ಉತ್ತರ ಕನ್ನಡ | ವಿದ್ಯಾರ್ಥಿ ವೇತನಕ್ಕೆ ತಾಂತ್ರಿಕ ಅಡಚಣೆ: ಮಾಹಿತಿ ಅಪ್‌ಡೇಟ್ ಮಾಡಲು ಜ.30 ಕೊನೆಯ ದಿನ

Date:

ಉತ್ತರ ಕನ್ನಡ: ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ 2020-21 ರಿಂದ 2025-26 ನೇ ಸಾಲಿನವರೆಗೆ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (SSP) ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ತಮ್ಮ ಮಾಹಿತಿಯನ್ನು ಸರಿಪಡಿಸಿಕೊಳ್ಳಲು ಕಡೆಯ ಅವಕಾಶ ನೀಡಲಾಗಿದೆ.

ತಾಂತ್ರಿಕ ಕಾರಣಗಳಿಂದಾಗಿ ಬಾಕಿ ಉಳಿದಿರುವ ವಿದ್ಯಾರ್ಥಿ ವೇತನವನ್ನು ವಿತರಿಸಲು ಅನುಕೂಲವಾಗುವಂತೆ ಜನವರಿ 30ರ ಒಳಗಾಗಿ ಅಗತ್ಯ ಅಪ್‌ಡೇಟ್ ಮಾಡುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಿದ ಅನೇಕ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಸೀಡ್ ಆಗದಿರುವುದು ಪ್ರಮುಖ ಅಡಚಣೆಯಾಗಿದೆ. ಇದರೊಂದಿಗೆ, ವಿದ್ಯಾರ್ಥಿಗಳ ಶೈಕ್ಷಣಿಕ ದತ್ತಾಂಶ ಹಾಗೂ ಎಸ್‌ಎಸ್‌ಪಿ ತಂತ್ರಾಂಶದಲ್ಲಿರುವ ಹೆಸರಿನಲ್ಲಿ ವ್ಯತ್ಯಾಸಗಳಿರುವುದು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೌನ್ಸೆಲಿಂಗ್ ಕೋರ್ಸ್‌ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಾಗ ಕೌನ್ಸೆಲಿಂಗ್ ದತ್ತಾಂಶವನ್ನು ನಮೂದಿಸದಿರುವುದು ಮತ್ತು ವಿವಿಧ ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳ ಹಿಂದಿನ ವರ್ಷದ ಶೈಕ್ಷಣಿಕ ಮಾಹಿತಿಯನ್ನು ತಂತ್ರಾಂಶದೊಂದಿಗೆ ಹಂಚಿಕೊಳ್ಳದಿರುವುದು ವಿದ್ಯಾರ್ಥಿ ವೇತನ ಹಾಗೂ ಶುಲ್ಕ ಮರುಪಾವತಿ ಪ್ರಕ್ರಿಯೆಗೆ ಹಿನ್ನಡೆಯನ್ನುಂಟು ಮಾಡಿದೆ.

ಈ ಸುದ್ದಿ ಓದಿದ್ದೀರಾ ? ಹೊನ್ನಾವರ | ಇಡಗುಂಜಿ ಮಹಾಗಣಪತಿ ಸನ್ನಿಧಿಯಲ್ಲಿ ಅರ್ಚಕರ ಕಾಳಗ: ದಕ್ಷಿಣೆ ಹಣಕ್ಕಾಗಿ ಭಕ್ತರ ಮುಂದೆಯೇ ತಳ್ಳಾಟ!

ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ವಿದ್ಯಾರ್ಥಿ ಲಾಗಿನ್‌ನಲ್ಲಿ ಹಾಗೂ ಆಯಾ ತಾಲೂಕು ಅಥವಾ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಲಾಗಿನ್‌ನಲ್ಲಿ ಮಾಹಿತಿ ಅಪ್‌ಡೇಟ್ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ತಕ್ಷಣವೇ ಲಾಗಿನ್ ಆಗಿ ತಮ್ಮ ದತ್ತಾಂಶಗಳನ್ನು ಸರಿಪಡಿಸಿಕೊಳ್ಳಬೇಕೆಂದು ಸೂಚಿಸಲಾಗಿದೆ. ನಿಗದಿತ ದಿನಾಂಕವಾದ ಜನವರಿ 30ರ ಒಳಗಾಗಿ ಮಾಹಿತಿಯನ್ನು ಅಪ್‌ಡೇಟ್ ಮಾಡದಿದ್ದಲ್ಲಿ, ಅಂತಹ ವಿದ್ಯಾರ್ಥಿಗಳ ಅರ್ಜಿಗಳನ್ನು ಅನಿವಾರ್ಯವಾಗಿ ತಿರಸ್ಕರಿಸಲಾಗುವುದು ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಆದ್ದರಿಂದ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಥವಾ ಗೊಂದಲಗಳ ನಿವಾರಣೆಗಾಗಿ ಕಚೇರಿ ವೇಳೆಯಲ್ಲಿ ದೂರವಾಣಿ ಸಂಖ್ಯೆ 08382-226589 ಅನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...