ಉತ್ತರ ಕನ್ನಡ | ಸಿಎಂ ವಿರುದ್ಧ ನಿಂದನೆ; ಸಂಸದ ಹೆಗಡೆ ವಿರುದ್ಧ ಸುಮೊಟೋ ಕೇಸ್‌ ದಾಖಲು

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಂದಿಸಿ, ಏಕವಚನದಲ್ಲಿ ಅಪಮಾನಕರ ಮಾತುಗಳನ್ನಾಡಿದ್ದ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಮುಂಡಗೋಡ ಪೊಲೀಸ್‌ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ (ಸುಮೊಟೋ ಕೇಸ್‌) ದೂರು ದಾಖಲಿಸಿಕೊಂಡಿದ್ದಾರೆ.

ಮುಂಡಗೋಡದ ಪಾಳಾದಲ್ಲಿ ಫೆ.23ರಂದು ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಅನಂತಕುಮಾರ ಹೆಗಡೆ, ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದಿದ್ದರು. ಅಲ್ಲದೆ, ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಖಲಿಸ್ತಾನಿಗಳೆಂದು ಹೇಳಿದ್ದರು. ಆದ್ದರಿಂದ ಮುಂಡಗೋಡ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಧಾರ್ಮಿಕ, ಸಾಮಾಜಿಕವಾಗಿ ಅಪಮಾನಕರ ಮಾತುಗಳನ್ನಾಡಿರುವ ಹಿನ್ನೆಲೆಯಲ್ಲಿ ಸಂಸದರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಮಾದ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...