಂದ ಅವರು, ಸುಮಾರು 1997-98 ರಲ್ಲಿ ಆರಂಭಿಸಿದ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ ಕಲಘಟಗಿ ವರೆಗೆ ಮಾಡಲಾಗಿದ್ದು, ಕೆಲವು ಕಾರಣಗಳಿಂದ ನಿಂತುಹೊಗಿದ್ದು, ಈ ಯೋಜನೆಗೆ 2530 ಎಕರೆ ಜಾಗ ಬೇಕಿದೆ ಎಂದರು.

ಈ ಸುದ್ದಿ ಓದಿದ್ದೀರಾ? ಕಾರವಾರ | ಮಾದಕ ವಸ್ತು ನಿಷೇಧಿಸಿದ್ದಕ್ಕೆ ಪ್ರತೀಕಾರ: ಜೈಲರ್ ಸೇರಿ 3 ಸಿಬ್ಬಂದಿ ಮೇಲೆ ರೌಡಿಗಳ ಮಾರಣಾಂತಿಕ ಹಲ್ಲೆ!

ಕೊಂಕಣ ರೈಲ್ವೆಯ ವಿಲೀನ ಪ್ರಕ್ರಿಯೆ ಚರ್ಚೆಯ ಹಂತದಲ್ಲಿದ್ದು, ಅವುಗಳ ಆಗುಹೋಗಗಳ ಬಗ್ಗೆ ಚರ್ಚಿಸಲಾಗುತ್ತಿದೆ. ರೈಲ್ವೆಯ ಬಹುತೇಕ ರೈಲು ನಿಲ್ದಾಣಗಳು ಆಧುನೀಕರಣಗೊಳ್ಳುತ್ತಿದ್ದು, ಕೊಂಕಣ ರೈಲ್ವೆ ನಿಲ್ದಾಣಗಳನ್ನು ಆಧುನೀಕರಣ ಮಾಡಲು ಕ್ರಮಕೈಗೊಳ್ಳಲಾಗಿದೆ. ದಾಂಡೇಲಿಯ ಅಂಬೇವಾಡಿಗೆ ಮುಂದಿನ ತಿಂಗಳನಿಂದ ರೈಲ್ವೆ ಸಂಚಾರ ಪ್ರಾರಂಭಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಪ್ರಾದೇಶಿಕ ರೈಲ್ವೆ ಮೆನೇಜರ್ ಆಶಾ ಶೆಟ್ಟಿ, ಮುಖ್ಯ ಇಂಜಿನಿಯರ್ ಪ್ರಕಾಶ್, ಹಿರಿಯ ಪ್ರಾದೇಶಿಕ ಸಂಚಾರ ವ್ಯವಸ್ಥಾಪಕ ದಿಲೀಪ್ ಡಿ ಭಟ್, ಹಿರಿಯ ಇಂಜಿನಿಯರ್ ಉದಯ ಭಾಸ್ಕರ್, ಮುಖ್ಯ ಇಂಜಿನಿಯರ್ ವಿಜಯ್ ಕುಮಾರ್, ಸಾರ್ವಜನಿಕ ಸಂಪರ್ಕಾಧಿಕಾರಿ ಸುಧಾ ಕೃಷ್ಣಮೂರ್ತಿ, ಹಿರಿಯ ಪ್ರಾದೇಶಿಕ ಆರ್ಥಿಕ ಸಲಹೆಗಾರ ಪ್ರದೀಪ್ ಬಾಳಿಗ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...