ಉತ್ತರ ಕನ್ನಡ: ಜಿಲ್ಲಾ ಗೃಹರಕ್ಷಕದಳದಲ್ಲಿ ಖಾಲಿ ಇರುವ ಒಟ್ಟು 89 ಸ್ವಯಂಸೇವಕ ಗೃಹರಕ್ಷಕ ಮತ್ತು ಗೃಹರಕ್ಷಕಿಯರ ಸ್ಥಾನಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಕಾರವಾರದ ಸರ್ವೋದಯ ನಗರದ ಕೋಡಿಬಾಗ್‌ನಲ್ಲಿರುವ ಜಿಲ್ಲಾ ಗೃಹರಕ್ಷಕದಳದ ಕಚೇರಿಯಲ್ಲಿ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಮಾರ್ಚ್ 10 ಕೊನೆಯ ದಿನಾಂಕವಾಗಿದೆ.
ಅಭ್ಯರ್ಥಿಗಳು ತಮ್ಮ 10ನೇ ತರಗತಿಯ ದೃಢೀಕೃತ ಅಂಕಪಟ್ಟಿ ಮತ್ತು ಆಧಾರ್ ಕಾರ್ಡ್ ಪ್ರತಿಯನ್ನು ಕಚೇರಿಯಲ್ಲಿ ತೋರಿಸಿ ಅರ್ಜಿಗಳನ್ನು ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಅವುಗಳಿಗೆ ಪತ್ರಾಂಕಿತ ಅಧಿಕಾರಿಯಿಂದ (Gazetted Officer) ದೃಢೀಕೃತ ಸಹಿ ಮಾಡಿಸಿ ಮಾರ್ಚ್ 10ರ ಒಳಗಾಗಿ ಕಚೇರಿಗೆ ಸಲ್ಲಿಸಬೇಕು.
ಅರ್ಹತಾ ಮಾನದಂಡಗಳು: ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು, 19 ರಿಂದ 50 ವರ್ಷದೊಳಗಿನವರಾಗಿರಬೇಕು, ಪುರುಷರಿಗೆ ಕನಿಷ್ಠ 168 ಸೆಂ.ಮೀ ಮತ್ತು ಮಹಿಳೆಯರಿಗೆ 157 ಸೆಂ.ಮೀ ಎತ್ತರ ಇರಬೇಕು, ಎದೆಯ ಸುತ್ತಳತೆ (ಪುರುಷರಿಗೆ): ಕನಿಷ್ಠ 81 ಸೆಂ.ಮೀ ಇರಬೇಕು (ವಿಸ್ತರಿಸಿದಾಗ 86 ಸೆಂ.ಮೀ)
ತಾಲೂಕು ವೈದ್ಯಾಧಿಕಾರಿಗಳಿಂದ ಪಡೆದ ವೈದ್ಯಕೀಯ ಪ್ರಮಾಣ ಪತ್ರ ಹಾಗೂ ಯಾವುದೇ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿಲ್ಲದ ಬಗ್ಗೆ ಪೊಲೀಸ್ ವೆರಿಫಿಕೇಶನ್ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸುವುದು ಕಡ್ಡಾಯ.
ಈ ಸುದ್ದಿ ಓದಿದ್ದೀರಾ ? ಉತ್ತರ ಕನ್ನಡ | ಹಸಿರು ಜಿಲ್ಲೆಯಲ್ಲಿ ಅನ್ನದಾತನ ಅಳಲು; ರೈತರ ಸರಣಿ ಆತ್ಮಹತ್ಯೆ ಕೇಳುವುದೇನು?
ಕಂಪ್ಯೂಟರ್ ಜ್ಞಾನ ಹೊಂದಿರುವವರು, ಹೆವಿ ಡ್ರೈವಿಂಗ್ ಲೈಸೆನ್ಸ್ ಉಳ್ಳವರು, ಮೆಕಾನಿಕ್‌ಗಳು, ಎನ್.ಸಿ.ಸಿ (NCC), ಎನ್.ಎಸ್.ಎಸ್ (NSS) ಹಾಗೂ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಮೊದಲ ಆದ್ಯತೆ ನೀಡಲಾಗುವುದು.
ಗೃಹರಕ್ಷಕದಳದ ಈ ಸ್ಥಾನಗಳು ಖಾಯಂ ಹುದ್ದೆಗಳಾಗಿರುವುದಿಲ್ಲ. ಇದು ಸ್ವಯಂಸೇವಾ ವೃತ್ತಿಯಾಗಿದ್ದು, ರಾಜ್ಯ ಸರ್ಕಾರವು ಕಾಲಕಾಲಕ್ಕೆ ನಿಗದಿಪಡಿಸುವ ಗೌರವಧನವನ್ನು ಕರ್ತವ್ಯ ನಿರ್ವಹಿಸಿದ ಅವಧಿಗೆ ಮಾತ್ರ ಪಾವತಿಸಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಗೃಹರಕ್ಷಕದಳದ ಕಚೇರಿ ದೂರವಾಣಿ ಸಂಖ್ಯೆ: 08382-200137 ಅಥವಾ ಜಿಲ್ಲಾ ಬೋಧಕರಾದ ರಘು ಬಿ.ಸಿ (ಮೊಬೈಲ್: 9880573509) ಅವರನ್ನು ಸಂಪರ್ಕಿಸಬಹುದೆಂದು ಗೃಹರಕ್ಷಕ ದಳದ ಸಮಾದೇಷ್ಟರು ತಿಳಿಸಿದ್ದಾರೆ. ಹಾಗೂ ನಿಗದಿಪಡಿಸಿದ ದಿನಾಂಕದ ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಲಾಗಿದೆ.





