ಉತ್ತರ ಕನ್ನಡ | ಡಿಆರ್‌ಎಫ್‌ಒ ಹುದ್ದೆಗಳನ್ನು ಮುಂಬಡ್ತಿ ಹುದ್ದೆಯಾಗಿಸಲು ಶಿಫಾರಸು; ಅರಣ್ಯ ಪದವಿಧರರ ವಿರೋಧ

Date:

ಡಿಆರ್‌ಎಫ್‌ಒ ಹುದ್ದೆಗೆ ಸದ್ಯ ಇರುವ ಶೇ.50ರಷ್ಟು ಮುಂಬಡ್ತಿ ಮತ್ತು ಶೇ.50ರಷ್ಟು ನೇರ ನೇಮಕಾತಿ ರದ್ದುಪಡಿಸಿ ಶೇ.100ರಷ್ಟು ಹುದ್ದೆಗಳನ್ನು ಮುಂಬಡ್ತಿ ಹುದ್ದೆಯನ್ನಾಗಿ ಪರಿವರ್ತಿಸಲು ಸಲ್ಲಿಸಿದ್ದ ಶಿಫಾರಸು ಅನುಮೋದನೆ ಹಂತದಲ್ಲಿದ್ದು ಇದಕ್ಕೆ ಅರಣ್ಯ ಪದವೀಧರರು ಮತ್ತು ಪದವಿ ವಿದ್ಯಾರ್ಥಿಗಳ ತೀವ್ರ ವಿರೋಧ ವ್ಯಕ್ತವಾಗಿದೆ.

ಉಪ ವಲಯ ಅರಣ್ಯಾಧಿಕಾರಿ (ಡಿಆರ್‌ಎಫ್ಒ) ಹುದ್ದೆಗಳನ್ನು ಮುಂಬಡ್ತಿ ಹುದ್ದೆಯನ್ನಾಗಿ ಪರಿವರ್ತಿಸಲು, ಸರ್ಕಾರದ ನಿಕಟಪೂರ್ವ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಸರ್ಕಾರಕ್ಕೆ ಶಿಫಾರಸು ವರದಿ ನೀಡಿದ್ದರು. ವರದಿ ಅರಣ್ಯ ಇಲಾಖೆಯ ಅನುಮೋದನೆ ಹಂತದಲ್ಲಿದ್ದು, ಅರಣ್ಯ ಪದವೀಧರರನ್ನು ಕಂಗೆಡಿಸಿದೆ.

ಒಬ್ಬ ಅರಣ್ಯ ಪದವೀಧರನನ್ನು ರೂಪಿಸಲು 6 ಲಕ್ಷ ರೂ. ವ್ಯಯವಾಗುತ್ತದೆ. ತಜ್ಞ ಅರಣ್ಯಾಧಿಕಾರಿ ಆಗಲು ಅರ್ಹರಿರುವಂತೆ ರೂಪಿಸಲಾಗುತ್ತದೆ. ಈಗಾಗಲೇ 1,500 ಅರಣ್ಯ ಪದವೀಧರರು ಡಿಆರ್‌ಎಫ್‌ಒ ಹುದ್ದೆ ಪಡೆಯಲು ಅರ್ಹರಿದ್ದರೂ ಅವಕಾಶಗಳಿಂದ ವಂಚಿತರಾಗಿದ್ದಾರೆ. ಆದರೆ, ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ ಇಲಾಖೆಗಳಲ್ಲಿ ಆಯಾ ವಿಷಯದ ಪದವೀಧರರನ್ನೆ ತಮ್ಮ ಇಲಾಖೆ ಹುದ್ದೆಗಳಿಗೆ ನೇಮಿಸಲಾಗುತ್ತದೆ ಎಂದು ಕರ್ನಾಟಕ ಅರಣ್ಯ ಪದವೀಧರರ ಮತ್ತು ವಿದ್ಯಾರ್ಥಿಗಳ ಸಂಘಟನೆಯ ಅಧ್ಯಕ್ಷ ಯಶಸ್ ಟಿ.ಎನ್ ಮಾದ್ಯಮಗಳಿಗೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೇಮಕಾತಿ ಮೀಸಲಾತಿಯಲ್ಲಿ ಕಡಿತಮಾಡುವುದರಿಂದ ಅರಣ್ಯ ಪದವೀಧರರು ಈಗಾಗಲೇ ಬೇಸರದಲ್ಲಿದ್ದಾರೆ. ಡಿಆರ್‌ಎಫ್‌ಒ ಹುದ್ದೆಗಳಿಗೆ ಹಾಲಿ ಇರುವ ನೇರ ನೇಮಕಾತಿ ರದ್ದುಗೊಳಿಸಿದರೆ ಅನ್ಯಾಯವಾಗುತ್ತದೆ ಎಂದರು.

ರಾಜ್ಯದ ಉತ್ತರ ಕನ್ನಡದ ಶಿರಸಿ, ಕೊಡಗಿನ ಪೊನ್ನಂಪೇಟೆ ಮತ್ತು ಶಿವಮೊಗ್ಗದ ಇರುವಕ್ಕಿಯಲ್ಲಿ ಅರಣ್ಯ ಪದವಿ ಕಾಲೇಜುಗಳಿವೆ. ವರ್ಷಕ್ಕೆ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅರಣ್ಯ ಪದವಿ ಪಡೆಯುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...